ಹೈನೆಸ್ ಸಿಬಿ350 ಬೈಕ್ ಮಾದರಿಗಾಗಿ ಆಕ್ಸೆಸರಿಸ್ ಬಿಡುಗಡೆ ಮಾಡಿದ ಹೋಂಡಾ
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತದಲ್ಲಿ ಮೊದಲ ಬಾರಿಗೆ ತನ್ನ ಬಹುನೀರಿಕ್ಷಿತ ಹೈನೆಸ್ ಸಿಬಿ350 ಕ್ಲಾಸಿಕ್ ಬೈಕ್ ಮಾದರಿಯನ್ನು ಬಿಡುಗಡೆಗೊಳಿಸಿ ವಿತರಣೆಗೆ ಚಾಲನೆ ನೀಡಿದ್ದು, ಇದೀಗ ಹೊಸ ಬೈಕ್ ಮಾದರಿಗಾಗಿ ವಿವಿಧ ಆಕ್ಸೆಸರಿಸ್‌ಗಳನ್ನು ಬಿಡುಗಡೆ ಮಾಡಿದೆ.

ಹೈನೆಸ್ ಸಿಬಿ350 ಬೈಕ್ ಖರೀದಿದಾರರು ಹೊಸ ಬೈಕಿಗಾಗಿ ಹೆಚ್ಚುವರಿ ಬಿಡಿಭಾಗಗಳನ್ನು ಬಯಸಿದ್ದಲ್ಲಿ ವಿವಿಧ ಆಕ್ಸೆಸರಿಸ್‌ಗಳು ಖರೀದಿಗೆ ಲಭ್ಯವಿದ್ದು, ಹೊಸ ಆಕ್ಸೆಸರಿಸ್‌ಗಳು ಹೊಸ ಬೈಕಿನ ವಿನ್ಯಾಸಕ್ಕೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಲಿವೆ. ಹೊಸ ಆಕ್ಸೆಸರಿಸ್‌ಗಳು ಹೋಂಡಾ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲೂ ಲಭ್ಯವಿದ್ದು, ವಿವಿಧ ಆಕ್ಸೆಸರಿಸ್‌ಗಳು ಆರಂಭಿಕವಾಗಿ ರೂ. 309 ಗಳಿಂದ ರೂ.3,705 ಬೆಲೆ ಹೊಂದಿವೆ.

ಆಕ್ಸೆಸರಿಸ್ ಪಟ್ಟಿಯಲ್ಲಿ ಟ್ಯಾಂಕರ್ ಮಧ್ಯಯಲ್ಲಿರುವ ಪಾಡ್, ಸೈಡ್ ಸ್ಟ್ಯಾಂಡ್, ಎಂಜಿನ್ ಲೋವರ್ ಪ್ರೊಟೆಕ್ಷನ್, ಫೋರ್ಕ್ ಗಾಟರ್ಸ್, ಪ್ಯಾನಿಯರ್ ಸರ್ಪೋಟ್, ಎಂಜಿನ್ ಗಾರ್ಡ್, ಸ್ಪೀಟ್ ಸೀಟ್‌ಗಳನ್ನು ನೀಡಲಾಗಿದ್ದು, ಸ್ಟ್ಯಾಂಡರ್ಡ್ ಫೀಚರ್ಸ್‌ಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಇನ್ನು ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.1.85 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 1.90 ಲಕ್ಷಕ್ಕೆ ಬೆಲೆ ಹೊಂದಿದ್ದು, ಬಿಗ್‌ವಿಂಗ್ ಡೀಲರ್ಸ್ ಮೂಲಕ ಮಾರಾಟವಾಗುತ್ತಿರುವ ಹೊಸ ಬೈಕ್ ಕ್ಲಾಸಿಕ್ ರೆಟ್ರೊ-ಡಿಸೈನ್ ಥೀಮ್ ವಿನ್ಯಾಸವನ್ನು ಹೊಂದಿದೆ.

ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.

ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಹೈನೆಸ್ ಸಿಬಿ 350 ಹೊಸದಾಗಿ ತಯಾರಿಸುವ ಸ್ಟೀಲ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಮ್ ಜೋಡಿಸಲಾಗಿದ್ದು, ಬ್ರೇಕಿಂಗ್ ಗಳಿಗಾಗಿ ಬೈಕಿನ ಮುಂಭಾಗದಲ್ಲಿ 310 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಜೊತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.


Click it and Unblock the Notifications








