ಲಾಕ್‌ಡೌನ್ ನಂತರ ಬದಲಾಗಲಿದೆ ಪ್ರಯಾಣ ವಿಧಾನ, ಭಾರಿ ನಿರೀಕ್ಷೆಯಲ್ಲಿ ಹೀರೋ ಎಲೆಕ್ಟ್ರಿಕ್
ಭಾರತದಲ್ಲಿ ಲಾಕ್‌ಡೌನ್ ಮುಗಿದ ನಂತರ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಾಗಬಹುದೆಂದು ಹೀರೋ ಎಲೆಕ್ಟ್ರಿಕ್ ಕಂಪನಿಯು ಹೇಳಿದೆ. ಲಾಕ್‌ಡೌನ್ ಮುಗಿದ ನಂತರ ಜನರು ಪರಿಸರದ ಬಗ್ಗೆ ಹೆಚ್ಚು ಕಾಳಜಿಯನ್ನು ಹೊಂದಲಿದ್ದಾರೆ.

ಈ ಕಾರಣಕ್ಕೆ ಜನರು ಹೆಚ್ಕಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಿದ್ದಾರೆ ಎಂದು ಕಂಪನಿಯು ಹೇಳಿದೆ. 2021ರ ಅಂತ್ಯದ ವೇಳೆಗೆ 40 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.

ವಾರ್ಷಿಕ ಬೆಳವಣಿಗೆಯ ದರದ ಪ್ರಕಾರ, ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ 22%ನಷ್ಟು ಬೆಳೆಯುತ್ತದೆ. 2020ರ ಅಂತ್ಯದ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 3,42,000 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಲಿವೆ. ಲಾಕ್‌ಡೌನ್ ನಮ್ಮ ಸಾರಿಗೆ ವಿಧಾನವನ್ನು ಬದಲಾಯಿಸುತ್ತದೆ ಎಂದು ಹೀರೋ ಎಲೆಕ್ಟ್ರಿಕ್ ಕಂಪನಿ ಹೇಳಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ನಾವು ಈಗ ಹೆಚ್ಚು ಸುರಕ್ಷಿತವಾದ ಹಾಗೂ ಸ್ವಚ್ವವಾದ ಸಾರಿಗೆ ಕ್ರಮಗಳ ಬಗ್ಗೆ ತಿಳಿದಿರುತ್ತೇವೆ.ಲಾಕ್‌ಡೌನ್‌ನಿಂದಾಗಿ ನವದೆಹಲಿಯಲ್ಲಿನ ವಾಯುಮಾಲಿನ್ಯ ಪ್ರಮಾಣವು 60%ನಷ್ಟು ಕುಸಿತ ಕಂಡಿದೆ. ಲಾಕ್‌ಡೌನ್ ಸ್ಮಾರ್ಟ್ ಹಾಗೂ ಸುಸ್ಥಿರ ವಾಹನಗಳನ್ನು ಅಳವಡಿಸಿಕೊಳ್ಳುವ ಅವಕಾಶವನ್ನು ಒದಗಿಸಿದೆ.

ಲಾಕ್‌ಡೌನ್ ಅವಧಿಯಲ್ಲಿ ಪರಿಸರಕ್ಕೆ ಆಗಿರುವ ಹಾನಿಯ ಬಗ್ಗೆ ಭಾರತೀಯರಿಗೆ ತಿಳಿದು ಬಂದಿದೆ. ಲಾಕ್‌ಡೌನ್ ವೇಳೆಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಿರುವುದನ್ನು ಭಾರತೀಯರು ಗಮನಿಸಿದ್ದಾರೆ. ಕರೋನಾ ವೈರಸ್ ಸಾಂಕ್ರಾಮಿಕ ರೋಗವು ಭಾರತೀಯರ ಪ್ರಯಾಣ ವಿಧಾನವನ್ನೇ ಬದಲಾಯಿಸುವ ಸಾಧ್ಯತೆಗಳಿವೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಕರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಇನ್ನು ಮುಂದೆ ಭಾರತೀಯರು ಖಾಸಗಿ ವಾಹನಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಇದರಿಂದ ಎಲೆಕ್ಟ್ರಿಕ್ ಬೈಕ್, ಸ್ಕೂಟರ್ ಹಾಗೂ ಕಾರುಗಳಿಗೆ ಬೇಡಿಕೆ ಹೆಚ್ಚಾಗಲಿದೆ. ಎಲೆಕ್ಟ್ರಿಕ್ ವಾಹನಗಳ ನಿರ್ವಹಣೆ ಕಡಿಮೆಯಾಗಿರುವ ಕಾರಣಕ್ಕೆ ಹಾಗೂ ಇಂಧನ ವೆಚ್ಚ ಉಳಿತಾಯವಾಗುವ ಕಾರಣಕ್ಕೆ ಜನರು ಇವುಗಳನ್ನು ಇಷ್ಟಪಡಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹೀರೋ ಎಲೆಕ್ಟ್ರಿಕ್ ಸಿಇಒ ಸೊಹಿಂದರ್ ಗಿಲ್ ಹಾರ್ವರ್ಡ್ ವರದಿಗಳ ಪ್ರಕಾರ ಡೀಸೆಲ್ ಪೆಟ್ರೋಲ್ ವಾಹನಗಳಿಂದ ಪರಿಸರವು ಹೆಚ್ಚು ಕಲುಷಿತವಾಗುತ್ತದೆ ಎಂದು ಹೇಳಿದ್ದಾರೆ. ಹೀರೋ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ 40ರಿಂದ 70 ಸಾವಿರ ರೂಪಾಯಿಗಳಾಗಿದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಭಾರತದ ಆಟೋ ಮೊಬೈಲ್ ಉದ್ಯಮವು ಸಹಜ ಸ್ಥಿತಿಗೆ ಮರಳಲು ಹಲವಾರು ತಿಂಗಳುಗಳು ಬೇಕಾಗುತ್ತವೆ. ಭಾರತೀಯ ವಾಹನ ಕ್ಷೇತ್ರದಲ್ಲಿ ಹಲವಾರು ಸವಾಲುಗಳಿದ್ದು, ಹೀರೋ ಎಲೆಕ್ಟ್ರಿಕ್ ಈ ಸಂದರ್ಭವನ್ನು ಹೇಗೆ ಬಳಸಿಕೊಳ್ಳುತ್ತದೆ ಕಾದು ನೋಡಬೇಕಿದೆ.

ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಸುಲಭಗೊಳಿಸಲು ಹೀರೋ ಎಲೆಕ್ಟ್ರಿಕ್ ತನ್ನ ಸಂಪೂರ್ಣ ಶ್ರೇಣಿಯನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುವುದಾಗಿ ಘೋಷಿಸಿದೆ. ಲಾಕ್‌ಡೌನ್ ಮುಕ್ತಾಯಗೊಂಡ ನಂತರ ಕಂಪನಿಯು ಆಕರ್ಷಕ ಗ್ರಾಹಕ ಯೋಜನೆ ಹಾಗೂ ಸ್ಕೂಟರ್‌ಗಳಿಗೆ ರಿಯಾಯಿತಿಯನ್ನು ಘೋಷಿಸಲಿದೆ.


Click it and Unblock the Notifications








