Just In
- 22 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Movies
ಫೆಬ್ರವರಿ ಟು ಮೇ: ಸ್ಟಾರ್ಸ್ ಚಿತ್ರಗಳ ರಿಲೀಸ್ ದಿನಾಂಕ ಫಿಕ್ಸ್, ಡೇಟ್ ಈಗಲೇ ಲಾಕ್ ಮಾಡ್ಕೊಳ್ಳಿ!
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಮೊದಲ ಬಾರಿಗೆ ಅತ್ಯಧಿಕ ಬೇಡಿಕೆ ಪಡೆದುಕೊಂಡ ಹೈನೆಸ್ ಸಿಬಿ350
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಚ್ಟ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕ್ಲಾಸಿಕ್ ಬೈಕ್ ಮಾರಾಟ ಆರಂಭಿಸಿದ ಕೆಲವೇ ದಿನಗಳಲ್ಲಿ ಅತ್ಯುತ್ತಮ ಬೇಡಿಕೆ ದಾಖಲಾಗಿದೆ.

ಕಳೆದ ಅಕ್ಬೋಬರ್ ಮಧ್ಯಂತರದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದ ಹೋಂಡಾ ಕಂಪನಿಯು ನವೆಂಬರ್ ಆರಂಭದಲ್ಲಿ ಬೈಕ್ ವಿತರಣೆಗೆ ಚಾಲನೆ ನೀಡಿತ್ತು. ಹೊಸ ಬೈಕ್ ಮಾರಾಟ ಆರಂಭವಾದ ನಂತರ ಮೊದಲ ಬಾರಿಗೆ 4,067 ಯುನಿಟ್ ವಿತರಣೆ ಮಾಡಿರುವ ಹೋಂಡಾ ಕಂಪನಿಯು ಶೀಘ್ರದಲ್ಲೇ ಬುಕ್ಕಿಂಗ್ ಸಂಖ್ಯೆಯ ಆಧಾರದ ಹೊಸ ಬೈಕ್ ವಿತರಣೆ ಮಾಡುವ ಭರವಸೆ ನೀಡಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೈನೆಸ್ ಸಿಬಿ350 ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ಕಂಪನಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ.

ಹೈನೆಸ್ ಸಿಬಿ350 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.85 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1.90 ಲಕ್ಷ ಬೆಲೆ ಹೊಂದಿದೆ.

ಸದ್ಯ ಹೋಂಡಾ ಪ್ರೀಮಿಯಂ ಬೈಕ್ ಮಾರಾಟ ವಿಭಾಗವಾದ ಬಿಗ್‌ವಿಂಗ್ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟಗೊಳ್ಳುತ್ತಿರುವ ಹೊಸ ಬೈಕ್ ಮಾದರಿಯು 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಈ ಮೂಲಕ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮತ್ತು ಜಾವಾ ಬೈಕ್‌ಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿರುವ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿವೆ.

ಹೊಸ ಬೈಕಿನಲ್ಲಿ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, ಸ್ಟೀಲ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಮ್ ಜೋಡಿಸಲಾಗಿದೆ. ಈ ಫ್ರೇಮ್ ಎಂಜಿನ್ ಅನ್ನು ಲೋ ಮೌಂಟ್ ಮಾಡಲು ನೆರವಾಗಲಿದ್ದು, ವೇಗದ ಸವಾರಿಯನ್ನು ಸರಳಗೊಳಿಸುತ್ತದೆ.

ಹಾಗೆಯೇ ಹೋಂಡಾ ಹೈನೆಸ್ ಸಿಬಿ 350 ಬೈಕಿನ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್-ಅಬ್ಸಾವರ್ ಗಳನ್ನು ಅಳವಡಿಸಲಾಗಿದ್ದು, ಬ್ರೇಕಿಂಗ್ ಗಳಿಗಾಗಿ ಬೈಕಿನ ಮುಂಭಾಗದಲ್ಲಿ 310 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಜೊತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಚ್ಚ ಹೊಸ ಕ್ಲಾಸಿಕ್ ಬೈಕ್ ಮಾದರಿಯ ಮೇಲೆ ಇಯರ್ ಎಂಡ್ ಆಫರ್ ಘೋಷಣೆ ಮಾಡಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಬೈಕ್ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹೈನೆಸ್ ಸಿಬಿ350 ಬೈಕ್ ಖರೀದಿಯ ಮೇಲೆ ಅತ್ಯುತ್ತಮ ಕ್ಯಾಶ್‌ಬ್ಯಾಕ್ ಆಫರ್ ಘೋಷಣೆ ಮಾಡಿದ್ದು, ಹೊಸ ಬೈಕ್ ಖರೀದಿ ಮಾಡುವ ಗ್ರಾಹಕರು ಡೆಬಿಟ್ ಅಥವಾ ಕ್ರೆಡಿಕ್ ಕಾರ್ಡ್ ಮೂಲಕ ರೂ. 5 ಸಾವಿರ ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ. ಹೊಸ ಆಫರ್ ಈ ತಿಂಗಳ 31ರ ತನಕ ಲಭ್ಯವಿರಲಿದ್ದು, ಆಯ್ದ ಬ್ಯಾಂಕ್‌ಗಳ ಕಾರ್ಡ್ ಬಳಕೆಯ ಮೇಲೆ ಮಾತ್ರವೇ ಈ ಆಫರ್ ಅನ್ವಯವಾಗುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಯೆಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಫೆಡರಲ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳ ಮೂಲಕ ಬೈಕ್ ಖರೀದಿ ಮಾಡಬಹುದಾಗಿದ್ದು, ಡೀಲರ್ಸ್ ಮಟ್ಟದಲ್ಲೂ ಕೆಲವು ಆಫರ್‌ಗಳನ್ನು ಪಡೆಯಬಹುದಾಗಿದೆ. ಆಸಕ್ತ ಗ್ರಾಹಕರು ನಿಮ್ಮ ಹತ್ತಿರದ ಬಿಗ್‌ವಿಂಗ್ ಡೀಲರ್ಸ್ ಬಳಿ ಸಂಪರ್ಕಿಸಬಹುದಾಗಿದ್ದು, ಹೊಸ ಬೈಕ್ ಅನ್ನು ಸಂಕ್ರಾಂತಿ ಹೊತ್ತಿಗೆ ಭರ್ಜರಿಯಾಗಿ ಮಾರಾಟ ಮಾಡುವ ಗುರಿಹೊಂದಲಾಗಿದೆ.