Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್
ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಬಹುನಿರೀಕ್ಷಿತ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಬಿಡುಗಡೆಯಾದ ಮೊದಲ ತಿಂಗಳಿನಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಈ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ಫ್ರಂಟ್ ಡಿಸ್ಕ್ ಮತ್ತು ಡಬಲ್ ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಫ್ರಂಟ್ ಡಿಸ್ಕ್ ರೂಪಾಂತರದ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.99,950 ಗಳಾದರೆ, ಡಬಲ್ ಡಿಸ್ಕ್ ರೂಪಾಂತರದ ಬೆಲೆಯು ರೂ.1.03 ಲಕ್ಷಗಳಾಗಿದೆ. 2020ರ ಜುಲೈ ತಿಂಗಳಲ್ಲಿ ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಮಾದರಿಯ 6,639 ಯುನಿಟ್‍ಗಳು ಮಾರಾಟವಾಗಿವೆ.

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ರಾಜಸ್ಥಾನದ ಜೈಪುರದಲ್ಲಿರುವ ಆರ್&ಡಿ ಘಟಕದಲ್ಲಿ ಸಂಪೂರ್ಣವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಬ್ರ್ಯಾಂಡ್‌ನಿಂದ ಪ್ರೀಮಿಯಂ 160 ಸಿಸಿ ಬಿಎಸ್ 6 ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿಗೆ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಿಸಲಾಗಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ ಎಂದು ಹೀರೋ ಹೇಳಿಕೊಂಡಿದೆ. ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನ ಬೇಸ್ ಸ್ಪೆಕ್ ಮಾದರಿಯು 138.5 ಕೆಜಿ ತೂಕವನ್ನು ಹೊಂದಿದೆ.

ಬಿಎಸ್ 6 ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ.

ಇನ್ನು ಈ ಹೊಸ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಚಾನೆಲ್ ಎಬಿಎಸ್ ಅನ್ನು ನೀಡಿದೆ.

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಭಾರತೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍ಟಿಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.