Just In
- 20 min ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 56 min ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 1 hr ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
- 13 hrs ago
ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
Don't Miss!
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- News
ಬೆಂಗಳೂರಿನಲ್ಲಿ 24 ತಾಸಿನಲ್ಲಿ ಮೂರು ಶೂಟೌಟ್!
- Sports
ಥಾಯ್ಲೆಂಡ್ ಓಪನ್ 2021: ಎರಡನೇ ಸುತ್ತಿಗೆ ಪ್ರವೇಶಿಸಿದ ಪಿವಿ ಸಿಂಧು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಬ್ಬದ ಸೀಸನ್‌ನಲ್ಲಿ 14 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ಹಬ್ಬದ ಸೀಸನ್‌ನಲ್ಲಿ 14 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಹಬ್ಬದ ಸೀಸನ್ 32 ದಿನಗಳ ಅವಧಿಯಲ್ಲಿ ಹೀರೋ ಕಂಪನಿಯು 14 ಲಕ್ಷ ಯುನಿಟ್ ಮಾರಾಟಗೊಳಿಸಿವೆ.

ಹೀರೋ ಬೈಕುಗಳು ಹಬ್ಬದ ಸೀಸನ್‌ನಲ್ಲಿ ಭರ್ಜರಿಯಾಗಿ ಮಾರಾಟವಾಗಿವೆ. ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನಗಳ ವಿಭಾಗದಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಹಬ್ಬದ ಸೀಸನ್‌ನಲ್ಲಿ ಭರ್ಜರಿಯಾಗಿ ಮಾರಾಟವಾಗಿ ಸ್ಟಾಕ್ ಗಳು ಡೀಲರುಗಳಲ್ಲಿ ನಾಲ್ಕು ವಾರಗಳಿಗಿಂತಲೂ ಕಡಿಮೆಯಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಬೈಕುಗಳು ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

2019ರ ಹಬ್ಬದ ಸೀಸನ್ ಮಾರಾಟವನ್ನು ಈ ವರ್ಷದ ಹಬ್ಬದ ಸೀಸನ್ ಮಾರಾಟಕ್ಕೆ ಹೋಲಿಸಿದರೆ ಶೇ.98 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇದರೊಂದಿಗೆ 2018ರ ಹಬ್ಬದ ಸೀಸನ್ ಮಾರಾಟಕ್ಕೆ ಹೋಲಿಸಿದರೆ ಈ ವರ್ಷ ಅದೇ ಅವಧಿಗೆ ಶೇ.103 ರಷ್ಟು ಬೆಳವಣಿಗೆಯನ್ನು ಕಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೀರೋ ಸರಣಿಯಲ್ಲಿ ಸ್ಪ್ಲೆಂಡರ್, ಗ್ಲ್ಯಾಮರ್, ಎಕ್ಸ್‌ಟ್ರಿಮ್ 160ಆರ್ ಮತ್ತು ಎಕ್ಸ್‌ಪಲ್ಸ್ ಸೇರಿವೆ. ಇನ್ನು ಸ್ಕೂಟರ್ ವಿಭಾಗದಲ್ಲಿ ಡೆಸ್ಟಿನಿ ಮತ್ತು ಪ್ಲೆಷರ್ ಮಾದರಿಗಳನ್ನು ಒಳಗೊಂಡಿರುತ್ತವೆ.

ಹೀರೋ ಕಂಪನಿಯ ಸರಣಿಯಲ್ಲಿರುವ ಬೈಕುಗಳ ತನ್ನ ಪ್ರತಿಸ್ಪರ್ಧಿಗಳಿಗೆ ಪ್ರಬಲವಾದ ಪೈಪೋಟಿಯನ್ನು ನೀಡುತ್ತದೆ. ಇನ್ನು ಸರ್ಕಾರವು ಘೋಷಿಸಿದ ಕ್ರಮಗಳು ಚೇತರಿಕೆ ಪ್ರಕ್ರಿಯೆಯಲ್ಲಿ ಸಹಕಾರಿಯಾಗಿದೆ ಎಂದು ಕಂಪನಿಯು ಭಾವಿಸುತ್ತದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಮಾರಾಟದ ಬಗ್ಗೆ ಮಾತನಾಡುತ್ತಾ, ದೇಶದ ಅತಿ ದೊಡ್ಡ ದ್ವಿಚಕ್ರ ಉತ್ಪಾದನಾ ಕಂಪನಿಯಾದ ಹೀರೋ ಮೋಟೊಕಾರ್ಪ್ 2020ರ ಅಕ್ಟೋಬರ್ ತಿಂಗಳಲ್ಲಿ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ.

2020ರ ಅಕ್ಟೋಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 8,06,848 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಹೀರೋ 5,14,509 ಯುನಿಟ್‌ಗಳನ್ನು ಚಿಲ್ಲರೆ ಮಾರಾಟ ಮಾಡಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.35 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಇನ್ನು 2020ರ ಸೆಪ್ಟೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 7,15,718 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ಹೀರೋ ಮೊಟೊಕಾರ್ಪ್ ಕಂಪನಿಯು ಹಬ್ಬದ ಅವಧಿಯಲ್ಲಿ ಬೈಕುಗಳು ಭರ್ಜರಿ ಮಾರಾಟವಾಗಿವೆ. ಕಂಪನಿಯು ಈ ವರ್ಷದ ಆರಂಭದಲ್ಲಿ ಅಡೆತಡೆಯಿಂದ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗಿದೆ. ಕಳೆದ ಕೆಲವು ತಿಂಗಳಲ್ಲಿ ಹೀರೋ ಮೊಟೊಕಾರ್ಪ್ ಕಂಪನಿಯು ಬೈಕುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಕಂಡಿದೆ.