Just In
- 54 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತೊಮ್ಮೆ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಹೋಂಡಾ ಮೋಟಾರ್ಸೈಕಲ್
ಹೋಂಡಾ ಮೋಟಾರ್ಸೈಕಲ್ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದೆ. ಹೋಂಡಾ ಡಿಯೋ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಕೂಟರ್ ಗಳಲ್ಲಿ ಒಂದಾಗಿದೆ.

ಇದೀಗ ಜನಪ್ರಿಯ ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಮತ್ತಷ್ಟು ದುಬಾರಿಯಾಗಿದೆ. ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಎರಡು ರೂಪಾಂತರಗಳ ಬೆಲೆಯನ್ನು ರೂ.473 ಗಳವರೆಗೆ ಹೆಚ್ಚಿಸಿದೆ. ಇದೀಗ ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.61,970 ಗಳಾದರೆ ಡಿಎಲ್ಎಕ್ಸ್ ರೂಪಾಂತರದ ಬೆಲೆಯು ರೂ.65,320 ಗಳಾಗಿದೆ.

ಹೋಂಡಾ ಡಿಯೋ ಸ್ಕೂಟರ್ ಅನ್ನು 2002ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಡಿಯೋ ಸ್ಕೂಟರ್ ಇಲ್ಲಿಯವರೆಗೆ 33 ಲಕ್ಷ ಗ್ರಾಹಕರನ್ನು ಹೊಂದಿದೆ. ಹೋಂಡಾ ಡಿಯೋ ಭಾರತದಿಂದ ಅತಿ ಹೆಚ್ಚು ರಫ್ತು ಮಾಡುವ ಸ್ಕೂಟರ್ ಆಗಿದೆ. ದೇಶದಲ್ಲಿ ಮಾರಾಟವಾಗುವ ಟಾಪ್ 10 ಸ್ಕೂಟರ್ಗಳಲ್ಲಿ ಡಿಯೋ ಕೂಡ ಒಂದಾಗಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್ಟಾರ್ಕ್ 125 ಸ್ಕೂಟರ್

ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ನಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರಲ್ಲಿ ರೇಂಜ್, ಸರಾಸರಿ ಇಂಧನ ದಕ್ಷತೆ ಮತ್ತು ರಿಯಲ್ ಟೈಮ್ ಇಂಧನ ದಕ್ಷತೆಯ ವಿವರದ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಇದಲ್ಲದೆ ಇದು ಟ್ರಿಪ್ ಮೀಟರ್, ಕ್ಲಾಕ್ ಮತ್ತು ಸರ್ವಿಸ್ ಇಂಡಿಕೇಟರ್ ಅನ್ನು ಕೂಡ ಪ್ರದರ್ಶಿಸುತ್ತದೆ.

2020ರ ಹೋಂಡಾ ಡಿಯೋ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಡಿಯೋ ಸ್ಕೂಟರ್ ಮುಂಭಾಗ ಆಕ್ಟಿವಾ 6ಜಿ ಸ್ಕೂಟರ್ನಂತೆ ಫುಲ್ ಎಲ್ಇಡಿ ಹೆಡ್ಲ್ಯಾಂಪ್ ಮತ್ತು ಡಿಆರ್ಎಲ್ ಅನ್ನು ಅಳವಡಿಸಲಾಗಿದೆ. ಬಿಎಸ್-6 ಹೋಂಡಾ ಡಿಯೋ ಸ್ಕೂಟರ್ ಟೆಲಿಸ್ಕೋಪಿಕ್ ಫೋರ್ಕ್ ಅನ್ನು ಹೊಂದಿದೆ. ಹೊಸ ಡಿಯೋ ಅಗ್ರೆಸಿವ್ ವಿನ್ಯಾಸವನ್ನು ಹೊಂದಿದೆ.
MOST READ: ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಹೋಂಡಾ ಆಕ್ಟಿವಾ 6ಜಿಯಂತೆಯೇ ಹೋಂಡಾ ಡಿಯೊ ಕೂಡ ಅದೇ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ. ಹೊಸ ಡಿಯೋ ಸ್ಕೂಟರ್ನಲ್ಲಿ ಸ್ಟ್ಯಾಂಡರ್ಡ್ ರೂಪಾಂತರವು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಕ್ಯಾಂಡಿ ಝಾಸಿ ಬ್ಲೂ, ಸ್ಪೋರ್ಟ್ ರೆಡ್ ಮತ್ತು ವೈಬ್ರಂಟ್ ಆರೆಂಜ್ ಎಂಬ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ.

ಇನ್ನು ಬಿಎಸ್-6 ಹೋಂಡಾ ಡಿಯೋ ಡಿಲಕ್ಸ್ ರೂಪಾಂತರವು ಮ್ಯಾಟ್ ಸಾಂಗ್ರಿಯಾ ರೆಡ್ ಮೆಟಾಲಿಕ್, ಡ್ಯಾಜ್ಲ್ ಎಲ್ಲೊ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಹೊಸ ಡಿಯೋ ಸ್ಕೂಟರ್ನ 110 ಸಿಸಿ ಎಂಜಿನ್ 7.9 ಬಿಹೆಚ್ಪಿ ಪವರ್ ಮತ್ತು 8.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹಿಂದಿನ ಹೋಂಡಾ ಡಿಯೋ ಬಿಎಸ್-4 ಮಾದರಿಯು 8 ಬಿಹೆಚ್ಪಿ ಪವರ್ ಮತ್ತು 9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿದಾಗ ಎಂಜಿನ್ನ ದಕ್ಷತೆಯ ಅಂಕಿ ಅಂಶಗಳಲ್ಲಿ ತುಸು ಕಡಿಮೆಯಾಗಿದೆ. ಹೋಂಡಾ ಡಿಯೋ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಯಮಹಾ ರೇ-ಝಡ್ ಮತ್ತು ಹೀರೋ ಮೆಸ್ಟ್ರೋ ಎಡ್ಜ್ ಸ್ಕೂಟರ್ಗಳಿಗೆ ಪೈಪೋಟಿ ನೀಡುತ್ತಿದೆ.