ಭಾರತದಲ್ಲಿ ಹಾರ್ಲೆ ಡೇವಿಡ್ಸನ್ ಕಂಪನಿಯ ಗ್ರಾಹಕ ಸೇವೆಗಳನ್ನು ಆರಂಭಿಸಿದ ಹೀರೋ ಮೋಟೊಕಾರ್ಪ್
ಅಮೆರಿಕದ ಜನಪ್ರಿಯ ಐಷಾರಾಮಿ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹಾರ್ಲೆ ಡೇವಿಡ್ಸನ್ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದ್ದರೂ ಹೊಸ ವಾಹನಗಳ ಮಾರಾಟ ಮತ್ತು ಹೊಸ ಉತ್ಪನ್ನಗಳ ಅಭಿವೃದ್ದಿ ಯೋಜನೆಯನ್ನು ಸಹಭಾಗೀತ್ವದ ಕಂಪನಿಯೊಂದಿಗೆ ಮುಂದುವರಿಸಿದೆ.

ಭಾರತದಲ್ಲಿ ಈ ಮೊದಲು ಸ್ವತಂತ್ರವಾಗಿ ತನ್ನ ಐಷಾರಾಮಿ ಬೈಕ್ ಮಾದರಿಗಳನ್ನು ಅಭಿವೃದ್ದಿಗೊಳಿಸಿ ಮಾರಾಟ ಮಾಡುತ್ತಿದ್ದ ಹಾರ್ಲೆ ಡೇವಿಡ್ಸನ್ ಕಂಪನಿಯು ನಿರ್ವಹಣಾ ವೆಚ್ಚಗಳನ್ನು ಗಣನೀಯವಾಗಿ ತಗ್ಗಿಸಲು ದೇಶದ ಜನಪ್ರಿಯ ಬೈಕ್ ಉತ್ಪಾದನಾ ಕಂಪನಿಯಾಗಿರುವ ಹೀರೋ ಮೋಟೊಕಾರ್ಪ್ ಜೊತೆಗೂಡಿದ್ದು, ಬೈಕ್ ಮಾರಾಟ ಮತ್ತು ಗ್ರಾಹಕರ ಸೇವೆಗಳಿಗೆ ಸಮರ್ಥವಾಗಿ ಪೂರೈಸಲು ಸಹಭಾಗೀತ್ವ ಕಂಪನಿಯ ಪ್ಲ್ಯಾಟ್‌ಫಾರ್ಮ್‌ಗಳನ್ನು ಬಳಕೆ ಮಾಡಿಕೊಳ್ಳಲಿದೆ.

ಸ್ವತಂತ್ರ ಬೈಕ್ ಮಾರಾಟ ಮಳಿಗಗಳಿಂದಾಗುತ್ತಿರುವ ವೆಚ್ಚ ನಿರ್ವಹಣೆಗಾಗಿ ಈ ಕ್ರಮ ಕೈಗೊಂಡಿರುವ ಹಾರ್ಲೆ ಕಂಪನಿಯು ಆಯ್ದ ನಗರಗಳಲ್ಲಿನ ಪ್ರಮುಖ ಹೀರೋ ಮೋಟೊಕಾರ್ಪ್ ಡೀಲರ್ಸ್‌ಗಳಲ್ಲಿ ಪ್ರತ್ಯೇಕ ವ್ಯವಹಾರ ಸೌಲಭ್ಯಗಳನ್ನು ತೆರೆಯಲಿದೆ.

