ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ತೀವ್ರ ಬೆಳವಣಿಗೆ ಸಾಧಿಸುತ್ತಿರುವ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸಾಮಾನ್ಯ ದ್ವಿಚಕ್ರಗಳ ಮಾರಾಟದ ಜೊತೆಗೆ ಪ್ರೀಮಿಯಂ ಬೈಕ್ ಮಾದರಿಗಳ ಮಾರಾಟವನ್ನು ಸಹ ಹೆಚ್ಚಿಸುತ್ತಿದ್ದು, ಪ್ರೀಮಿಯಂ ಬೈಕ್ ಮಾದರಿಗಳ ಮಾರಾಟಕ್ಕಾಗಿ ಪ್ರತ್ಯೇಕ ಶೋರೂಂಗಳ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತದಲ್ಲಿ ಎರಡು ಮಾದರಿಯ ಬೈಕ್ ಮಾರಾಟ ಮಳಿಗೆಗಳ ಸೌಲಭ್ಯ ಹೊಂದಿದ್ದು, 350 ಸಿಸಿಗಿಂತ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳನ್ನು ಸಾಮಾನ್ಯ ಬೈಕ್ ಶೋರೂಂಗಳ ಮೂಲಕ ಮತ್ತು 350 ಸಿಸಿ ಮೇಲ್ಪಟ್ಟ ಬೈಕ್ ಮಾದರಿಗಳ ಮಾರಾಟಕ್ಕಾಗಿ ಬಿಗ್‌ವಿಂಗ್ ಶೋರೂಂಗಳ ಮೂಲಕ ಮಾರಾಟಗೊಳಿಸುತ್ತಿದೆ. ಸಾಮಾನ್ಯ ಶೋರೂಂ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಮಾರಾಟ ಜಾಲ ಹೊಂದಿದ್ದರೂ ಬಿಗ್‌ವಿಂಗ್ ಮಾರಾಟ ಮಳಿಗೆಗಳ ಪ್ರಮುಖ ಮೆಟ್ರೋ ನಗರಗಳಲ್ಲಿ ಮಾತ್ರವೇ ಕಾರ್ಯಾಚರಣೆ ಹೊಂದಿವೆ.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಬಿಗ್‌ವಿಂಗ್ ಮಾರಾಟ ಮಳಿಗೆಗಳ ವಿಸ್ತರಣೆಗೆ ಯೋಜನೆ ರೂಪಿಸಿರುವ ಹೋಂಡಾ ಕಂಪನಿಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಹೊಸ ಬೈಕ್ ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದ್ದು, ಇತ್ತೀಚೆಗೆ ನಮ್ಮ ಬೆಂಗಳೂರಿನ ಲಾವೆಲ್ಲೆ ರಸ್ತೆಯಲ್ಲಿ ಬಿಗ್‌ವಿಂಗ್ ಟಾಪ್ ಲೈನ್ ಶೋರೂಂಗೆ ಚಾಲನೆ ನೀಡಲಾಯ್ತು.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಬಿಗ್‌ವಿಂಗ್ ಮಾರಾಟ ಮಳಿಗೆಗಳಲ್ಲೂ ಎರಡು ಮಾದರಿಯ ಮಾರಾಟ ಸೌಲಭ್ಯಗಳನ್ನು ಪರಿಚಯಿಸಿರುವ ಹೋಂಡಾ ಕಂಪನಿಯು ಸಾಮಾನ್ಯ ಬಿಗ್‌ವಿಂಗ್ ಮಾರಾಟ ಮಳಿಗೆಗಳಲ್ಲಿ 350 ಸಿಸಿಯಿಂದ 500 ಸಿಸಿ ಬೈಕ್ ಮಾದರಿಗಳನ್ನು ಮತ್ತು ಬಿಗ್‌ವಿಂಗ್ ಟಾಪ್‌ಲೈನ್ ಮಾರಾಟ ಮಳಿಗೆಗಳಲ್ಲಿ 350 ಸಿಸಿ ಯಿಂದ 1800 ಸಿಸಿ ಸಾಮಾರ್ಥ್ಯದ ಬೈಕ್ ಮಾದರಿಗಳನ್ನು ಮಾರಾಟ ಮಾಡುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ದೇಶಾದ್ಯಂತ 23 ಬಿಗ್‌ವಿಂಗ್ ಮಾರಾಟ ಮಳಿಗೆಗಳನ್ನು ಹೊಂದಿರುವ ಹೋಂಡಾ ಕಂಪನಿಯು ಕೇವಲ ಮೂರು ಬಿಗ್‌ವಿಂಗ್ ಟಾಪ್‌ಲೈನ್ ಮಾರಾಟ ಮಳಿಗೆಗಳಲ್ಲಿ ತನ್ನ ಬ್ರಾಂಡ್ ಬೈಕ್ ಮಾದರಿಯನ್ನು ಮಾರಾಟ ಮಾಡುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಬಿಗ್‌ವಿಂಗ್ ಮತ್ತು ಬಿಗ್‌ವಿಂಗ್ ಟಾಪ್‌ಲೈನ್ ಎರಡು ಮಾರಾಟ ಮಳಿಗೆಗಳನ್ನು ಹೊಂದಿದಂತಾಗಿದೆ.