Just In
- 10 min ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 52 min ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 2 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗ್ರಾಹಕರ ಕೈಸೇರಿದ ಹೋಂಡಾ ಮೊದಲ ಹೈನೆಸ್ ಸಿಬಿ350 ಕ್ಲಾಸಿಕ್ ಬೈಕ್
ಹೈನೆಸ್ ಸಿಬಿ 350 ಬೈಕ್ ಮಾದರಿಯನ್ನು ಪ್ರಮುಖ ಡೀಲರ್ಸ್ಗಳಿಗೆ ರವಾನೆ ಮಾಡಲು ಚಾಲನೆ ನೀಡಿದ್ದ ಹೋಂಡಾ ಮೋಟಾರ್ಸೈಕಲ್ ಕಂಪನಿಯು ಇದೀಗ ಹೊಸ ಬೈಕ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟದಲ್ಲಿ ಆರ್ಇ ಕ್ಲಾಸಿಕ್ ಮತ್ತು ಜಾವಾ ಬೈಕ್ಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
ಹೋಂಡಾ ಮೋಟಾರ್ಸೈಕಲ್ ಕಂಪನಿಯು ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್ಗಳಲ್ಲಿ ಅಭಿವೃದ್ದಿಗೊಳಿಸಿದ್ದು, ಹೊಸ ಬೈಕ್ ಮಾದರಿಯ ಬೆಲೆಯನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.1.85 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು 1.90 ಲಕ್ಷಕ್ಕೆ ನಿಗದಿಪಡಿಸಿದೆ. ಹೊಸ ಬೈಕ್ ಮಾದರಿಯನ್ನು ಹೋಂಡಾ ಮೋಟಾರ್ಸೈಕಲ್ ತನ್ನ ಪ್ರೀಮಿಯಂ ಬೈಕ್ ಮಾರಾಟ ಮಳಿಗೆಯಾದ ಬಿಗ್ವಿಂಗ್ ಡೀಲರ್ಸ್ ಮೂಲಕ ಮಾರಾಟ ಮಾಡುತ್ತಿದ್ದು, ಈ ಬೈಕ್ 350 ಕ್ಲಾಸಿಕ್ ರೆಟ್ರೊ-ಡಿಸೈನ್ ಥೀಮ್ ವಿನ್ಯಾಸವನ್ನು ಹೊಂದಿದೆ.
ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.
ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.
ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.
ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್
ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ನೊಂದಿಗೆ 20.8-ಬಿಎಚ್ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಹೈನೆಸ್ ಸಿಬಿ 350 ಹೊಸದಾಗಿ ತಯಾರಿಸುವ ಸ್ಟೀಲ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಮ್ ಜೋಡಿಸಲಾಗಿದ್ದು, ಈ ಫ್ರೇಮ್ ಎಂಜಿನ್ ಅನ್ನು ಲೋ ಮೌಂಟ್ ಮಾಡಲು ನೆರವಾಗುತ್ತದೆ. ಜೊತೆಗೆ ವೇಗದ ಸವಾರಿಯನ್ನು ಸರಳಗೊಳಿಸುತ್ತದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಹಾಗೆಯೇ ಹೋಂಡಾ ಹೈನೆಸ್ ಸಿಬಿ 350 ಬೈಕಿನ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್-ಅಬ್ಸಾವರ್ ಗಳನ್ನು ಅಳವಡಿಸಲಾಗಿದ್ದು, ಬ್ರೇಕಿಂಗ್ ಗಳಿಗಾಗಿ ಬೈಕಿನ ಮುಂಭಾಗದಲ್ಲಿ 310 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಜೊತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.