ಇದರಿಂದ ಡೀಲರ್ಸ್‌ಗಳ ನಿರ್ವಹಣೆಯು ಗಣನೀಯವಾಗಿ ಇಳಿಕೆಯಾಗಲಿದ್ದು, 2021ರ ಜನವರಿಯಿಂದಲೇ ಹಾರ್ಲೆ ಡೇವಿಡ್ಸನ್ ಕಂಪನಿಯು ಹೀರೋ ಮೋಟೊಕಾರ್ಪ್ ಜೊತೆಗೂಡಿ ಕಾರ್ಯನಿರ್ವಹಣೆ ಮಾಡುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಸತತ ಆರ್ಥಿಕ ಹಿನ್ನಡೆ ಮತ್ತು ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚಗಳನ್ನು ತಗ್ಗಿಸುವ ಉದ್ದೇಶದಿಂದ ಸಹಭಾಗೀತ್ವ ಯೋಜನೆಯತ್ತ ಮುಖ ಮಾಡಿರುವ ಹಾರ್ಲೆ ಡೇವಿಡ್ಸನ್ ಕಂಪನಿಯು ಭಾರತದಲ್ಲೇ ಹೊಸ ಉತ್ಪನ್ನಗಳನ್ನು ಅಭಿವೃದ್ದಿಪಡಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ ಕಳೆದ ವರ್ಷವೇ ಹೀರೋ ಮೋಟೊಕಾರ್ಪ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದ ಹಾರ್ಲೆ ಡೇವಿಡ್ಸನ್ ಕಂಪನಿಯು ಕರೋನಾ ವೈರಸ್ ಪರಿಣಾಮ ಹೊಸ ಯೋಜನೆಯನ್ನು ತಟಸ್ಥವಾಗಿಟ್ಟಿತ್ತು.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಉದ್ಯಮ ವ್ಯವಹಾರಗಳು ತಿಳಿಗೊಂಡಿರುವ ಹಿನ್ನಲೆ ಸಹಭಾಗೀತ್ವ ಯೋಜನೆಗೆ ಅಧಿಕೃತವಾಗಿ ಒಪ್ಪಿಗೆ ಸೂಚಿಸಿದ್ದು, ಹೊಸ ಯೋಜನೆ ಅಡಿ ಹೀರೋ ಕಂಪನಿಯು ಹಾರ್ಲೆ ಬೈಕ್‌ಗಳ ಅಭಿವೃದ್ದಿ ಮತ್ತು ಮಾರಾಟ ಕಾರ್ಯಾಚರಣೆಗೆ ಪ್ರತ್ಯೇಕ ಸೌಲಭ್ಯಗಳೊಂದಿಗೆ ಪರಸ್ಪರ ಸಹಕರಿಸಲಿದೆ.

ಭಾರತದಲ್ಲಿ ಮಾತ್ರವಲ್ಲದೆ ವಿಶ್ವದಲ್ಲೇ ಅತಿ ಹೆಚ್ಚು ದ್ವಿಚಕ್ರ ವಾಹನಗಳನ್ನು ಉತ್ಪಾದಿಸುವ ಹೀರೋ ಮೋಟೊಕಾರ್ಪ್ ಕಂಪನಿಯು ದೇಶಾದ್ಯಂತ ಮಾರಾಟ ಸರಪಳಿಯಲ್ಲಿ ಅತ್ಯುತ್ತಮ ಅವಕಾಶ ಹೊಂದಿದ್ದು, ಇದೇ ಕಾರಣಕ್ಕೆ ಹಾರ್ಲೆ ಕಂಪನಿಯು ಹೀರೋ ಕಂಪನಿಯ ಜೊತೆಗೆ ಕೈಜೋಡಿಸಿದೆ.

ಜೊತೆಗೆ ಉದ್ಯಮ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದರೂ ಹಾರ್ಲೆ ಡೇವಿಡ್ಸನ್ ಕಂಪನಿಯಲ್ಲಿನ ಭಾರತೀಯ ಉದ್ಯೋಗಿಗಳು ಹೀರೋ ಮೋಟೊಕಾರ್ಪ್ ಜೊತೆಗೂಡಿ ಕಾರ್ಯನಿರ್ವಹಿಸಲಿದ್ದು, ಅಧಿಕೃತ ಕಚೇರಿ, ಮಾರಾಟ ಮಳಿಗೆಗಳನ್ನು ಹೊರತುಪಡಿಸಿ ಇನ್ನುಳಿದ ವ್ಯವಹಾರಗಳು ಸಾಮಾನ್ಯ ಮಾದರಿಯಲ್ಲೇ ಹೀರೋ ಜೊತೆ ಮುಂದುವರಿಯಲಿವೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇನ್ನು ಸಹಭಾಗೀತ್ವ ಯೋಜನೆ ಅಡಿಯಲ್ಲಿ ಹಾರ್ಲೆ ಡೇವಿಡ್ಸನ್ ಕಂಪನಿಯು ಭಾರತದಲ್ಲಿ ಹೊಸದಾಗಿ 350 ಸಿಸಿಯಿಂದ 500 ಸಿಸಿ ಸಾಮಾರ್ಥ್ಯದ ಕೆಲವು ಹೊಸ ಮೋಟಾರ್‌ಸೈಕಲ್ ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಹೊಸ ಬೈಕ್‌ಗಳನ್ನು ಹೀರೋ ಕಂಪನಿಯೇ ಅಭಿವೃದ್ದಿಪಡಿಸಿ ಆಯ್ದ ಅಧಿಕೃತ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟ ಮಾಡಲಿದೆ.


Click it and Unblock the Notifications