ಬಿಎಸ್-6 ಎಫೆಕ್ಟ್- ಎವಿಯೆಟರ್ ಮತ್ತು ಗ್ರಾಜಿಯಾ ಸ್ಕೂಟರ್ ಮಾರಾಟ ಕೈಬಿಟ್ಟ ಹೋಂಡಾ?
ದೇಶ್ಯಾದ್ಯಂತ ಏಪ್ರಿಲ್ 1ರಿಂದಲೇ ಬಿಎಸ್-6 ಎಮಿಷನ್ ನಿಯಮವು ಕಡ್ಡಾಯವಾಗಿ ಜಾರಿಗೆ ಬಂದಿದ್ದು, ಹೊಸ ನಿಯಮ ಪಾಲನೆ ಮಾಡಲು ಸಾಧ್ಯವಿಲ್ಲದ ಹಲವಾರು ವಾಹನ ಮಾದರಿಗಳು ಮಾರಾಟದಿಂದ ಸ್ಥಗಿತಗೊಂಡಿದೆ.

ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಬಿಎಸ್-4 ವಾಹನಗಳ ಮಾರಾಟವನ್ನು ಏಪ್ರಿಲ್ 1ರಿಂದ ನಿಷೇಧಗೊಳಿಸಿರುವ ಸುಪ್ರೀಂಕೋರ್ಟ್ ಬಿಎಸ್-6 ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಕಡ್ಡಾಯಗೊಳಿಸಿದ್ದು, ಹೋಂಡಾ ಸೇರಿದಂತೆ ಹಲವಾರು ಕಂಪನಿಗಳು ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಲು ಸಾಧ್ಯವಿಲ್ಲದ ಹಲವಾರು ಜನಪ್ರಿಯ ವಾಹನ ಮಾದರಿಗಳನ್ನು ಮಾರಾಟದಿಂದ ಕೈಬಿಟ್ಟಿವೆ.

ಹೋಂಡಾ ಮೋಟಾರ್‌ಸೈಕಲ್ ಸಹ ಈಗಾಗಲೇ ತನ್ನ ಪ್ರಮುಖ ದ್ವಿಚಕ್ರ ವಾಹನಗಳನ್ನು ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಿ ಮಾರಾಟಕ್ಕೆ ಚಾಲನೆ ನೀಡಿದ್ದರೂ ಎವಿಯೆಟರ್ ಮತ್ತು ಗ್ರಾಜಿಯಾ ಸ್ಕೂಟರ್‌ಗಳಲ್ಲಿ ಹೊಸ ಎಂಜಿನ್ ಅನ್ನು ಇದುವರೆಗೂ ಪರಿಚಯಿಸಿಲ್ಲ.

ಜೊತೆಗೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲೂ ಎವಿಯೆಟರ್ ಮತ್ತು ಗ್ರಾಜಿಯಾ ಮಾಹಿತಿಗಳನ್ನು ತೆಗದುಹಾಕಿರುವ ಹೋಂಡಾ ಕಂಪನಿಯು ಎರಡು ಸ್ಕೂಟರ್‌ಗಳನ್ನು ಮಾರಾಟದಿಂದ ಸ್ಥಗಿತಗೊಳಿಸುವ ಸೂಚನೆ ನೀಡಿದ್ದು, ಉನ್ನತೀಕರಿಸುವ ಬಗ್ಗೆಯೂ ಯಾವುದೇ ಸ್ಪಷ್ಟನೆಗಳಿಲ್ಲ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಸದ್ಯಕ್ಕೆ ದೇಶಾದ್ಯಂತ ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಲಾಕ್ ಡೌನ್ ತೆರವುಗೊಳಿಸಿದ ನಂತರವಷ್ಟೇ ಎವಿಯೆಟರ್ ಮತ್ತು ಗ್ರಾಜಿಯಾ ಸ್ಕೂಟರ್ ಮಾರಾಟ ಮುಂದುವರಿಯುತ್ತಾ? ಇಲ್ಲವೇ ಸ್ಥಗಿತಗೊಳ್ಳಲಿವೆಯಾ ಎನ್ನುವ ಬಗ್ಗೆ ಸ್ಪಷ್ಟನೆ ದೊರೆಯಿದೆ. ಎಟಿಯೆಟರ್ ಮಾದರಿಯು 109 ಸಿಸಿ ಎಂಜಿನ್ ಹೊಂದಿದ್ದರೆ ಗ್ರಾಜಿಯಾ ಸ್ಕೂಟರ್ ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ 124.9 ಸಿಸಿ ಎಂಜಿನ್ ಹೊಂದಿತ್ತು.

ಆದರೆ ಕೆಲವು ಸ್ಕೂಟರ್ ಮಾದರಿಗಳ ಮೇಲೆ ಹೆಚ್ಚು ಒತ್ತು ನೀಡುತ್ತಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆಯಲ್ಲಿ ಹಿನ್ನಡೆ ಅನುಭವಿಸಿರುವ ಸ್ಕೂಟರ್ಗಳನ್ನು ಕೈಬಿಡುತ್ತಿದ್ದು, ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಪ್ರೀಮಿಯಂ ಸ್ಕೂಟರ್‌ಗಳ ಉತ್ಪಾದನೆಯತ್ತ ಮುಖ ಮಾಡಿದೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಇನ್ನು ಭಾರತದಲ್ಲಿ ಸದ್ಯಕ್ಕೆ ಏಪ್ರಿಲ್ 24ರ ತನಕ ಬಿಎಸ್-4 ವಾಹನ ಮಾರಾಟಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂಕೋರ್ಟ್, ಲಾಕ್ ಡೌನ್‌ನಿಂದಾಗಿ ಏಪ್ರಿಲ್ 14ರಿಂದ 10ದಿನಗಳ ಕಾಲ ಬಿಎಸ್-4 ವಾಹನಗಳ ಮಾರಾಟಕ್ಕೆ ಷರತ್ತುಬದ್ದ ಅವಕಾಶ ನೀಡಿದೆ.

2018ರಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್‌ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.

ಬಿಎಸ್-6 ಜಾರಿಗೂ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.
MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ

ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ.

ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.

ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.


Click it and Unblock the Notifications