ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಹೀರೊ ಎಲೆಕ್ಟ್ರಿಕ್ ಭಾರತದ ಅತಿದೊಡ್ಡ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿಯಾಗಿದೆ. ಇತ್ತೀಚಿಗಷ್ಟೇ ಹೀರೊ ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರಿನ ಟೀಸರ್ ಅನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿತ್ತು.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ವರದಿಗಳ ಪ್ರಕಾರ, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗುವುದು. ಟೀಸರ್‍‍ಗಳ ಪ್ರಕಾರ ಈ ಸ್ಕೂಟರ್ ಸ್ಪೋರ್ಟಿ ಎಲೆಕ್ಟ್ರಿಕ್ ಸ್ಕೂಟರ್ ಆಗಿರಲಿದೆ. ಇದರ ಜೊತೆಗೆ ಈ ಎಲೆಕ್ಟ್ರಿಕ್ ಸ್ಕೂಟರ್‍‍ನಲ್ಲಿ ಎಲ್‍ಇ‍‍ಡಿ ಹೆಡ್‍‍‍ಲೈಟ್ ಹಾಗೂ ಎಲ್‍ಇ‍‍ಡಿ ಡಿ‍ಆರ್‍ಎಲ್‍‍ಗಳನ್ನು ನೀಡಲಾಗುವುದು.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಈ ಸ್ಕೂಟರಿನಲ್ಲಿರುವ ಫೀಚರ್‍‍ಗಳ ಬಗ್ಗೆ ಹೆಚ್ಚು ಮಾಹಿತಿಯನ್ನು ನೀಡದೇ ಇದ್ದರೂ, ಈ ಎಲೆಕ್ಟ್ರಿಕ್ ಸ್ಕೂಟರ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ನ್ಯಾವಿಗೇಶನ್, ಸ್ಮಾರ್ಟ್ ಕನೆಕ್ಟ್ ಗಳನ್ನು ಹೊಂದಿರುವ ಸಾಧ್ಯತೆಗಳಿವೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಹೀರೊ ಎಲೆಕ್ಟ್ರಿಕ್ ಸ್ಕೂಟರ್ ಬದಲಿಸಬಹುದಾದ ಬ್ಯಾಟರಿ ಹಾಗೂ ಫಾಸ್ಟ್ ಚಾರ್ಜರ್‍‍‍‍ಗಳನ್ನು ಹೊಂದಿರಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಪರ್ಫಾಮೆನ್ಸ್ ಆಗಿರಲಿದ್ದು, ಟಾಪ್ ಸ್ಪೀಡ್ 100 ಕಿ.ಮೀ ಹಾಗೂ ಬ್ಯಾಟರಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ 100 - 120 ಕಿ.ಮೀಗಳವರೆಗೆ ಚಲಿಸಲಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಹೀರೊ ಎಲೆಕ್ಟ್ರಿಕ್ ಬೈಕ್ ಅನ್ನು ಇತ್ತೀಚಿಗೆ ಸ್ಪಾಟ್ ಟೆಸ್ಟ್ ಮಾಡಲಾಗಿತ್ತು. ಸ್ಪಾಟ್ ಟೆಸ್ಟ್ ಮಾಡುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದವು. ಈ ಎಲೆಕ್ಟ್ರಿಕ್ ಬೈಕ್ ಅನ್ನು ಸಹ ದೆಹಲಿಯಲ್ಲಿ ನಡೆಯಲಿರುವ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗುವುದು.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಹೀರೊ ಸದ್ಯಕ್ಕೆ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಎಂಟ್ರಿ ಲೆವೆಲ್ ಸೆಗ್‍‍ಮೆಂಟ್‍‍ನಲ್ಲಿ ಅಭಿವೃದ್ಧಿಪಡಿಸುತ್ತಿದೆ. ಅಭಿವೃದ್ಧಿ ಪಡಿಸಲಾಗುತ್ತಿರುವ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಬೈಕ್‍‍ಗಳನ್ನು ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಹೀರೊ ಎಲೆಕ್ಟ್ರಿಕ್ ಬೈಕಿನ ವಿನ್ಯಾಸವನ್ನು ಗಮನಿಸಿದರೆ ಈ ಬೈಕ್ 150 ಸಿಸಿಯಿಂದ 200 ಸಿಸಿಯವರೆಗೆ ಇರಲಿದೆ. ಈ ಎಲೆಕ್ಟ್ರಿಕ್ ಬೈಕಿನ ರೈಡಿಂಗ್ ಪೊಸಿಷನ್ ಸ್ಪೋರ್ಟಿಯಾಗಿದ್ದು, ಅಗ್ರೆಸಿವ್ ವಿನ್ಯಾಸವನ್ನು ಹೊಂದಿದೆ.

ಆಟೋ ಎಕ್ಸ್‌ಪೋ 2020: ಅನಾವರಣಗೊಳ್ಳಲಿದೆ ಹೀರೊ ಎಲೆಕ್ಟ್ರಿಕ್ ಸ್ಕೂಟರ್

ಈ ಎಲೆಕ್ಟ್ರಿಕ್ ಬೈಕಿನ ಮುಂಭಾಗದಲ್ಲಿ ಅಪ್‍‍ಸೈಡ್ ಡೌನ್ ಟೆಲಿಸ್ಕೋಪಿಕ್ ಸಸ್ಪೆಂಷನ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಅಳವಡಿಸಲಾಗಿದೆ. ಈ ಬೈಕಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್‍‍ಗಳಿವೆ. ಈ ಬೈಕಿನ ಬಗೆಗಿನ ಹೆಚ್ಚಿನ ಮಾಹಿತಿಗಳು ಆಟೋ ಎಕ್ಸ್ ಪೋದಲ್ಲಿ ತಿಳಿದು ಬರಲಿವೆ.

Most Read Articles

Kannada
English summary
Hero Electric scooter to be unveiled at Auto Expo. Read in Kannada.
Story first published: Monday, February 3, 2020, 18:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X