Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನವೆಂಬರ್ ತಿಂಗಳ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪಾರುಪತ್ಯ ಸಾಧಿಸಿದ ಹೀರೋ ಮೋಟೊಕಾರ್ಪ್
ಭಾರತದ ಆಟೋಮೊಬೈಲ್ ಕ್ಷೇತ್ರದಲ್ಲಿ ವಾಹನಗಳ ಮಾರಾಟವು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ನಡುವೆ ದೇಶದ ಅತಿ ದೊಡ್ಡ ದ್ವಿಚಕ್ರ ಉತ್ಪಾದನಾ ಕಂಪನಿಯಾದ ಹೀರೋ ಮೋಟೊಕಾರ್ಪ್ 2020ರ ನವೆಂಬರ್ ತಿಂಗಳಲ್ಲಿ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

2020ರ ನವೆಂಬರ್ ತಿಂಗಳಿನ ದ್ವಿಚಕ್ರ ಮಾರಟದಲ್ಲಿ ಹೀರೋ ಮೋಟೊಕಾರ್ಪ್ ಶೇ.14 ರಷ್ಟು ಏರಿಕೆ ದಾಖಲಿಸಿದೆ. ಹೀರೋ ಮೋಟೊಕಾರ್ಪ್ ಕಂಪನಿಯು ಕಳೆದ ತಿಂಗಳು 575,957 ಯುನಿಟ್ಗಳನ್ನು ಮಾರಾಟಗೊಳಿಸಿತ್ತು. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 505,994 ಯುನಿಟ್ಗಳನ್ನು ಮಾರಾಟಗೊಳಿಸಿತ್ತು. ಹೀರೋ ಬೈಕುಗಳು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪಾರುಪತ್ಯವನ್ನು ಮುಂದುವರಿಸಿದೆ.

ಕಳೆದ ವರ್ಷದ ನೆವೆಂಬರ್ ತಿಂಗಳ ಹೀರೋ ಬೈಕುಗಳ ಮಾರಾಟವನ್ನು ಹೋಲಿಸಿದರೇ ಈ ವರ್ಷದ ಅದೇ ಅವಧಿಯಲ್ಲಿ 10,781 ಯುನಿಟ್ಗಳು ಹೆಚ್ಚು ಮಾರಾಟವಾಗಿವೆ. ಇನ್ನು ಅದೇ ಅವಧಿಗೆ 15,134 ಯುನಿಟ್ ಗಳಷ್ಟು ಹೆಚ್ಚು ರಫ್ತು ಮಾಡಲಾಗಿದೆ.
MOST READ: ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು 2020ರ ಅಕ್ಟೋಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 8,06,848 ಯುನಿಟ್ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಹೀರೋ 5,14,509 ಯುನಿಟ್ಗಳನ್ನು ಚಿಲ್ಲರೆ ಮಾರಾಟ ಮಾಡಿದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.35 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಹೀರೋ ಮೋಟೊಕಾರ್ಪ್ ಈ ವರ್ಷದಲ್ಲಿ ಅಕ್ಟೋಬರ್ ತಿಂಗಳು ಗರಿಷ್ಠ ಮಾಸಿಕ ಮಾರಾಟವನ್ನು ದಾಖಲಿಸಿತು. ಇನ್ನು 2020ರ ಸೆಪ್ಟೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 7,15,718 ಯುನಿಟ್ಗಳನ್ನು ಮಾರಾಟಗೊಳಿಸಿತ್ತು.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

2020ರ ಸೆಪ್ಟೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 7,91,137 ಯುನಿಟ್ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.34.7 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಇನ್ನು 2020ರ ಏಪ್ರಿಲ್-ಅಕ್ಟೋಬರ್ ತಿಂಗಳುಗಳ ನಡುವೆ ಹೀರೋ ಮೋಟೊಕಾರ್ಪ್ 29,39,553 ಬೈಕುಗಳನ್ನು ಮತ್ತು 245,246 ಸ್ಕೂಟರ್ಗಳನ್ನು ಮಾರಾಟ ಮಾಡಿವೆ. ಇದನ್ನು 2019ರಲ್ಲಿ ಅದೇ ಅವಧಿಯ ಮಾರಾಟಕ್ಕೆ ಹೋಲಿಸಿದರೆ ಕ್ರಮವಾಗಿ ಶೇ.23.21 ಮತ್ತು ಶೇ.19.82 ರಷ್ಟು ಕುಸಿತ ಕಂಡುಬಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಆದರೆ ಹೀರೋ ಕಂಪನಿಯ ಸ್ಕೂಟರ್ ಗಳು ಮಾರಾಟದಲ್ಲಿ ಪ್ರತಿಸ್ಪರ್ಧಿಗಳದೆರು ಹಿನ್ನಡೆ ಅನುಭವಿಸುತ್ತಿತ್ತು. ಆದರೆ ಇತ್ತೀಚೀಗೆ ಹೀರೋ ಸ್ಕೂಟರ್ಗಳು ಜನಪ್ರಿಯತೆಯನ್ನು ಗಳಿಸುತ್ತಿವೆ.

ಹೀರೋ ಕಂಪನಿಯು ಈ ವರ್ಷದಲ್ಲಿ ಅಕ್ಟೋಬರ್ ತಿಂಗಳು ಗರಿಷ್ಠ ಮಾಸಿಕ ಮಾರಾಟವನ್ನು ದಾಖಲಿಸಿತು. ಆದರೆ ನವೆಂಬರ್ ತಿಂಗಳಿನಲ್ಲಿ ಅದೇ ಗರಿಷ್ಠ ಸಂಖ್ಯೆಯ ಮಾರಾಟವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದರೂ ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ.