ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲು ಪ್ರಾರಂಭಿಸಿದೆ. ಅಲ್ಲದೇ ಭಾರತದಲ್ಲಿ ಗ್ರಾಹಕರು ಕೂಡ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ.

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್, ಎಂಜಿ ಝಡ್ಎಸ್ ಮತ್ತು ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು ಯಶಸ್ವಿಯಾಗಿದೆ. ಇನ್ನು ದ್ವಿಚಕ್ರ ವಿಭಾಗದಲ್ಲಿ ಬೆಂಗಳೂರು ಮೂಲದ ಎಥರ್ ಎರ್ನಜಿ ಕಂಪನಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಕೂಡ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇನ್ನು ಜನಪ್ರಿಯ ಕಂಪನಿಗಳಾದ ಬಜಾಜ್ ಆಟೋ ಮತ್ತು ಟಿವಿಎಸ್ ಮೋಟಾರ್ ಕಂಪನಿಯು ಕ್ರಮವಾಗಿ ಚೇತಕ್ ಮತ್ತು ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರಾಟ ಮಾಡುತ್ತಿವೆ.

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಇನ್ನು ಹೋಂಡಾ ಮೋಟಾರ್‌ಸೈಕಲ್ ಕಂಪನಿಯ ಸರಣಿಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಆಕ್ಟಿವಾ ಸ್ಕೂಟರನ್ನು ಎಲೆಕ್ಟ್ರಿಕ್ ರೂಪಾದಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಗಳಾಗಿತ್ತು.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಆದರೆ ಇತ್ತೀಚೆಗೆ ಇಟಿ ಆಟೋಗೆ ನೀಡಿದ ಸಂದರ್ಶನದಲ್ಲಿ ಹೋಂಡಾ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಅಟ್ಸುಶಿ ಒಗಾಟಾ ಅವರು ತಮ್ಮ ಜನಪ್ರಿಯ ಆಕ್ಟಿವಾ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ,

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಪೆಟ್ರೋಲ್-ಸಿವಿಟಿ ಆವೃತ್ತಿಯಲ್ಲಿ ಹೆಚ್ಚು ಯಶಸ್ವಿಯನ್ನು ಕಂಡಿರುವ ಆಕ್ಟಿವಾ ಮಾದರಿಯನ್ನು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸುವುದು ಅಪಾಯಕಾರಿ ಎಂದು ಜಪಾನ್ ಮೂಲದ ವಾಹನ ತಯಾರಕ ಕಂಪನಿ ಹೋಂಡಾ ಸಂಸ್ಥೆ ನಂಬಿದೆ.

MOST READ: ಬಿಡುಗಡೆಯಾಯ್ತು ಕಡಿಮೆ ಬೆಲೆಯ ಜಿಮೊಪೈ ಮಿಸೊ ಮಿನಿ ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಪ್ರಸ್ತುತ ಬಿಎಸ್ 6 ಮಾದರಿಯೊಂದಿಗೆ ಎಲೆಕ್ಟ್ರಿಕ್ ಆಕ್ಟಿವಾ ರೂಪಾಂತರವನ್ನು ಪರಿಚಯಿಸುವ ಯಾವುದೇ ಯೋಜನೆಗಳಿಲ್ಲ, ಏಕೆಂದರೆ ಇಂದಿನ ತಂತ್ರಜ್ಞಾನಗಳು ಸಮಾನವಾದ ಐಸಿಇ ಮತ್ತು ಇವಿ ಉತ್ಪನ್ನಗಳನ್ನು ಹತ್ತಿರದಲ್ಲಿ ಬೆಲೆ ನಿಗದಿಪಡಿಸುವುದು ಕಷ್ಟಕರವಾಗಿದೆ.

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಏಕೆಂದರೆ ಇಂದಿನ ತಂತ್ರಜ್ಞಾನಗಳು ಸಮಾನವಾದ ಐಸಿಇ ಮತ್ತು ಇವಿ ಉತ್ಪನ್ನಗಳ ಬೆಲೆ ನಿಗದಿಪಡಿಸುವುದು ಕಷ್ಟಕರವಾಗಿದೆ. ಬ್ಯಾಟರಿ ವ್ಯವಸ್ಥೆ, ಬೆಲೆ ಕುಸಿತ ಮತ್ತು ಮೂಲಸೌಕರ್ಯಗಳು ಅಭಿವೃದ್ದಿಯಾಗುವವರಿಗೆ ಹೋಂಡಾ ಕಂಪನಿಯು ಕಾಯುವ ತಂತ್ರವನ್ನು ಹೊಂದಿರಬಹುದು.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಇನ್ನು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಇತ್ತೀಚೆಗೆ ತನ್ನ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರ್ ಬೆಲೆಯನ್ನು ಎರಡನೇ ಬಾರಿ ಹೆಚ್ಚಿಸಿದೆ. ಇದೀಗ ಎರಡನೇ ಬಾರಿ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರಿನ ಬೆಲೆಯನ್ನು ರೂ,955 ಗಳವರೆಗೆ ಹೆಚ್ಚಿಸಲಾಗಿದೆ. ಇದೀಗ ಈ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.65,419 ಗಳಾದರೆ, ಡಿಲಕ್ಸ್ ರೂಪಾಂತರದ ಬೆಲೆಯು ರೂ.66,919 ಗಳಾಗಿದೆ.

ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವುದಿಲ್ಲ ಜನಪ್ರಿಯ ಹೋಂಡಾ ಆಕ್ಟಿವಾ ಸ್ಕೂಟರ್

ಇನ್ನು ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಪೈಪೋಟಿ ನೀಡಲು ಹೋಂಡಾ ಕಂಪನಿಯು ತನ್ನ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಬಹುದು ಎಂಬ ವದಂತಿಗಳಿವೆ. ಆದರೆ ಭವಿಷ್ಯದಲ್ಲಿ ಹೋಂಡಾ ಕಂಪನಿಯು ಎಲೆಕ್ಟ್ರಿಕ್ ಮಾದರಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಹುದು.

Most Read Articles

Kannada
English summary
Honda Activa Electric Launch Plans Dismissed. Read In Kannada.
Story first published: Wednesday, August 26, 2020, 20:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X