ಹೀರೋ ಬೈಕ್ ಮಾರಾಟ ಪುನಾರಂಭ- ಎರಡು ದಿನಗಳಲ್ಲಿ 10 ಸಾವಿರ ಬೈಕ್ ಮಾರಾಟ..!
ದೇಶದ ಅತಿದೊಡ್ಡ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಬೈಕ್ ಮಾರಾಟ ಮತ್ತು ಉತ್ಪಾದನೆಗೆ ಮರುಚಾಲನೆ ನೀಡಿದ್ದು, ಬೈಕ್ ಪುನಾರಂಭಿಸಿದ ಎರಡೇ ದಿನಗಳಲ್ಲಿ ಭರ್ಜರಿ ಪ್ರಮಾಣದ ಬೈಕ್ ವಿತರಣೆ ಮಾಡಿದೆ.

ಲಾಕ್‌ಡೌನ್‌ಗೂ ಮುನ್ನ ಬುಕ್ಕಿಂಗ್ ಮಾಡಿದ್ದ ಗ್ರಾಹಕರಿಗೆ ಮೊದಲು ಹೊಸ ಬೈಕ್ ವಿತರಣೆಗೆ ಕ್ರಮಕೈಗೊಂಡಿರುವ ಹೀರೋ ಕಂಪನಿಯು ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಗ್ರಾಹಕರ ಮನೆ ಬಾಗಿಲಿಗೆ ಬೈಕ್ ಉತ್ಪನ್ನಗಳನ್ನು ವಿತರಣೆ ಮಾಡುತ್ತಿದ್ದು, ಅಧಿಕೃತ ಮಾರಾಟ ಮಳಿಗೆಗಳು ಆರಂಭವಾಗ ಎರಡೇ ದಿನಗಳಲ್ಲಿ ಬರೋಬ್ಬರಿ 10 ಸಾವಿರ ಬೈಕ್‌ಗಳನ್ನು ವಿತರಿಸಿದೆ.

ಲಾಕ್‌ಡೌನ್‌ಗೂ ಮೊದಲು ಸುಮಾರು 2 ಲಕ್ಷಕ್ಕೂ ಅಧಿಕ ಬುಕ್ಕಿಂಗ್‌ಗಳನ್ನು ಪಡೆದುಕೊಂಡಿದ್ದ ಹೀರೋ ಕಂಪನಿಯು ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನು ಹೆಚ್ಚಿಸಿದ್ದು, ವೈರಸ್ ಹರಡದಂತೆ ಪ್ರತಿ ಹಂತದಲ್ಲೂ ಮುನ್ನಚ್ಚೆರಿಕೆ ಕ್ರಮಗಳನ್ನು ಜಾರಿಗೆ ತಂದಿದೆ.

ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿದ್ದು, ದ್ವಿಚಕ್ರ ವಾಹನಗಳಿಂತ ಕಾರು ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿವೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಜೊತೆಗೆ ಲಾಕ್‌ಡೌನ್‌ಗೂ ಮೊದಲ ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.

ಸದ್ಯಕ್ಕೆ ವಾಹನ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಿರುವ ಬಹುತೇಕ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುತ್ತಿದ್ದು, ಲಾಕ್‌ಡೌನ್ ನಂತರ ವಾಹನ ಮಾರಾಟ ಯೋಜನೆಯಲ್ಲಿದ್ದ ಆಟೋ ಕಂಪನಿಗಳಿಗೆ ಗ್ರಾಹಕರು ಬುಕ್ಕಿಂಗ್ ಹಣ ವಾಪಸ್ ಪಡೆದುಕೊಳ್ಳುವ ಮೂಲಕ ಮತ್ತೊಂದು ಶಾಕ್ ನೀಡಿದ್ದಾರೆ.
MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..

ಲಾಕ್‌ಡೌನ್‌ಗೂ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಇದೀಗ ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಇದು ಆಟೋ ಕಂಪನಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ.


Click it and Unblock the Notifications








