ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಹೋಂಡಾ ಸಿಬಿ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಮ್ಯೂಟರ್ ಬೈಕುಗಳಲ್ಲಿ ಒಂದಾಗಿದೆ. ಕಳೆದ ತಿಂಗಳು ಹೋಂಡಾ ಸಿಬಿ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಹೊಂಡಾ ಕಂಪನಿಯು 2020ರ ಸೆಪ್ಟಂಬರ್ ತಿಂಗಳಲ್ಲಿ ಸಿಬಿ ಶೈನ್ ಬೈಕ್ 1,18,004 ಯುನಿ‍‍ಟ್‍‍ಗಳನ್ನು ಮಾರಾಟಗೊಳಿಸಿವೆ. ಕಳೆದ ತಿಂಗಳು ಸಿವಿ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಬೈಕ್ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಹೋಂಡಾ ಶೈನ್ ಬಿಡುಗಡೆಯಾದಗಿನಿಂದ ಅತಿ ಹೆಚ್ಚು ಮಾರಾಟವನ್ನು ಕಳೆದ ತಿಂಗಳು ಕಂಡಿದೆ. ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಲ್ಲಿ ಹೋಂಡಾ ಸಿಬಿ ಶೈನ್ 88,893 ಯುನಿ‍‍ಟ್‍‍ಗಳನ್ನು ಮಾರಾಟವಾಗಿವೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳ ಮಾರಾಟವನ್ನು ಹೋಲಿಸಿದರೆ ಮಾರಾಟದಲ್ಲಿ ಶೇ.33ರಷ್ಟು ಬೆಳವಣಿಗೆಯನ್ನು ಕಂಡಿದೆ. ಹೋಂಡಾ ಶೈನ್ ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಹೋಂಡಾ ಸಿಬಿ ಶೈನ್ ಡ್ರಮ್ ರೂಪಾಂತರದ ಬೆಲೆಯು ರೂ.69,415 ಗಳಾದರೆ, ಡಿಸ್ಕ್ ರೂಪಾಂತರದ ಬೆಲೆಯು ರೂ.74,115 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ..

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳಬಹುದಾದ ಎಂಜಿನ್ ಬಗ್ಗೆ ಹೇಳುವುದಾದರೆ, ಹೋಂಡಾ ಸಿಬಿ ಶೈನ್ ಬೈಕಿನಲ್ಲಿ 124 ಸಿಸಿ, ಸಿಂಗಲ್-ಸಿಲಿಂಡರ್, ನಾಲ್ಕು-ಸ್ಟ್ರೋಕ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 10.7 ಬಿಹೆಚ್‍ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಹೋಂಡಾ ಸಿಬಿ ಶೈನ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಮಾದರಿಯ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, 130 ಎಂಎಂ ಫ್ರಂಟ್ ಮತ್ತು ರಿಯರ್ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

2020ರ ಸೆಪ್ಟೆಂಬರ್‌ನಲ್ಲಿ ಭಾರತೀಯ ಬಿಡುಗಡೆಯಲ್ಲಿ ಹೋಂಡಾ ಮಾರಾಟದಲ್ಲಿ ಎರಡನೇ ಸ್ಥಾನ ಗಳಿಸಲು ಸಿಬಿ ಶೈನ್ ಒಂದು ಪ್ರಮುಖ ಕಾರಣವಾಗಿತ್ತು, ಹೀರೋ ಮೊಟೊಕಾರ್ಪ್‌ನ ನಂತರ ಜಪಾನಿನ ದ್ವಿಚಕ್ರ ವಾಹನ ತಯಾರಕರಾದ ಹೋಂಡಾ ಶೇ.27.08 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಯ್ತು ಹೋಂಡಾ ಸಿಬಿ ಶೈನ್ ಬೈಕ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬೈಕುಗಳನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಹೋಂಡಾ ಕಂಪನಿಯು ಇನ್ನು ಹೊಸ ಮಾದರಿಗಳನ್ನು ಬಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಯೋಚನೆ ರೂಪಿಸುತ್ತಿದೆ. ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಪ್ರಯತ್ನಿಸುತ್ತದೆ.

Most Read Articles

Kannada
English summary
Honda CB Shine Sets New Record With 1.18 Lakh Unit Sales in September. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X