ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಲಾಕ್ ಡೌನ್ ಪ್ರಕ್ರಿಯೆಯನ್ನು ಮೇ 3ರ ತನಕ ವಿಸ್ತರಣೆ ಮಾಡಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿಯತ್ತ ತಲುಪಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ. ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಹೀರೋ ಸಮೂಹ ಸಂಸ್ಥೆಗಳು ಕೂಡಾ ಒಟ್ಟು ರೂ. 100 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ಹಣಕಾಸು ಸಹಾಯದೊಂದಿಗೆ ವೈದ್ಯಕೀಯ ಉಪಕರಣಗಳನ್ನು ಸಹ ನೀಡುವುದಾಗಿ ಘೋಷಣೆ ಮಾಡಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಜೊತೆಗೆ ಪ್ರಥಮ ಹಂತದಲ್ಲಿ 60 ಬೈಕ್ ಆ್ಯಂಬುಲೆನ್ಸ್‌ಗಳನ್ನು ಸಹ ದೇಣಿಯಾಗಿ ನೀಡಿರುವ ಹೀರೋ ಮೋಟೋಕಾರ್ಪ್ ಸಂಸ್ಥೆಯು ಗ್ರಾಮಿಣ ಭಾಗದಲ್ಲಿ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ತುಲುಪಿಸಲು ಸಹಕಾರಿಯಾಗುವಂತೆ ಮೊಬೈಲ್ ಆ್ಯಂಬುಲೆನ್ಸ್‌ಗಳನ್ನು ಸಿದ್ದಪಡಿಸಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

150ಸಿಸಿ ಮೇಲ್ಪಟ್ಟ ಬೈಕ್ ಮಾದರಿಗಳಲ್ಲಿ ಮೊಬೈಲ್ ಆ್ಯಂಬುಲೆನ್ಸ್ ಸೌಲಭ್ಯವನ್ನು ಅಳವಡಿಕೆ ಮಾಡಿರುವ ಹೀರೋ ಕಂಪನಿಯು ಅಗತ್ಯವಿರುವ ಎಲ್ಲಾ ತುರ್ತು ಉಪಕರಣಗಳನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಿದ್ದು, ಇದರಲ್ಲಿ ರೋಗಿಯು ಮಲಗಿಕೊಳ್ಳಲು ಸಣ್ಣದಾದ ಬೆಡ್, ಆ್ಯಕ್ಸಿಜನ್ ಸಿಲಿಂಡರ್, ಪ್ರಥಮ ಚಿಕಿತ್ಸಾ ಕಿಟ್ ಮತ್ತು ಅಗ್ನಿಶಾಮಕ ಮತ್ತು ಸೈರನ್ ಸೇರಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಹೀರೋ ಸಂಸ್ಥೆಯು ಘೋಷಣೆ ಮಾಡಿರುವ ಒಟ್ಟು ರೂ.100 ಕೋಟಿ ದೇಣಿಗೆ ಹಣದಲ್ಲಿ ರೂ.50 ಹಣವನ್ನು ಈಗಾಗಲೇ ಪ್ರಧಾನಮಂತ್ರಿಗಳ ತುರ್ತು ಪರಿಹಾರ ನಿಧಿಗೆ ವರ್ಗಾವಣೆ ಮಾಡಲಾಗಿದ್ದು, ಇನ್ನುಳಿದ ರೂ.50 ಕೋಟಿ ಹಣದಲ್ಲಿ ತುರ್ತು ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮತ್ತು ಖರೀದಿ ಮಾಡಿ ಅಗತ್ಯ ಆರೋಗ್ಯ ಕೇಂದ್ರಗಳಲ್ಲಿ ಹಸ್ತಾಂತರ ಮಾಡುವುದಾಗಿ ಒಪ್ಪಿಗೆ ಸೂಚಿಸಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಇದೀಗ ಮೊದಲ ಹಂತವಾಗಿ 60 ಮೊಬೈಲ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ವೈದ್ಯಕೀಯ ಉಪಕರಣಗಳನ್ನು ಅಗತ್ಯವಿರುವ ರಾಜ್ಯಗಳಿಗೆ ರವಾನಿಸಲಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಇನ್ನು ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಬಜಾಜ್ ಗ್ರೂಪ್ ಕಂಪನಿಯು ಸಹ ರೂ. 100 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ಹಣದ ಬದಲು ವೈದ್ಯಕೀಯ ಉಪಕರಣಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಸುಮಾರು 200ಕ್ಕೂ ಹೆಚ್ಚು ಎನ್‌ಜಿಓ ಸಂಸ್ಥೆಗಳ ಮೂಲಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಬಜಾಜ್ ಕಂಪನಿಯು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ 60 ಬೈಕ್ ಆ್ಯಂಬುಲೆನ್ಸ್ ದೇಣಿಗೆ ನೀಡಿದ ಹೀರೋ

ಹೀರೋ ಮತ್ತು ಬಜಾಜ್ ಮಾತ್ರವಲ್ಲದೇ ಪ್ರಮುಖ ಆಟೋ ಕಂಪನಿಗಳು ವಿವಿಧ ಮಾದರಿಯ ನೆರವು ಘೋಷಣೆ ಮಾಡಿದ್ದು, ವಾಹನ ಉತ್ಪಾದನೆ ಇಲ್ಲದ ಕಾರಣ ಸದ್ಯ ಕೊರತೆ ಇರುವ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಹೆಚ್ಚಿನ ಆದ್ಯತೆ ನೀಡಿವೆ.

Most Read Articles

Kannada
English summary
Coronavirus Pandemic: Hero MotoCorp Donates 60 First-Responder Mobile Ambulance Across India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X