ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಗುಣವಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ವಾಹನ ಮಾದರಿಗಳನ್ನು ಉನ್ನತೀಕರಿಸುತ್ತಿದ್ದು, ಹೋಂಡಾ ಮೋಟಾರ್‌ಸೈಕಲ್ ಕೂಡಾ ಬಿಎಸ್-6 ಮಾದರಿಯ ಸ್ಕೂಟರ್ ಮತ್ತು ಬೈಕ್‌ಗಳನ್ನು ಉನ್ನತೀಕರಿಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವಾ, ಆಕ್ಟಿವಾ 125 ಮತ್ತು ಎಸ್‌ಪಿ 125 ಬೈಕ್ ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಎಮಿಷನ್ ಜಾರಿಗೆ ಮುನ್ನ ಬಿಡುಗಡೆಯಾಗಲಿರುವ ಹೊಸ ದ್ವಿಚಕ್ರ ವಾಹನಗಳಿಗೆ ದಾಖಲೆ ಪ್ರಮಾಣದ ಬೇಡಿಕೆ ಹರಿದು ಬಂದಿದೆ. ಹೋಂಡಾ ಸಂಸ್ಥೆಯು ಇದುವರೆಗೆ 1 ಲಕ್ಷ ಯುನಿಟ್ ಬಿಎಸ್-6 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಬಿಎಸ್-4 ವೈಶಿಷ್ಟ್ಯತೆಯ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆ ಹೊಂದಿರುವ ಬಿಎಸ್-6 ಎಂಜಿನ್ ಪ್ರೇರಿತ ಆಕ್ಟಿವಾ, ಆಕ್ಟಿವಾ 125 ಮತ್ತು ಎಸ್‌ಪಿ 125 ಬೈಕ್ ಮಾದರಿಯು ದುಬಾರಿ ಬೆಲೆ ಹೊಂದಿದ್ದರೂ ಗ್ರಾಹಕರನ್ನು ಸೆಳೆಯುತ್ತಿದ್ದು, ಮೈಲೇಜ್ ವಿಚಾರದಲ್ಲಿ ಹೊಸ ಎಂಜಿನ್ ಪ್ರೇರಿತ ವಾಹನಗಳು ಆಕರ್ಷಣೆಗೆ ಕಾರಣವಾಗಿವೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಆಕ್ಟಿವಾ 6ಜಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.63,912ಕ್ಕೆ(ಸ್ಟ್ಯಾಂಡರ್ಡ್) ಮತ್ತು ಟಾಪ್ ವೆರಿಯೆಂಟ್ ಡಿಲಕ್ಸ್ ರೂ.65,412 ಬೆಲೆ ಪಡೆದುಕೊಂಡಿದೆ. ಹೊಸ ಆಕ್ಟಿವಾ 6ಜಿ ಸ್ಕೂಟರ್ ಮಾದರಿಯು ಈ ಹಿಂದಿನ ಆಕ್ಟಿವಾ 5ಜಿ ಗಿಂತಲೂ ರೂ.8 ಸಾವಿರದಷ್ಟು ಹೆಚ್ಚುವರಿ ಪಡೆದುಕೊಂಡಿದ್ದು, ಬೆಲೆ ಹೆಚ್ಚಳಕ್ಕೆ ತಕ್ಕಂತೆ ಎಂಜಿನ್ ಪರ್ಫಾಮೆನ್ಸ್ ಮತ್ತು ಪ್ರೀಮಿಯಂ ಫೀಚರ್ಸ‌ಗಳಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

