ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್
ಹೀರೊ ಎಲೆಕ್ಟ್ರಿಕ್ ಭಾರತದ ಅತಿದೊಡ್ಡ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಯಾಗಿದೆ. ಇತ್ತೀಚಿಗಷ್ಟೇ ಹೀರೊ ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರಿನ ಟೀಸರ್ ಅನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿತ್ತು.

ವರದಿಗಳ ಪ್ರಕಾರ, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗುವುದು. ಟೀಸರ್‍ಗಳ ಪ್ರಕಾರ ಈ ಸ್ಕೂಟರ್ ಸ್ಪೋರ್ಟಿ ಎಲೆಕ್ಟ್ರಿಕ್ ಸ್ಕೂಟರ್ ಆಗಿರಲಿದೆ. ಇದರ ಜೊತೆಗೆ ಈ ಎಲೆಕ್ಟ್ರಿಕ್ ಸ್ಕೂಟರ್‍ನಲ್ಲಿ ಎಲ್‍ಇಡಿ ಹೆಡ್‍ಲೈಟ್ ಹಾಗೂ ಎಲ್‍ಇಡಿ ಡಿಆರ್‍ಎಲ್‍ಗಳನ್ನು ನೀಡಲಾಗುವುದು.

ಈ ಸ್ಕೂಟರಿನಲ್ಲಿರುವ ಫೀಚರ್‍ಗಳ ಬಗ್ಗೆ ಹೆಚ್ಚು ಮಾಹಿತಿಯನ್ನು ನೀಡದೇ ಇದ್ದರೂ, ಈ ಎಲೆಕ್ಟ್ರಿಕ್ ಸ್ಕೂಟರ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ನ್ಯಾವಿಗೇಶನ್, ಸ್ಮಾರ್ಟ್ ಕನೆಕ್ಟ್ ಗಳನ್ನು ಹೊಂದಿರುವ ಸಾಧ್ಯತೆಗಳಿವೆ.

ಹೀರೊ ಎಲೆಕ್ಟ್ರಿಕ್ ಸ್ಕೂಟರ್ ಬದಲಿಸಬಹುದಾದ ಬ್ಯಾಟರಿ ಹಾಗೂ ಫಾಸ್ಟ್ ಚಾರ್ಜರ್‍ಗಳನ್ನು ಹೊಂದಿರಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಪರ್ಫಾಮೆನ್ಸ್ ಆಗಿರಲಿದ್ದು, ಟಾಪ್ ಸ್ಪೀಡ್ 100 ಕಿ.ಮೀ ಹಾಗೂ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 100 - 120 ಕಿ.ಮೀಗಳವರೆಗೆ ಚಲಿಸಲಿದೆ.

ಹೀರೊ ಎಲೆಕ್ಟ್ರಿಕ್ ಬೈಕ್ ಅನ್ನು ಇತ್ತೀಚಿಗೆ ಸ್ಪಾಟ್ ಟೆಸ್ಟ್ ಮಾಡಲಾಗಿತ್ತು. ಸ್ಪಾಟ್ ಟೆಸ್ಟ್ ಮಾಡುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದವು. ಈ ಎಲೆಕ್ಟ್ರಿಕ್ ಬೈಕ್ ಅನ್ನು ಸಹ ದೆಹಲಿಯಲ್ಲಿ ನಡೆಯಲಿರುವ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗುವುದು.

ಹೀರೊ ಸದ್ಯಕ್ಕೆ ಎಲೆಕ್ಟ್ರಿಕ್ ಸ್ಕೂಟರ್‍ಗಳನ್ನು ಎಂಟ್ರಿ ಲೆವೆಲ್ ಸೆಗ್‍ಮೆಂಟ್‍ನಲ್ಲಿ ಅಭಿವೃದ್ಧಿಪಡಿಸುತ್ತಿದೆ. ಅಭಿವೃದ್ಧಿ ಪಡಿಸಲಾಗುತ್ತಿರುವ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬೈಕ್‍ಗಳನ್ನು ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು.

ಹೀರೊ ಎಲೆಕ್ಟ್ರಿಕ್ ಬೈಕಿನ ವಿನ್ಯಾಸವನ್ನು ಗಮನಿಸಿದರೆ ಈ ಬೈಕ್ 150 ಸಿಸಿಯಿಂದ 200 ಸಿಸಿಯವರೆಗೆ ಇರಲಿದೆ. ಈ ಎಲೆಕ್ಟ್ರಿಕ್ ಬೈಕಿನ ರೈಡಿಂಗ್ ಪೊಸಿಷನ್ ಸ್ಪೋರ್ಟಿಯಾಗಿದ್ದು, ಅಗ್ರೆಸಿವ್ ವಿನ್ಯಾಸವನ್ನು ಹೊಂದಿದೆ.

ಈ ಎಲೆಕ್ಟ್ರಿಕ್ ಬೈಕಿನ ಮುಂಭಾಗದಲ್ಲಿ ಅಪ್‍ಸೈಡ್ ಡೌನ್ ಟೆಲಿಸ್ಕೋಪಿಕ್ ಸಸ್ಪೆಂಷನ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಅಳವಡಿಸಲಾಗಿದೆ. ಈ ಬೈಕಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್‍ಗಳಿವೆ. ಈ ಬೈಕಿನ ಬಗೆಗಿನ ಹೆಚ್ಚಿನ ಮಾಹಿತಿಗಳು ಆಟೋ ಎಕ್ಸ್ ಪೋದಲ್ಲಿ ತಿಳಿದು ಬರಲಿವೆ.


Click it and Unblock the Notifications