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಸಿಲಿಕಾನ್ ಮೋಟಾರ್ಸ್ ಶೋರೂಂನಲ್ಲಿ ಈ ಹಿಂದೆ ಬಿಗ್‌ವಿಂಗ್ ಮಾರಾಟ ಮಳಿಗೆಯನ್ನು ತೆರಿದಿದ್ದ ಹೋಂಡಾ ಕಂಪನಿಯು ಇದೀಗ ಪ್ರತ್ಯೇಕವಾಗಿ ಲಾವೆಲ್ಲೆ ರಸ್ತೆಯಲ್ಲಿ ಹೊಸ ಬಿಗ್‌ವಿಂಗ್ ಟಾಪ್‌ಲೈನ್ ಮಾರಾಟ ಮಳಿಗೆಗೆ ಚಾಲನೆ ನೀಡಿದ್ದು, ಬೆಂಗಳೂರಿನಲ್ಲಿ ಮೊದಲನೆ ಮತ್ತು ಭಾರತದಲ್ಲಿ ಮೂರನೇ ಟಾಪ್‌ಲೈನ್ ಮಾರಾಟ ಮಳಿಗೆ ಇದಾಗಿದೆ.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಹೊಸ ಮಾರಾಟ ಮಳಿಗೆಯಲ್ಲಿ ಹೋಂಡಾ ನಿರ್ಮಾಣದ ಹೈನೆಸ್ ಸಿಬಿ350, ಸಿಬಿಆರ್650ಆರ್, ಸಿಬಿ1000ಆರ್, ಸಿಬಿಆರ್1000ಆರ್‌ಆರ್, ಆಫ್ರಿಕಾ ಟ್ವಿನ್ ಮತ್ತು ಗೋಲ್ಡ್ ವಿಂಗ್ ಬೈಕ್ ಮಾದರಿಗಳನ್ನು ಮಾರಾಟ ಮಾಡಲಾಗುತ್ತಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಹೊಸ ಪ್ರೀಮಿಯಂ ಬೈಕ್‌ಗಳಿಗೆ ನಿಗದಿತ ಸಮಯದಲ್ಲಿ ನುರಿತ ಸಿಬ್ಬಂದಿಯಿಂದ ಸರ್ವಿಸ್ ಒದಗಿಸಲು ಮೈಸೂರು ರಸ್ತೆಯಲ್ಲಿರುವ ನ್ಯೂ ಟಿಂಬರ್ ಯಾರ್ಡ್ ಲೇಔಟ್‌ನ ಹೋಂಡಾ ಸರ್ವಿಸ್ ಸೆಂಟರ್‌ನಲ್ಲಿ ಪ್ರತ್ಯೇಕ ಸರ್ವಿಸ್ ವಿಭಾಗವನ್ನು ಆರಂಭಿಸಿದ್ದು, ಬಿಗ್‌ವಿಂಗ್ ಶೋರೂಂಗಳಲ್ಲಿ ಇದೀಗ ಹೈನೆಸ್ ಸಿಬಿ350 ಕ್ಲಾಸಿಕ್ ಬೈಕ್ ಪ್ರಮುಖ ಆಕರ್ಷಣೆಯಾಗಿದೆ.

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಹೊಸದಾಗಿ ಬಿಡುಗಡೆ ಮಾಡಲಾಗಿರುವ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಬೈಕ್ ಮಾದರಿಯ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.1.85 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು 1.90 ಲಕ್ಷಕ್ಕೆ ನಿಗದಿಪಡಿಸಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ನಮ್ಮ ಬೆಂಗಳೂರಿನಲ್ಲಿ ಆರಂಭವಾಯ್ತು ಹೋಂಡಾದ ಮೊದಲ ಬಿಗ್‌ವಿಂಗ್ ಟಾಪ್‌ಲೈನ್ ಡೀಲರ್ಸ್

ಬಿಗ್‌ವಿಂಗ್ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟಗೊಳ್ಳುವ ಹೊಸ ಬೈಕ್ ಮಾದರಿಯು 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮತ್ತು ಜಾವಾ ಬೈಕ್‌ಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

Most Read Articles

Kannada
English summary
Honda BigWing TopLine Premium Dealerships Introduced. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X