ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಹೊಸ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಹೀರೋ ಕಂಪನಿಯು ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್‌ಗಳನ್ನು ಬಹಿರಂಗಪಡಿಸಿದೆ.

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಈ ಅಕ್ಸೆಸರೀಸ್‌ಗಳಲ್ಲಿ ಸೀಟ್ ಕವರ್ ಆಯ್ಕೆಗಳು ಮತ್ತು ಮೊಟೊಕ್ರಾಸ್ ಹೆಲ್ಮೆಟ್ ಸೇರಿವೆ. ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಹೊಸ ಸೀಟ್ ಕವರ್ ಮಾರ್ಡನ್, ಟೂರರ್, ಅಡ್ವೆಂಚರ್ ಮತ್ತು ಡ್ಯುಯಲ್-ಟೋನ್ ಎಂಬ ನಾಲ್ಕು ಆಯ್ಕೆಗಳಲ್ಲಿ ಲಭ್ಯವಿರಲಿದೆ. ಈ ಸೀಟ್ ಕವರ್ ಹೆಚ್ಚುವರಿ ಗ್ರಿಪ್ ಮತ್ತು ಆರಾಮದಾಯಕ ಅನುಭವನ್ನು ನೀಡುತ್ತದೆ. ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಆಫ್-ರೋಡರ್ ಆಗಿರುವುದರಿಂದ, ಆಫ್-ರೋಡಿಂಗ್ ಹೆಲ್ಮೆಟ್ ಅನ್ನು ಸಹ ಅನಾವರಣಗೊಳಿಸಿದೆ.

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಈ ಹೆಲ್ಮೆಟ್ ಬೈಕಿನಲ್ಲಿರುವ ಅದೇ ಬಣ್ಣವನ್ನು ಹೊಂದಿದೆ. ಇದು ಡ್ಯುಯಲ್-ಸ್ಪೋರ್ಟ್ ಡೆಕಲ್‌ಗಳನ್ನು ಹೊಂದಿದೆ. ಆದರೆ ಕಂಪನಿಯು ಈ ಅಕ್ಸೆಸರೀಸ್‌ಗಳ ಬೆಲೆಯನ್ನು ಬಹಿರಂಗಪಡಿಸಿಲ್ಲ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಎಂಟ್ರಿ ಲೆವೆಲ್ ಎಕ್ಸ್‌ಪಲ್ಸ್ 200 ಬೈಕ್ ಅದೇ 199.6 ಸಿಸಿ ಎಂಜಿನ್‌ ಅನ್ನು ಹೊಂದಿರುತ್ತದೆ. ಹಿಂದಿನ ಬಿಎಸ್-4 ಎಕ್ಸ್‌ಪಲ್ಸ್ 200 ಮಾದರಿಯಲ್ಲಿ ಇದೇ ಎಂಜಿನ್ ಅನ್ನು ಅಳವಡಿಸಲಾಗಿತ್ತು. ಕಂಪನಿಯು ಇದೇ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಹೊಸ ಮಾದರಿಯಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಹೊಸ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್‌ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 17.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಇದರ ಪವರ್ ಮತ್ತು ಟಾರ್ಕ್ ಅಂಕಿ ಅಂಶವು ಕಡಿಮೆಯಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ.

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಬಿಎಸ್-6 ಎಕ್ಸ್‌ಪಲ್ಸ್ ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಇದು ಈ ಬೈಕಿನ ಗ್ರೌಂಡ್ ಕ್ಲಿಯರೆನ್ಸ್ ಮೇಲೆ ಪರಿಣಾಮ ಬೀರಬಹುದೇ ಎಂದು ನೋಡಬೇಕಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಈ ಬೈಕಿನಲ್ಲಿ ಸವಾರನ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಹೊಸ ಎಕ್ಸ್‌ಪಲ್ಸ್ 200 ಬೈಕಿನ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಹೊಂದಿರುತ್ತದೆ.

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಅಕ್ಸೆಸರೀಸ್ ಬಹಿರಂಗಪಡಿಸಿದ ಹೀರೋ

ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ. ಈ ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕ್ ಹೆಚ್ಚಾಗಿ ಯುವ ಗ್ರಾಹಕರನ್ನು ಸೆಳೆಯುತ್ತದೆ.

Article Published On: Saturday, July 11, 2020, 15:32 [IST]
English summary
Hero Reveals New Seat Covers And Helmet For The XPulse 200 BS6. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+