109 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಹೊಂದಿರುವ ಆಕ್ಟಿವಾ 6ಜಿ ಮಾದರಿಯಲ್ಲಿ ಆಕ್ಟಿವಾ 125 ನಂತರ ಎರಡನೇ ಸ್ಕೂಟರ್ ಮಾದರಿಯಲ್ಲಿ ಪಿಜಿಎಂ-ಎಫ್ಐ ತಂತ್ರಜ್ಞಾನ ಬಳಕೆ ಮಾಡಲಾಗಿದ್ದು, ಹೊಸ ತಂತ್ರಜ್ಞಾನದಿಂದ ಪರ್ಫಾಮೆನ್ಸ್ ಹೆಚ್ಚಳವಾಗಿರುವುದಲ್ಲದೇ ಅತಿ ಕಡಿಮೆ ಮಾಲಿನ್ಯ ಹೊರಸೂಸುವಿಕೆಯ ಮೂಲಕ ಶೇ.10 ರಷ್ಟು ಹೆಚ್ಚುವರಿ ಮೈಲೇಜ್ ಹಿಂದಿರುಗಿಸಬಲ್ಲ ಗುಣಲಕ್ಷಣವನ್ನು ಹೊಂದಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಹಾಗೆಯೇ ಹೊಸ ಆಕ್ಟಿವಾ 125 ಸ್ಕೂಟರ್ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಡಿಸೈನ್ ಪ್ರೇರಿತ ಫ್ರಂಟ್ ಅಪಾರ್ನ್, ಎಲ್ಇಡಿ ಡಿಆರ್‌ಎಲ್ಎಸ್ ಜೊತೆ ಟರ್ನ್ ಇಂಡಿಕೇಟರ್ ನೀಡಲಾಗಿದೆ. ಕ್ರೋಮ್ ಡಿಸೈನ್‌ನಿಂದಾಗಿ ಹೊಸ ಸ್ಕೂಟರಿಗೆ ಮತ್ತಷ್ಟು ಪ್ರೀಮಿಯಂ ವಿನ್ಯಾಸವನ್ನು ಒದಗಿಸಿದ್ದು, ಇದು ಸ್ಕೂಟರ್ ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಇದರೊಂದಿಗೆ ಬಿಎಸ್-6 ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮತ್ತು ಎಸ್‌ಪಿ 125 ಬೈಕ್ ಮಾದರಿಯು ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ ಎನ್ನಬಹುದು.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಆಕ್ಟಿವಾ 125 ಸ್ಕೂಟರ್ ಮಾದರಿಯು ಬಿಎಸ್-6 ಪ್ರೇರಿತ 124-ಸಿಸಿ ಸಿಂಗಲ್ ಸಿಲಿಂಡರ್, ಫ್ಯೂಲ್-ಇಂಜೆಕ್ಷಡ್ ಯುನಿಟ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮಾದರಿಯು 8.4-ಬಿಎಚ್‌ಪಿ ಮತ್ತು 10.54-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಹೊಸ ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಅಂದ್ರೆ ಅದು ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯ. ಹೌದು, ಹೋಂಡಾ ಸಂಸ್ಥೆಯು ಮೊದಲ ಬಾರಿಗೆ ಆಕ್ಟಿವಾ 125 ಸ್ಕೂಟರ್‌ನಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಬಳಕೆ ಮಾಡಿದ್ದು, ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಇಂಧನ ವ್ಯರ್ಥವನ್ನು ತಪ್ಪಿಸಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಎಸ್‌ಪಿ 125 ಬೈಕ್ ಮಾದರಿಯು ಸಹ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಡ್ರಮ್ ಹಾಗೂ ಡಿಸ್ಕ್ ಎಂಬ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರುವ ಎಸ್‍‍ಪಿ 125 ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.77,100 ಬೆಲೆ ಪಡೆದುಕೊಂಡಿದೆ.

ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು..!

ಎಸ್‌ಪಿ 125 ಬೈಕಿನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 10.7 ಬಿಹೆಚ್‌ಪಿ ಪವರ್ ಹಾಗೂ 9,000 ಆರ್‌ಪಿಎಂನಲ್ಲಿ 10.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Most Read Articles

Kannada
English summary
Honda Registers Over 1 Lakh Units In Collective Sales Of BS6 Two-Wheelers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X