ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ದೇಶದ ಅತಿದೊಡ್ಡ ಬೈಕ್ ಉತ್ಪಾದನಾ ಸಂಸ್ಥೆಯಾಗಿರುವ ಹೀರೋ ಮೋಟೊಕಾರ್ಪ್ ತನ್ನ ಬಿಎಸ್-6 ಡೆಸ್ಟಿನಿ 125 ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಹೀರೋ ಮೋಟೊಕಾರ್ಪ್ ಕಂಪನಿಯು ಈ ಬಿಎಸ್-6 ಡೆಸ್ಟಿನಿ 125 ಸ್ಕೂಟರ್ ಬೆಲೆಯನ್ನು ಎರಡನೇ ಬಾರಿ ಹೆಚ್ಚಿಸಿದೆ.

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಬಿಎಸ್-6 ಡೆಸ್ಟಿನಿ ಸ್ಕೂಟರ್ ಎಲ್ಎಕ್ಸ್ ಮತ್ತು ವಿಎಕ್ಸ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಕಳೆದ ಬಾರಿ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯನ್ನು ರೂ.1,000 ಗಳವರೆಗೆ ಮತ್ತು ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯನ್ನು ರೂ.1,300 ಗಳವರೆಗೆ ಹೆಚ್ಚಿಸಿದ್ದರು. ಇದೀಗ ಎರಡನೇ ಬಾರಿ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯನ್ನು ರೂ.1,890 ಗಳವರೆಗೆ ಮತ್ತು ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯನ್ನು ರೂ.1,950 ಗಳವರೆಗೆ ಹೆಚ್ಚಿಸಲಾಗಿದೆ.

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಇದೀಗ ಎಂಟ್ರಿ ಲೆವೆಲ್ ಎಲ್‌ಎಕ್ಸ್ ರೂಪಾಂತರದ ಬೆಲೆಯು ರೂ.67,200ಗಳಾದರೆ, ಟಾಪ್-ಸ್ಪೆಕ್ ವಿಎಕ್ಸ್ ರೂಪಾಂತರದ ಬೆಲೆಯು ರೂ.70,050 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ 124 ಸಿಸಿ ಸಿಂಗಲ್ ಸಿಲಿಂಡರ್ ಫ್ಯೂಯಲ್-ಇಂಜೆಕ್ಟ್ ಎಂಜಿನ್ ಹೊಂದಿದೆ. ಈ ಎಂಜಿನ್ 7,000 ಆರ್‌ಪಿಎಂನಲ್ಲಿ 9 ಬಿಹೆಚ್‌ಪಿ ಪವರ್ ಮತ್ತು 5,500 ಆರ್‌ಪಿಎಂನಲ್ಲಿ 10.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಶೇ.11 ಮೈಲೇಜ್ ಅಂಕಿ ಅಂಶಗಳು ಹೆಚ್ಚಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಹೊಸ ಹೀರೋ ಡೆಸ್ಟಿನಿ 125 ಸ್ಕೂಟರ್ ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಬಿಎಸ್-6 ಡೆಸ್ಟಿನಿ ಸ್ಕೂಟರ್ ನಲ್ಲಿ ಸ್ಟಾರ್ಟ್/ಸ್ಟಾಪ್ ಟೆಕ್ನಾಲಜಿ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡ್ಯುಯಲ್-ಟೆಕ್ಸ್ಚರ್ ಸೀಟುಗಳು, ಅಲಾಯ್ ವ್ಹೀಲ್ಸ್, ಸುತ್ತಲೂ ಕ್ರೋಮ್ ಎಕ್ಸಟ್ ಗಳು, ಮೊಬೈಲ್ ಚಾರ್ಜಿಂಗ್ ಮತ್ತು ಬೂಟ್ ಲ್ಯಾಂಪ್ ಅನ್ನು ಒಳಗೊಂಡಿದೆ;

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಈ ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್ ನಲ್ಲಿ ಸುರಕ್ಷತೆಗಾಗಿ ಇಂಟಿಗ್ರೇಟೆಡ್ ಬ್ರೇಕಿಂಗ್ ಸಿಸ್ಟಂನಿಂದ ಬೆಂಬಲಿತವಾಗಿ ಎರಡು ತುದಿಗಳಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

MOST READ: ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಇನ್ನು ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಸರಣಿಯಲ್ಲಿರುವ ಎಲ್ಲಾ ಎಲೆಕ್ಟ್ರಿಕ್ ಸ್ಕೂಟರ್‍‍ಗಳಿಗೆ ಭರ್ಜರಿ ಆಫರ್ ಅನ್ನು ಘೋಷಿಸಿದೆ. ಹೀರೋ ಎಲೆಕ್ಟ್ರಿಕ್ ಕಂಪನಿಯು ತನ್ನ ಎಲ್ಲಾ ಎಲೆಕ್ಟ್ರಿಕ್ ಸ್ಕೂಟರ್‍‍ಗಳಿಗೆ ಒಟ್ಟು ರೂ.6,000 ಗಳವರೆಗೆ ಆಫರ್ ನೀಡಿದೆ.

ಮತ್ತಷ್ಟು ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಹೀರೋ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಎಸ್-6 ಡೆಸ್ಟಿನಿ ಸ್ಕೂಟರ್ ಬಿಡುಗಡೆಗೊಳಿಸಿದ ಬಳಿಕ ಎರಡನೇ ಬಾರಿಗೆ ಬೆಲೆಯನ್ನು ಹೆಚ್ಚಿಸಿದೆ. ಬಿಎಸ್-6 ಹೀರೋ ಡೆಸ್ಟಿನಿ ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ 125 ಸ್ಕೂಟರ್ ಗೆ ಪೈಪೋಟಿ ನೀಡುತ್ತದೆ.

Article Published On: Tuesday, August 18, 2020, 18:28 [IST]
English summary
Hero Increases Prices Of The Destini 125 BS6 For The Second Time. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+