ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

2020ರ ಜೂನ್‌ ತಿಂಗಳಿನಲ್ಲಿ 4,50,744 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿರುವುದಾಗಿ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ವರದಿಯಲ್ಲಿ ತಿಳಿಸಿದೆ. ಮೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ, ಕಂಪನಿಯು ಜೂನ್‌ ತಿಂಗಳಿನಲ್ಲಿ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಮೇ ತಿಂಗಳಿನಲ್ಲಿ 1,12,682 ವಾಹನಗಳನ್ನು ಮಾರಾಟ ಮಾಡಿತ್ತು. ಆದರೆ 2019ರ ಜೂನ್ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಜೂನ್‌ ತಿಂಗಳಿನಲ್ಲಿ ಹೀರೋ ಮೋಟೊಕಾರ್ಪ್ ಮಾರಾಟವು 26%ನಷ್ಟು ಕಡಿಮೆಯಾಗಿದೆ. ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 6.16 ಲಕ್ಷ ಯುನಿಟ್ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಲಾಕ್‌ಡೌನ್‌ನಿಂದಾಗಿ 2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಮಾರಾಟ ಪ್ರಮಾಣವು ಕಡಿಮೆಯಾಗಿದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಲಾಕ್‌ಡೌನ್‌, ಹೀರೋ ಮೋಟೊಕಾರ್ಪ್ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟ ಸೇರಿದಂತೆ ಎಲ್ಲಾ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಕಂಪನಿಯು 2020-21ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಒಟ್ಟು 5,63,426 ಯುನಿಟ್ ವಾಹನಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಕಂಪನಿಯ ಮಾರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೀರೋ ಮೋಟರ್‌ಕಾರ್ಪ್ ಸಿಇಒ ಡಾ.ಪವನ್ ಮುಂಜಾಲ್ ರವರು ಅನಿಶ್ಚಿತತೆಯ ಸಮಯದಲ್ಲೂ ನಮ್ಮ ಕಂಪನಿಯ ಮಾರಾಟದ ಮೇಲೆ ಹೆಚ್ಚು ಪರಿಣಾಮ ಉಂಟಾಗಿಲ್ಲ. ಇದು ಕಂಪನಿಯ ನಾಯಕತ್ವದ ಕಾರ್ಯಕ್ಷಮತೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಕಂಪನಿಯು ಜೂನ್‌ ತಿಂಗಳಿನಲ್ಲಿ ಇ-ಶಾಪ್ ಆನ್‌ಲೈನ್ ಪ್ಲಾಟ್ ಫಾರಂ ಅನ್ನು ಆರಂಭಿಸಿತ್ತು. ಈ ಪ್ಲಾಟ್‌ಫಾರಂ ಗ್ರಾಹಕರಿಗೆ ಸಂಪೂರ್ಣ ಡಿಜಿಟಲ್ ಶಾಪಿಂಗ್ ಅನುಭವವನ್ನು ನೀಡುತ್ತದೆ. ಗ್ರಾಹಕರು ಕಂಪನಿಯ ವೆಬ್‌ಸೈಟ್‌ನಿಂದ ನೇರವಾಗಿ ತಮ್ಮ ನೆಚ್ಚಿನ ಬೈಕ್ ಅಥವಾ ಸ್ಕೂಟರ್ ಖರೀದಿಸಬಹುದು.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಕಂಪನಿಯು ಇತ್ತೀಚೆಗೆ ಹೀರೋ ಎಕ್ಸ್ ಟ್ರೀಮ್ 160 ಆರ್ ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಈ ಬೈಕಿನ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.99,950ಗಳಾಗಿದೆ. ಹೀರೋ ಎಕ್ಸ್ ಟ್ರೀಮ್ 160 ಆರ್ ಬೈಕ್ ಅನ್ನು ಫ್ರಂಟ್ ಡಿಸ್ಕ್ ಹಾಗೂ ಡ್ಯುಯಲ್ ಡಿಸ್ಕ್ ಎಂಬ ಎರಡು ಮಾದರಿಗಳಲ್ಲಿ ಬಿಡುಗಡೆಗೊಳಿಸಲಾಗಿದೆ.

ಜೂನ್ ತಿಂಗಳ ಮಾರಾಟ ವರದಿ ಬಿಡುಗಡೆಗೊಳಿಸಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಕಂಪನಿಯು ಎಕ್ಸ್ ಟ್ರೀಮ್ 160 ಆರ್ ಬೈಕ್ ಅನ್ನು ಮಾರ್ಚ್‌ ತಿಂಗಳಿನಲ್ಲಿಯೇ ಬಿಡುಗಡೆಗೊಳಿಸಬೇಕಿತ್ತು. ಲಾಕ್‌ಡೌನ್ ಕಾರಣದಿಂದಾಗಿ ಬಿಡುಗಡೆಯನ್ನು ಮುಂದೂಡಲಾಗಿತ್ತು. ಹೀರೋ ಎಕ್ಸ್‌ಟ್ರೀಮ್ 160 ಆರ್ ಬೈಕ್ 160 ಸಿಸಿಯ ಏರ್ ಕೂಲ್ಡ್, ಫ್ಯೂಯಲ್ ಇಂಜೆಕ್ಟ್ ಬಿಎಸ್ 6 ಎಂಜಿನ್ ಹೊಂದಿದ್ದು, 15 ಬಿಹೆಚ್‌ಪಿ ಪವರ್ ಹಾಗೂ 14 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Most Read Articles

Kannada
English summary
Hero Motocorp releases sales report for 2020 June, 4.5 lakh vehicles sold. Read in Kannada.
Story first published: Thursday, July 2, 2020, 14:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X