ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಂಡ ಹೋಂಡಾ ಹೈನೆಸ್ ಸಿಬಿ350
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಚ್ಟ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಬೈಕ್ ಮಾರಾಟ ಆರಂಭಿಸಿದ ಕೆಲವೇ ದಿನಗಳಲ್ಲಿ ಮೊದಲ ಹಂತದ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಕಳೆದ ಅಕ್ಬೋಬರ್ ಮಧ್ಯಂತರದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದ ಹೋಂಡಾ ಕಂಪನಿಯು ಈ ತಿಂಗಳ ಆರಂಭದಲ್ಲಿ ಬೈಕ್ ವಿತರಣೆಗೆ ಚಾಲನೆ ನೀಡಿತ್ತು. ಹೊಸ ಬೈಕ್ ಮಾರಾಟ ಆರಂಭವಾದ ನಂತರ ಮೊದಲ ಬಾರಿಗೆ 1 ಸಾವಿರ ಯುನಿಟ್ ವಿತರಣೆ ಮಾಡಿರುವ ಹೋಂಡಾ ಕಂಪನಿಯು ಶೀಘ್ರದಲ್ಲೇ ಬುಕ್ಕಿಂಗ್ ಸಂಖ್ಯೆಯ ಆಧಾರದ ಹೊಸ ಬೈಕ್ ವಿತರಣೆ ಮಾಡುವ ಭರವಸೆ ನೀಡಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯು ಹೊಸ ಸಂಚಲನಕ್ಕೆ ಕಾರಣವಾಗಿದೆ.

ಹೈನೆಸ್ ಸಿಬಿ350 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.85 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1.90 ಲಕ್ಷ ಬೆಲೆ ಹೊಂದಿದೆ.

ಸದ್ಯ ಹೋಂಡಾ ಪ್ರೀಮಿಯಂ ಬೈಕ್ ಮಾರಾಟ ವಿಭಾಗವಾದ ಬಿಗ್‌ವಿಂಗ್ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟಗೊಳ್ಳುತ್ತಿರುವ ಹೊಸ ಬೈಕ್ ಮಾದರಿಯು 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಈ ಮೂಲಕ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮತ್ತು ಜಾವಾ ಬೈಕ್‌ಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿರುವ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿವೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಹೊಸ ಬೈಕಿನಲ್ಲಿ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, ಸ್ಟೀಲ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಮ್ ಜೋಡಿಸಲಾಗಿದೆ. ಈ ಫ್ರೇಮ್ ಎಂಜಿನ್ ಅನ್ನು ಲೋ ಮೌಂಟ್ ಮಾಡಲು ನೆರವಾಗಲಿದ್ದು, ವೇಗದ ಸವಾರಿಯನ್ನು ಸರಳಗೊಳಿಸುತ್ತದೆ.

ಹಾಗೆಯೇ ಹೋಂಡಾ ಹೈನೆಸ್ ಸಿಬಿ 350 ಬೈಕಿನ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್-ಅಬ್ಸಾವರ್ ಗಳನ್ನು ಅಳವಡಿಸಲಾಗಿದ್ದು, ಬ್ರೇಕಿಂಗ್ ಗಳಿಗಾಗಿ ಬೈಕಿನ ಮುಂಭಾಗದಲ್ಲಿ 310 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಜೊತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಇನ್ನು ಹೈನೆಸ್ ಸಿಬಿ350 ಬೈಕ್ ಖರೀದಿಸುವ ಗ್ರಾಹಕರಿಗೆ ದೀಪಾವಳಿ ವಿಶೇಷತೆ ಹಿನ್ನಲೆಯಲ್ಲಿ ರೂ. 43 ಸಾವಿರದಷ್ಟು ಉಳಿತಾಯಕ್ಕೆ ಅವಕಾಶ ನೀಡಿರುವ ಹೋಂಡಾ ಕಂಪನಿಯು ನಿಗದಿತ ಅವಧಿಯಲ್ಲಿ ಬೈಕ್ ಖರೀದಿದಾರರಿಗೆ ಶೇ.5.6 ರಷ್ಟು ಬಡ್ಡಿದರದಲ್ಲಿ ನೂರರಷ್ಟು ಆನ್‍ರೋಡ್ ದರದ ಮೇಲೆ ಸಾಲ ಸೌಲಭ್ಯವನ್ನು ನೀಡುತ್ತಿದೆ. ಇದಲ್ಲದೆ ಹೊಸ ಬೈಕ್ ಖರೀದಿ ನಂತರ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಕನಿಷ್ಠ ರೂ. 4,999 ಇಎಂಐ ದರ ನಿಗದಿ ಮಾಡಿದ್ದು, ಇದು ಬೆಸ್ಟ್ ಇನ್ ಕ್ಲಾಸ್ ಇಎಂಐ ಮೊತ್ತವಾಗಿದೆ.


Click it and Unblock the Notifications