ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಜನಪ್ರಿಯ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ 2020ರ ಜುನ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಹೀರೋ ಕಂಪನಿಯು ಈ ಹೊಸ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ಘೋಷಿಸಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹಬ್ಬದ ಸೀಸನ್‌ನಲ್ಲಿ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಹೀರೋ ಮೋಟೊಕಾರ್ಪ್ ತನ್ನ ಬಹುಬೇಡಿಕೆಯ ಮತ್ತು ಜನಪ್ರಿಯ ಬೈಕಿನ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದೆ. ವರದಿ ಪ್ರಕಾರ, ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ರೂ.2,000 ಗಳವರೆಗೆ ಕಾರ್ಪೊರೇಟ್ ರಿಯಾಯಿತಿ ಜೊತೆಗೆ ರೂ.3,000 ಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.ಲಾಯಲ್ಟಿ ಬೋನಸ್ ಅನ್ನು ಘೋಷಿಸಿದೆ. ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಒಟ್ಟು ರೂ.9,000 ರಿಯಾಯಿತಿಯನ್ನು ಪಡೆದುಕೊಳ್ಳಬಹುದು.

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಗ್ರಾಹಕರು ಐಸಿಐಸಿಐ ಕ್ರೆಡಿಟ್/ಡೆಬಿಟ್ ಕಾರ್ಡ್ ಬಳಸಿದರೆ ರೂ.5,000ಗಳವರೆಗೆ ಕ್ಯಾಶ್‌ಬ್ಯಾಕ್ ಪಡೆಯಬಹುದು. ಪೇಟಿಎಂ ಮೂಲಕ ಪಾವತಿ ಮಾಡಲು ಬಯಸಿದರೆ ನೀವು ರೂ.7,500ಗಳವರೆಗೆ ಕ್ಯಾಶ್‌ಬ್ಯಾಕ್ ಪಡೆಯಬಹುದು.

MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೀರೋ ಮೋಟೊಕಾರ್ಪ್ ಘೋಷಿಸಿದ ಈ ಭರ್ಜರಿ ಆಫರ್ ಗಳಿಗೆ ವಿವಿಧ ನಿಯಮಗಳು ಮತ್ತು ಷರತ್ತುಗಳು ಕೂಡ ಇವೆ. ಹೊಸ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಆಫರ್ 2020 ನವೆಂಬರ್ 17ರವರೆಗೆ ಲಭ್ಯವಿರುತ್ತದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ಫ್ರಂಟ್ ಡಿಸ್ಕ್ ಮತ್ತು ಡಬಲ್ ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಲಬ್ಯವಿದೆ. ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಆರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.02 ಲಕ್ಷಗಳಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್‌ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ದೀಪಾವಳಿ ಸಂಭ್ರಮ: ಜನಪ್ರಿಯ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಮೇಲೆ ಭರ್ಜರಿ ಡಿಸ್ಕೌಂಟ್

ಈ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, October 30, 2020, 9:21 [IST]
English summary
Hero MotoCorp Announces Festive Offers On Xtreme 160R. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+