ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್

ಭಾರತದಲ್ಲಿ ಮೊದಲ ಬಿಎಸ್-6 ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಿದ ಹೆಗ್ಗಳಿಕೆ ಹೀರೋ ಮೋಟೊಕಾರ್ಪ್ ಅವರಿಗೆ ಸಲ್ಲುತ್ತದೆ. ಇದೀಗ ಹೀರೋ ಮೋಟೊಕಾರ್ಪ್ ತನ್ನ ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ಬಿಎಸ್-6 ಆವೃತ್ತಿಯಲ್ಲಿ ಬಿಡುಗಡೆಗೊಳಿಸಿದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಹೀರೋ ಸ್ಪ್ಲೆಂಡರ್ ಪ್ಲಸ್ ದಶಕಗಳಿಂದ ಸಾಮಾನ್ಯ ವರ್ಗದ ಜನರ ಮೆಚ್ಚಿನ ಬೈಕ್‍‍ಗಳಲ್ಲಿ ಒಂದಾಗಿದೆ. ಈ ಬೈಕ್ ಸರಳವಾದ ವಿನ್ಯಾಸ ಮತ್ತು ಉತ್ತಮ ಮೈಲೇಜ್‍‍ನಿಂದ ಈ ಬೈಕ್ ಗ್ರಾಹಕರ ಗಮನಸೆಳೆದಿದೆ. ಹೊಸ ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.59,600 ದಿಂದ ರೂ.63,110 ಗಳಾಗಿದೆ. ಹೊಸ ಹೀರೊ ಸ್ಪ್ಲೆಂಡರ್ ಪ್ಲಸ್ ಬೈಕ್‍‍ನಲ್ಲಿ 100 ಸಿಸಿ ಏರ್-ಕೂಲ್ಡ್, ಫೋರ್-ಸ್ಟ್ರೋಕ್, ಕಾರ್ಬ್ಯುರೇಟೆಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಈ ಎಂಜಿನ್ 8,000 ಆರ್‌ಪಿಎಂನಲ್ಲಿ 7.91 ಬಿ‍‍ಹೆಚ್‍‍ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 8.05 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 4 ಸ್ಫೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಹೊಸ ಬಿ‍ಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಹೊಸ ಸ್ಪ್ಲೆಂಡರ್ ಪ್ಲಸ್ ಬೈಕ್ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಡ್ಯುಯಲ್ ಶಾಕ್ ಅಬ್ಸಾರ್ಬರ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಈ ಬೈಕಿನ ಇಂಧನ ಟ್ಯಾಂಕ್ ಸಾಮರ್ಥ್ಯ 11 ಲೀಟರ್ ಆಗಿದೆ. ಮಾಲಿನ್ಯ ಉಂಟುಮಾಡುವುದನ್ನು ಕಡಿಮೆ ಮಾಡಲು ಹೆಚ್ಚುವರಿಯಾಗಿ ಕಟಲ್ಯಾಟಿಕ್ ಕರ್ನ್‍ವಾಟರ್ ಸಿಸ್ಟಂ ಅನ್ನು ಅಳವಡಿಸಿದ್ದಾರೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಸ್ಟೈಲಿಂಗ್ ವಿಷಯದಲ್ಲಿ ಯಾವುದೇ ಬದಲಾಗಳು ಇಲ್ಲ. ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್ ರೆಡ್ ಮತ್ತು ಬ್ಲ್ಯಾಕ್ ಸೇರಿದಂತೆ ವಿವಿಧ ಹೊಸ ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.50,860 ಗಳಾಗಿದೆ. ಆದರೆ ಹೊಸ ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕಿನ ಬೆಲೆಯನ್ನು 10 ಸಾವಿರದಷ್ಟು ಹೆಚ್ಚಿಸಿದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಇನ್ನು ಇತ್ತೀಚೆಗೆ ಬಿಡುಗಡೆಗೊಳಿಸಿದ ಬಿಎಸ್-6 ಹೆಚ್ಎಫ್ ಡಿಲಕ್ಸ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ವೆರಿಯೆಂಟ್ ರೂ.55,925 ಮತ್ತು ಹೈ ಎಂಡ್ ವೆರಿಯೆಂಟ್ ರೂ.57,250 ಬೆಲೆ ಹೊಂದಿದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಹೆಚ್ಎಫ್ ಡಿಲಕ್ಸ್ ಹೊಸ ಬೈಕ್ ಮಾದರಿಯು ಬಿಎಸ್-6 ಪ್ರೇರಿತ 100 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಹೊಂದಿದೆ. ಈ ಎಂಜಿನ್ 7.9-ಬಿ‍ಹೆಚ್‍ಪಿ ಪವರ್ ಮತ್ತು 8-ಎನ್ಎಂ ಟಾರ್ಕ್‌ ಅನ್ನು ಉತ್ಪಾದಿಸುತ್ತದೆ.

ಬಿ‍ಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಸ್ಪ್ಲೆಂಡರ್ ಪ್ಲಸ್ ಬೈಕ್

ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಬಜಾಜ್ ಪ್ಲಾಟಿನಾ ಮತ್ತು ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್‍‍‍ಗಳಿಗೆ ಪೈಪೋಟಿಯನ್ನು ಹೊಂದಿದೆ. ಬಿಎಸ್-6 ಸ್ಪ್ಲೆಂಡರ್ ಪ್ಲಸ್ ಬೈಕ್ ಹೊಸ ಬಣ್ಣದ ಆಯ್ಕೆಯೊಂದಿಗೆ ಆಕರ್ಷಕ ಲುಕ್ ಅನ್ನು ಹೊಂದಿದೆ.

Most Read Articles

Kannada
English summary
BS6 Hero Splendor Plus launched. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X