ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಹುನಿರೀಕ್ಷಿತ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ 2020ರ ಜುನ್ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

2020ರ ಪ್ಟೆಂಬರ್‌ ತಿಂಗಳಲ್ಲಿ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮಾದರಿಯ 12,930 ಯು‍‍ನಿಟ್‍‍ಗಳು ಮಾರಾಟವಾಗಿವೆ. 2020ರ ಆಗಸ್ಟ್ ತಿಂಗಳಲ್ಲಿ 12,037 ಯು‍‍ನಿಟ್‍‍ಗಳು ಮಾರಾಟವಾಗಿತ್ತು. ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇನ್ನು 2020ರ ಆಗಸ್ಟ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 584,456 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇದನ್ನು ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.7.55 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಕಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ಫ್ರಂಟ್ ಡಿಸ್ಕ್ ಮತ್ತು ಡಬಲ್ ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿತ್ತು. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಫ್ರಂಟ್ ಡಿಸ್ಕ್ ರೂಪಾಂತರದ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.99,950 ಗಳಾದರೆ, ಡಬಲ್ ಡಿಸ್ಕ್ ರೂಪಾಂತರದ ಬೆಲೆಯು ರೂ.1.03 ಲಕ್ಷಗಳಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ರಾಜಸ್ಥಾನದ ಜೈಪುರದಲ್ಲಿರುವ ಆರ್&ಡಿ ಘಟಕದಲ್ಲಿ ಸಂಪೂರ್ಣವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಬ್ರ್ಯಾಂಡ್‌ನಿಂದ ಪ್ರೀಮಿಯಂ 160 ಸಿಸಿ ಬಿಎಸ್ 6 ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿಗೆ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್‌ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾದ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಮಾರಾಟ

ಇನ್ನು ಈ ಹೊಸ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಚಾನೆಲ್ ಎಬಿಎಸ್ ಅನ್ನು ನೀಡಿದೆ.ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ದೇಶಿಯ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Article Published On: Monday, October 26, 2020, 19:43 [IST]
English summary
Nearly 13,000 Units Of Hero Xtreme 160R Sold In September 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+