Just In
- 18 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Movies
ಫೆಬ್ರವರಿ ಟು ಮೇ: ಸ್ಟಾರ್ಸ್ ಚಿತ್ರಗಳ ರಿಲೀಸ್ ದಿನಾಂಕ ಫಿಕ್ಸ್, ಡೇಟ್ ಈಗಲೇ ಲಾಕ್ ಮಾಡ್ಕೊಳ್ಳಿ!
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಗಲಿದೆ ಬಿಎಸ್-6 ಹೋಂಡಾ ಸಿಬಿ300ಆರ್ ಬೈಕ್
ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ತನ್ನ ಪ್ರೀಮಿಯಂ ಸಿಬಿ300ಆರ್ ಬೈಕಿನ ಹೆಸರನ್ನು ತನ್ನ ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿತ್ತು. ಇದೀಗ ಹೋಂಡಾ ಕಂಪನಿಯು ಸಿಬಿ300ಆರ್ ಬೈಕನ್ನು ಮತ್ತೊಮ್ಮೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಹೋಂಡಾ ಸಿಬಿ300ಆರ್ ಮಾದರಿಯು ಮೊದಲ ನಿಯೊ-ರೆಟ್ರೊ ಸ್ಟ್ರೀಟ್‌ಫೈಟರ್ ಬೈಕ್ ಆಗಿದೆ. ಸಿಬಿ300ಆರ್ ಹಿಂದಿನ ಮಾದರಿಯನ್ನು ಸಿಕೆಡಿ ಮೂಲಕ ಭಾರತಕ್ಕೆ ತರಲಾಗಿತ್ತು. ಇದರಿಂದಾಗಿ ಸಿಬಿ300ಆರ್ ಬೈಕಿನ ಪ್ರತಿಸ್ಪರ್ಧಿ ಮಾದರಿಗಳಿಗಿಂತ ಹೆಚ್ಚಿನ ಬೆಲೆಯನ್ನು ಹೊಂದಿತ್ತು. ಆದರೂ ಈ ಹೋಂಡಾ ಸಿಬಿ300ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಎರಡೇ ತಿಂಗಳುಗಳಲ್ಲಿ ಇದರ 500 ಯುನಿಟ್ ಗಳು ಮಾರಾಟವಾಗಿತ್ತು. ಆದರೆ ಇಲ್ಲಿಯವರೆಗೆ ಈ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ.

ಅಲ್ಲದೇ ಈ ಸಿಬಿ300ಆರ್ ಬೈಕಿನ ಹೆಸರನ್ನು ವೆಬ್‌ಸೈಟ್ ನಿಂದ ತೆಗೆದುಹಾಕಲಾಗಿತ್ತು. ಆದರೆ ಇದೀಗ ಹೋಂಡಾ ಕಂಪನಿಯು ಈ ಬೈಕನ್ನು ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೋಂಡಾ ಸಿಬಿ300ಆರ್ ಬೈಕ್ ವಾಸ್ತವವಾಗಿ ಜಪಾನಿನ ಉತ್ಪಾದಕರ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಪ್ರೀಮಿಯಂ ಬೈಕು ಎಂಬುದು ಗಮನಿಸ ಬೇಕಾದ ಅಂಶವಾಗಿದೆ. ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಜನಪ್ರಿಯ ಸಿಬಿ300ಆರ್ ಬೈಕ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಹೋಂಡಾ ತನ್ನ ಬಿಗ್‌ವಿಂಗ್ ಡೀಲರುಗಳ ವ್ಯಾಪ್ತಿಯನ್ನು ವಿಸ್ತರಿಸಲು ಯೋಜಿಸುತ್ತಿದೆ. ಇದು ಪ್ರೀಮಿಯಂ ಬೈಕುಗಳನ್ನು ದೇಶಾದ್ಯಂತ ಹೆಚ್ಚು ಮಾರಾಟ ಮಾಡಲು ಸಹಾಯ ಮಾಡುತ್ತದೆ. ಹೋಂಡಾ ಕಂಪನಿಯು ಸಿಬಿ300ಆರ್ ಬೈಕನ್ನು ತನ್ನ ಬಿಗ್‌ವಿಂಗ್ ಡೀಲರುಗಳ ಮೂಲಕ ಮಾರಾಟ ಮಾಡಲಾಗುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಪ್ರಸ್ತುತ ತಲೆಮಾರಿನ ಸಿಬಿ300ಆರ್ ಬೈಕಿನಲ್ಲಿ ಆಧುನಿಕ ಎಲ್‌ಇಡಿ ತಂತ್ರಜ್ಞಾನದೊಂದಿಗೆ ವೈವಿಧ್ಯಮಯ ಜೆಡ್ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಈ ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಈ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಯುಎಸ್ಡಿ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಇನ್ನು ಈ ಬೈಕಿನಲ್ಲಿ ಬ್ರೇಕಿಂಗ್ ಸಿಸ್ಟಂಗಾಗಿ ಎರಡು ಕಡೆಯಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಹಿಂದಿನ ಮಾದರಿ ಹೋಂಡಾ ಸಿಬಿ300ಆರ್ ನಲ್ಲಿ ಸಿಂಗಲ್-ಸಿಲಿಂಡರ್, 286 ಸಿಸಿ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 31.4 ಬಿಹೆಚ್‍ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೋಂಡಾ ಕಂಪನಿಯು ಸಿಬಿ300ಆರ್ ಬೈಕನ್ನು ಸ್ಥಳೀಯವಾಗಿ ಉತ್ಪಾದನೆ ಮಾಡಲು ಯೋಜನೆ ರೂಪಿಸಬಹುದು. ಸ್ಥಳೀಯವಾಗಿ ಈ ಬೈಕನ್ನು ಅಭಿವೃದ್ದಿಪಡಿಸಿದರೆ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡಬಹುದು. ಹೋಂಡಾ ಸಿಬಿ300ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಮೊಜೊ, ಬಿಎಂಡಬ್ಲ್ಯು ಜಿ 310 ಆರ್ ಮತ್ತು ಟಿವಿಎಸ್ ಅಪಾಚೆ 310 ಆರ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.