ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯ ಸರಣಿಯಲ್ಲಿರುವ ದ್ವಿಚಕ್ರ ವಾಹನಗಳ ಮಾರಾಟವು ಲಾಕ್ ಡೌನ ಬಳಿಕ ಉತ್ತಮ ಬೆಳವಣಿಗೆಯನ್ನು ಕಂಡಿದೆ. ಹೀರೋ ಕಂಪನಿಯು ಕಳೆದ ತಿಂಗಳು ಮಾತ್ರ 5.44 ಲಕ್ಷ ಯೂನಿಟ್‌ಗಳನ್ನು ಮಾರಾಟ ಮಾಡಿದೆ.

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೀರೋ ಮೋಟೊಕಾರ್ಪ್ ಪಾರುಪತ್ಯ ಸಾಧಿಸುವಲ್ಲಿ ಯಶ್ವಸಿಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ದ್ವಿಚಕ್ರ ಮಾರಾಟದಲ್ಲಿ ಹೀರೋ ಮೋಟೊಕಾರ್ಪ್ ಅಗ್ರಸ್ಥಾನದಲ್ಲಿದೆ. ಆದರೆ ಮಾರಾಟದಲ್ಲಿ ಹೀರೋನ ಸ್ಕೂಟರ್ ಗಳು ಹೆಚ್ಚಿನ ಕೊಡುಗೆಯನ್ನು ನೀಡಲಿಲ್ಲ. 2020ರ ಆಗಸ್ಟ್ ತಿಂಗಳಲ್ಲಿ ಹೀರೋ ಕೇವಲ 40 ಸಾವಿರ ಯೂನಿಟ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಇದು ವರ್ಷದಿಂದ ವರ್ಷಕ್ಕೆ 22.05 ರಷ್ಟು ಕುಸಿತವಾಗಿದೆ.

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಇದರಿಂದ ಹೀರೋ ಕಂಪನಿಯು ಭಾರತದಲ್ಲಿ ಹೊಸ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಲು ಚಿಂತಿಸುತ್ತಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಡೆಸ್ಟಿನಿ 125, ಮೆಸ್ಟ್ರೋ ಎಡ್ಜ್ 125, ಮೆಸ್ಟ್ರೋ ಎಡ್ಜ್ 110, ಮತ್ತು ಪ್ಲೆಷರ್ ಪ್ಲಸರ್ ಎಂಬ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗುತ್ತಿವೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಸರಣಿಯಲ್ಲಿ ಸ್ಪ್ಲೆಂಡರ್ ಮತ್ತು ಎಚ್ಎಫ್ ಡಿಲಕ್ಸ್ ಬೈಕುಗಳು ಅತಿ ಹೆಚ್ಚು ಮಾರಾಟವಾಗುವ ಬೈಕುಗಳಾಗಿವೆ. ಈ ಎರಡು ಬೈಕುಗಳು ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಮಾರಾಟವಾಗಿವೆ.

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಹೆಚ್ಚು ಮಧ್ಯಮವರ್ಗದ ಗ್ರಾಹರರನ್ನು ಹೊಂದಿದೆ. ಹೀರೋ ಮೋಟೊಕಾರ್ಪ್ ಬೈಕುಗಳು ಹೆಚ್ಚು ಮೈಲೇಜ್ ಮತ್ತು ಕೈಗೆಟುಕುವ ದರದಲ್ಲಿ ಮಾರಾಟ ಮಾಡುವುದರಿಂದ ಹೆಚ್ಚು ಗ್ರಾಹಕರನ್ನು ಸೆಳೆದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಇನ್ನು 125ಸಿಸಿ ಸ್ಕೂಟರ್ ವಿಭಾಗವು ಇತ್ತೀಚೆಗೆ ಅದ್ಭುತ ಬೆಳವಣಿಗೆಯನ್ನು ಕಾಣುತ್ತಿದೆ. ಇದರಿಂದ ಈ ವಿಭಾಗದಲ್ಲಿ ಹೊಸ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಹೀರೋ ಚಿಂತಿಸಬಹುದು. ಆದರೆ ಕಂಪನಿಯು ಇದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಲಿಲ್ಲ.

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್‌ನ ಅಧ್ಯಕ್ಷ ಮತ್ತು ಎಂಡಿ ಪವನ್ ಮುಂಜಾಲ್ ಅವರು ಮಾತನಾಡಿ, ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ನೀವು ಹೆಚ್ಚಿನ ಹೊಸ ಮಾದರಿಗಳ ಬಿಡುಗಡೆಯನ್ನು ನೋಡುತ್ತಿರಿ ಎಂದರು.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ನಾವು ಒಂದು ಸಮಯದಲ್ಲಿ ಭಾರತದಲ್ಲಿ ಸ್ಕೂಟರ್ ವಿಭಾಗ ಮಾರಾಟದಲ್ಲಿ ಶೇ.19 ಮಾರುಕಟ್ಟೆ ಪಾಲನ್ನು ಹೊಂದಿದ್ದೇವು. ಇನ್ನು ನಾವು ಹಿಂತಿರುಗುತ್ತೇವೆ ಮತ್ತು ನಾವು ಅದನ್ನು ಮೀರಿಸುತ್ತೇವೆ ಎಂದರು. ನಾವು ಕೆಲವು ಮಾದರಿಗಳ ಮೇಲೆ ಹೆಚ್ಚು ಕೇಂದ್ರೀಕರಿಸಿದ್ದೇವೆ ಎಂದು ಹೇಳಿದರು.

ಸ್ಕೂಟರ್ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು 2021ರ ವೇಳೆಗೆ ಹತ್ತು ಕೋಟಿ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದೆ. ಇದರಿಂದಾಗಿ ಹೀರೋ ಮೋಟೊಕಾರ್ಪ್ ಸ್ಕೂಟರ್‌ಗಳ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ.

Most Read Articles

Kannada
English summary
Hero MotoCorp Planning To Launch New Scooters Around Diwali. Read In Kannada.
Story first published: Monday, September 7, 2020, 18:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X