ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನ ಮೇಲೆ ಭರ್ಜರಿ ರಿಯಾಯಿತಿ
ಅಮೆರಿಕಾದ ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆಯಾದ ಹಾರ್ಲೆ ಡೇವಿಡ್ಸನ್ ತನ್ನ ಬಿಎಸ್-6 ಸ್ಟ್ರೀಟ್ ರಾಡ್ ಬೈಕಿನ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿಗೆ ಬರೊಬ್ಬರಿ ರೂ.55,500 ಗಳವರೆಗೆ ನಗದು ರಿಯಾಯಿತಿಯನ್ನು ಘೋಷಿಸಿದೆ.

ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನ ಪ್ರಾರಂಭಿಕ ಬೆಲೆಯು ರೂ.6,55,500 ಗಳಾಗಿದೆ. ಇದೀಗ ಭರ್ಜರಿ ರಿಯಾಯಿತಿಯ ಬಳಿಕ ಈ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನ ಬೆಲೆಯು 5,99,999 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನಲ್ಲಿ 749 ಸಿಸಿ ವಿ ಟ್ವಿನ್ ಲಿಕ್ವಿಡ್ ಕೂಲ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಈ ಎಂಜಿನ್ 3,750 ಆರ್‌ಪಿಎಂನಲ್ಲಿ 65 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ಗೆ ಆರು ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಹೊಸ ಸ್ಟ್ರೀಟ್ ರಾಡ್ ಬೈಕಿನಲ್ಲಿ ವಿಶಾಲವಾದ ಹ್ಯಾಂಡಲ್‌ಬಾರ್, ಟಿಯರ್-ಡ್ರಾಪ್ ಆಕಾರದ ಉದ್ದವಾದ ಫ್ಯೂಯಲ್ ಟ್ಯಾಂಕ್, ದೈತ್ಯ ರೇಡಿಯೇಟರ್, ದುಂಡಗಿನ ಆಕಾರದ ಎಲ್ಇಡಿ ಹೆಡ್‌ಲ್ಯಾಂಪ್, ಟೈಲ್-ಲ್ಯಾಂಪ್ ಮತ್ತು ಟರ್ನ್ ಇಂಡಿಕೇಟರ್ಸ್ ಅನ್ನು ಹೊಂದಿದೆ.

ಇನ್ನು ಈ ಹೊಸ ಹಾರ್ಲೆ ಡೇವಿಡ್ಸನ್ ಬೈಕಿನಲ್ಲಿ ಲಾಂಗ್ ಎಕ್ಸಾಸ್ಟ್, ಫ್ರಂಟ್-ಸೀಟ್ ಫುಟ್‌ಪೆಗ್ಸ್ ಮತ್ತು ಉತ್ತಮವಾದ ಮೆತ್ತನೆಯ ರೈಡರ್ ಮತ್ತು ಪಿಲಿಯನ್ ಸೀಟುಗಳನ್ನು ಒಳಗೊಂಡಿದೆ . ಇದರಿಂದ ಈ ಬೈಕ್ ಅನ್ನು ಆರಾಮದಾಯಕವಾಗಿ ರೈಡ್ ಮಾಡಬಹುದು.
MOST READ: ಬಿಡುಗಡೆಯಾಯ್ತು ದುಬಾರಿ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್

ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ ಬೈಕಿನ ಮುಂಭಾಗದಲ್ಲಿ ಯುಎಸ್ಡಿ ಫೋರ್ಕ್ ಗಳು ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ರಿಯರ್ ಸಂಸ್ಪೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಬ್ರೇಕಿಂಗ್ ಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ನೊಂದಿಗೆ ಎರಡೂ ತುದಿಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಇನ್ನು ಹಾರ್ಲೆ ಡೇವಿಡ್ಸನ್ ತನ್ನ ಪ್ಯಾನ್ ಅಮೇರಿಕಾ ಅಡ್ವೆಂಚರ್ ಟೂರರ್ ಮತ್ತು ಬ್ರಾಂಕ್ಸ್ ಸ್ಟ್ರೀಟ್‌ಫೈಟರ್ ಅನ್ನು ಈಗ ತಮ್ಮ ಅಧಿಕೃತ ವೆಬ್‌ಸೈಟ್‌ನ 'ಫ್ಯೂಚರ್ ವೆಹಿಕಲ್ಸ್' ವಿಭಾಗದಲ್ಲಿ 2021 ರಲ್ಲಿ ಬರುವಂತೆ ಪಟ್ಟಿ ಮಾಡಲಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎರಡು ಹೊಸ ಬೈಕುಗಳ ಬಿಡುಗಡೆಯ ದಿನಾಂಕದ ಬಗ್ಗೆ ಹಾರ್ಲೆ ಡೇವಿಡ್ಸನ್ ಕಂಪನಿಯು ಯಾವುದೇ ಮಾಹಿತಿಯನ್ನು ನೀಡಿಲ್ಲ. ಫ್ಯೂಚರ್ ವೆಹಿಕಲ್ಸ್ ಪಟ್ಟಿಯಲ್ಲಿ ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿರುವ ಬೈಕುಗಳು ಒಳಗೊಂಡಿದೆ.

ಹಾರ್ಲೆ ಡೇವಿಡ್ಸನ್ ಬ್ರ್ಯಾಂಡ್ ನ ಇತಿಹಾಸದಲ್ಲಿ ದೊಡ್ಡ ಕುಸಿತವನ್ನು ಈಗ ಎದುರಿಸುತ್ತಿದೆ. ಇದರಿಂದಾಗಿ ಗ್ರಾಹಕರನ್ನು ಸೆಳೆಯಲು ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಅಲ್ಲದೇ ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲು ಮುಂದಾಗಿದೆ.


Click it and Unblock the Notifications








