Just In
Don't Miss!
- Finance
"ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲಿನ ನಗದು ಸಾಲಕ್ಕೆ ಬಡ್ಡಿ ಇಲ್ಲ"
- News
ನಷ್ಟದಲ್ಲಿದ್ದ ನಮ್ಮ ಮೆಟ್ರೋಗೆ ವರವಾದ ವಿದ್ಯಾರ್ಥಿಗಳು
- Sports
ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಹೀರೋ ಎಕ್ಸ್ಟ್ರಿಮ್ 160ಆರ್ ಬೈಕ್
ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ತನ್ನ ಬಹುನಿರೀಕ್ಷಿತ ಎಕ್ಸ್ಟ್ರಿಮ್ 160ಆರ್ ಬೈಕನ್ನು ಭಾರತದಲ್ಲಿ 2020ರ ಜುನ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಹೀರೋ ಎಕ್ಸ್ಟ್ರಿಮ್ 160ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

2020ರ ಅಕ್ಟೋಬರ್ ತಿಂಗಳಲ್ಲಿ ಹೀರೋ ಎಕ್ಸ್ಟ್ರಿಮ್ 160ಆರ್ 12,480 ಯುನಿಟ್ಗಳು ಮಾರಾಟವಾಗಿವೆ. ಹೀರೋ ಎಕ್ಸ್ಟ್ರಿಮ್ 160ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆಗಳಿಸಲು ಯಶ್ವಸಿಯಾಗಿದೆ. ಇನ್ನು 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಹೀರೋ ಕಂಪನಿಯು ಎಕ್ಸ್ಟ್ರಿಮ್ 160ಆರ್ ಮಾದರಿಯ 12,930 ಯುನಿಟ್ಗಳನ್ನು ಮಾರಾಟಗೊಳಿಸಿತ್ತು. 2020ರ ಸೆಪ್ಟೆಂಬರ್ ತಿಂಗಳ ಮಾರಾಟವನ್ನು ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಶೇ.3.48 ರಷ್ಟು ಕುಸಿತವಾಗಿದೆ. ಆದರೆ ಎಕ್ಸ್ಟ್ರಿಮ್ 160ಆರ್ ಬೈಕ್ ಕಂಪನಿಯ ಪ್ರೀಮಿಯಂ ಬೈಕ್ ಆಗಿದ್ದರೂ ಎಂಟ್ರಿ ಲೆವೆಲ್ ಮಾದರಿಯಂತೆ ಉತ್ತಮವಾಗಿ ಮಾರಾಟವಾಗುತ್ತಿದೆ.

ಹೊಸ ಹೀರೋ ಎಕ್ಸ್ಟ್ರಿಮ್ 160ಆರ್ ಬೈಕನ್ನು ರಾಜಸ್ಥಾನದ ಜೈಪುರದಲ್ಲಿರುವ ಆರ್&ಡಿ ಘಟಕದಲ್ಲಿ ಸಂಪೂರ್ಣವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಬ್ರ್ಯಾಂಡ್ನಿಂದ ಪ್ರೀಮಿಯಂ 160 ಸಿಸಿ ಬಿಎಸ್ 6 ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿಗೆ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ.
MOST READ: ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಬಿಎಸ್ 6 ಹೀರೋ ಎಕ್ಸ್ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್ಪಿಎಂನಲ್ಲಿ 15 ಬಿಹೆಚ್ಪಿ ಪವರ್ ಮತ್ತು 6500 ಆರ್ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್ಟಾರ್ಕ್ 125 ಸ್ಕೂಟರ್

ಹೀರೋ ಎಕ್ಸ್ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.

ಬಿಎಸ್ 6 ಹೀರೋ ಎಕ್ಸ್ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್, ಡಿಆರ್ಎಲ್ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಹೀರೋ ಎಕ್ಸ್ಟ್ರಿಮ್ 160ಆರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.

ಇನ್ನು ಈ ಬೈಕಿನಲ್ಲಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳೊಂದಿಗೆ ಎಬಿಎಸ್ ಅನ್ನು ನೀಡಿದೆ. ಹೀರೋ ಎಕ್ಸ್ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್ಟಿಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿ ನೀಡುತ್ತದೆ.