ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಹೀರೋ ಮೋಟೊಕಾರ್ಪ್ ಕಂಪನಿಯು ತನ್ನ ಹೊಸ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಹೀರೋ ಎಕ್ಸ್‌ಪಲ್ಸ್ 200 ಬೈಕ್ ಬಿಡುಗಡೆಯಾಗುವ ಮೊದಲೇ ಪ್ರಮುಖ ಮಾಹಿತಿಗಳು ಬಹಿರಂಗವಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಹೊಸ ಎಕ್ಸ್‌ಪಲ್ಸ್ 200 ಬೈಕಿನ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳ ಬಗ್ಗೆ ಮಾಹಿತಿಯು ಬಿಡುಗಡೆಗೂ ಮುನ್ನ ಬಹಿರಂಗವಾಗಿದೆ. ಬಿಎಸ್-6 ಎಕ್ಸ್‌ಪಲ್ಸ್ 200 ಬೈಕ್ ಹಿಂದಿನ ಬಿಎಸ್-4 ಮಾದರಿಗಿಂತ ಕಡಿಮೆ ಪವರ್ ಅನ್ನು ಉತ್ಪಾದಿಸುತ್ತದೆ. ಹೀರೋ ಮೋಟೊಕಾರ್ಪ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕನ್ನು ಬಿಡುಗಡೆ ಮಾಡುವ ಮೊದಲು ಮಾಹಿತಿಯನ್ನು ಬಹಿರಂಗಪಡಿಸಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಎಂಟ್ರಿ ಲೆವೆಲ್ ಎಕ್ಸ್‌ಪಲ್ಸ್ 200 ಬೈಕ್ ಅದೇ 199.6 ಸಿಸಿ ಎಂಜಿನ್‌ ಅನ್ನು ಹೊಂದಿರುತ್ತದೆ. ಹಿಂದಿನ ಬಿಎಸ್-4 ಎಕ್ಸ್‌ಪಲ್ಸ್ 200 ಮಾದರಿಯಲ್ಲಿ ಇದೇ ಎಂಜಿನ್ ಅನ್ನು ಅಳವಡಿಸಲಾಗಿತ್ತು. ಕಂಪನಿಯು ಇದೇ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಹೊಸ ಮಾದರಿಯಲ್ಲಿ ಏರ್/ಆಯಿಲ್-ಕೂಲಿಂಗ್ ಮತ್ತು ಫ್ಯೂಯಲ್ ಇಂಜೆಕ್ಷನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಹೊಸ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್‌ 8,500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6,400 ಆರ್‌ಪಿಎಂನಲ್ಲಿ 16.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಕ್ಸ್‌ಪಲ್ಸ್ 200 ಬೈಕಿನ 199.6 ಸಿಸಿ ಎಂಜಿನ್‌ 8,000 ಆರ್‌ಪಿಎಂನಲ್ಲಿ 18.1 ಬಿಹೆಚ್‌ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 17.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಬಿಎಸ್-6 ಎಕ್ಸ್‌ಪಲ್ಸ್ 200 ಬೈಕ್ ಹಿಂದಿನ ಮಾದರಿಗೆ ಹೋಲಿಸಿದರೆ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕಡಿಮೆಯಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಇದರ ಪವರ್ ಮತ್ತು ಟಾರ್ಕ್ ಅಂಕಿ ಅಂಶವು ಕಡಿಮೆಯಾಗಿದೆ. ಹೀರೋ ಎಕ್ಸ್‌ಪಲ್ಸ್ 200 ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದ ಬಳಿಕ ಹಿಂದಿನ ಮಾದರಿಗಿಂತ ತೂಕ ಹೆಚ್ಚಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಎಸ್-6 ಎಕ್ಸ್‌ಪಲ್ಸ್ ಬೈಕಿನಲ್ಲಿ ಎಕ್ಸಾಸ್ಟ್ ಪೈಪಿನ ಸ್ಥಾನವನ್ನು ಬದಲಾಯಿಸಲಾಗಿದೆ. ಈ ಬೈಕಿನ ಎಂಜಿನ್ ಬೆಲ್ಲಿ-ಪ್ಯಾನ್ ಅನ್ನು ಮರುವಿನ್ಯಾಸಗೊಳಿಸಲಾಗಿದೆ. ಇದು ಈ ಬೈಕಿನ ಗ್ರೌಂಡ್ ಕ್ಲಿಯರೆನ್ಸ್ ಮೇಲೆ ಪರಿಣಾಮ ಬೀರಬಹುದೇ ಎಂದು ನೋಡಬೇಕಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಈ ಬೈಕಿನಲ್ಲಿ ಸವಾರನ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಹೊಸ ಎಕ್ಸ್‌ಪಲ್ಸ್ 200 ಬೈಕಿನ ಮುಂಭಾಗದಲ್ಲಿ 37 ಎಂಎಂ ಲಾಂಗ್-ಟ್ರಾವೆಲ್ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ 10-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಹೊಂದಿರುತ್ತದೆ. ಬ್ರೇಕಿಂಗ್ ಸಿಸ್ಟಂಗಾಗಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಒಂದು ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಆದರೆ ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನಲ್ಲಿ ಪವರ್ ಕಡಿಮೆ ಮಾಡಲಾಗಿದೆ. ಈ ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕ್ ಹೆಚ್ಚಾಗಿ ಯುವ ಗ್ರಾಹಕರನ್ನು ಸೆಳೆಯುತ್ತದೆ.

Most Read Articles

Kannada
English summary
Hero Xpulse 200 BS6 Power & Torque Figures Revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X