Just In
Don't Miss!
- News
ಬೆಂಗಳೂರಿನ ವಿವಿಧೆಡೆ ಜನವರಿ 18 ರಿಂದ 22ರವರೆಗೆ ವಿದ್ಯುತ್ ವ್ಯತ್ಯಯ
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ
ಕರೋನಾ ವೈರಸ್ ಪರಿಣಾಮ ಕುಸಿದಿರುವ ವಾಹನ ಮಾರಾಟ ಪ್ರಮಾಣವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಗಳು ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿರುವುದಲ್ಲದೆ ಸುಲಭ ಸಾಲಸೌಲಭ್ಯಗಳನ್ನು ಒದಗಿಸುತ್ತಿವೆ.

ಲಾಕ್‌ಡೌನ್ ನಂತರವು ಹೊಸ ವಾಹನ ಮಾರಾಟ ಪ್ರಮಾಣದಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡುಬಂದಿದ್ದು, ಹೋಂಡಾ ಹಲವಾರು ಆಟೋ ಕಂಪನಿಗಳು ಗ್ರಾಹಕರನ್ನು ಸೆಳೆಯಲು ವಿವಿಧ ಆಫರ್‌ಗಳನ್ನು ಸೇರಿದಂತೆ ಸುಲಭ ಸಾಲ ಸೌಲಭ್ಯಗಳನ್ನು ನೀಡುತ್ತಿವೆ. ಹೋಂಡಾ ಕಂಪನಿಯು ಹೊಸದಾಗಿ ಘೋಷಣೆ ಮಾಡಿರುವ ಹೊಸ ಸಾಲ ಸೌಲಭ್ಯವು ಲಾಕ್‌ಡೌನ್ ಸಂಕಷ್ಟದಿಂದಾಗಿ ವಾಹನ ಖರೀದಿ ಮುಂದೂಡಿರುವ ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಲಿದೆ.

ಮಾಹಿತಿ ಪ್ರಕಾರ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸೀಮಿತ ಅವಧಿಯೊಳಗೆ ಸ್ಕೂಟರ್ ಮತ್ತು ಬೈಕ್ ಖರೀದಿಸುವ ಗ್ರಾಹಕರಿಗೆ ಶೇ.95ರಷ್ಟು ಆನ್‌ರೋಡ್ ಸಾಲ ಸೌಲಭ್ಯವನ್ನು ಅತಿ ಸರಳವಾದ ಇಎಂಐನೊಂದಗೆ ಆಫರ್ ಮಾಡುತ್ತಿದೆ.

ಹೋಂಡಾ ದ್ವಿಚಕ್ರ ವಾಹನಗಳನ್ನು ಖರೀದಿಸುವ ಗ್ರಾಹಕರು ಹೊಸ ವಾಹನ ಖರೀದಿ ಮಾಡಿದ ಮೊದಲ 3 ತಿಂಗಳು ಶೇ.50ರಷ್ಟು ಐಎಂಐ ಮಾತ್ರ ಪಾವತಿಸಲು ಅವಕಾಶ ನೀಡಲಾಗಿದ್ದು, ಮೂರು ತಿಂಗಳ ನಂತರ ಸಾಮಾನ್ಯ ದರದಲ್ಲೇ ಇಎಂಐ ಪಾವತಿಸುವ ಸೌಲಭ್ಯ ಇದಾಗಿದೆ.

ಹೊಸ ಸಾಲ ಸೌಲಭ್ಯದಲ್ಲಿ ಶೇ.95ರಷ್ಟು ಆನ್ ರೋಡ್ ಬೆಲೆಯ ಮೇಲೆ ಸಾಲ ದೊರಲಿದ್ದು, ಇಎಂಐ ಹೊರೆ ತಗ್ಗಿಸಲು ಇದು ಸಹಕಾರಿಯಾಗಿದೆ. ಹೊಸ ಲೋನ್ ಆಫರ್ ಸೀಮಿತ ಅವಧಿಗೆ ಮಾತ್ರವೇ ಲಭ್ಯವಿರಲಿದ್ದು, ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರ ಅಧಿಕೃತ ಬೈಕ್ ಮಾರಾಟಗಾರರನ್ನು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಸಂಪರ್ಕಿಸಬಹುದಾಗಿದೆ.

ಇದಲ್ಲದೆ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕರೋನಾ ವೈರಸ್‌ನಿಂದಾಗಿ ಇಳಿಕೆಯಾಗಿರುವ ವಾಹನ ಮಾರಾಟ ಪ್ರಮಾಣವನ್ನು ಸುಧಾರಣೆಗೊಳಿಸಲು ಪ್ರಮುಖ ದ್ವಿಚಕ್ರ ವಾಹನ ಮಾದರಿಗಳ ಖರೀದಿ ಮೇಲೆ ಹೆಚ್ಚುವರಿ ವಾರಂಟಿ ಅವಧಿಯ ಆಫರ್ ನೀಡುತ್ತಿದೆ.
MOST READ: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚಳಕ್ಕಾಗಿ ಹೊಸ ಯೋಜನೆಗೆ ಚಾಲನೆ ನೀಡಿದ ಎಥರ್

ಆಯ್ದ ದ್ವಿಚಕ್ರ ವಾಹನ ಖರೀದಿ ಮೇಲೆ ವಿಸ್ತರಿತ ವಾರಂಟಿ ಘೋಷಣೆ ಮಾಡಿದ್ದು, ಸೀಮಿತ ಅವಧಿಯಲ್ಲಿ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ 2 ವರ್ಷಗಳ ಜೊತೆಗೆ ಹೆಚ್ಚುವರಿಯಾಗಿ 1 ವರ್ಷದ ವಾರಂಟಿ ಅವಧಿಯ ಆಫರ್ ಲಭ್ಯವಾಗಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು ಬಿಎಸ್-6 ನಿಯಮ ಅನುಸಾರವಾಗಿ ಹೊಸ ವಾಹನಗಳನ್ನು ಮಾರಾಟ ಮಾಡುತ್ತಿದ್ದು, ಆಕ್ಟಿವಾ 6ಜಿ, ಆಕ್ಟಿವಾ 125 ಎಫ್ಐ, ಡಿಯೋ, ಗ್ರಾಜಿಯಾ, ಎಸ್‌ಪಿ 125 ಮತ್ತು ಶೈನ್ ಬೈಕ್ ಮಾದರಿಗಳು ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿವೆ.
MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಹೋಂಡಾ ನಿರ್ಮಾಣದ ಬಹುತೇಕ ದ್ವಿಚಕ್ರ ವಾಹನಗಳು ಹೊಸ ಎಂಜಿನ್ ಜೋಡಣೆಯ ನಂತರ ದುಬಾರಿ ಬೆಲೆ ಪಡೆದುಕೊಂಡಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.4 ಸಾವಿರದಿಂದ ರೂ. 12 ಸಾವಿರದಷ್ಟು ಹೆಚ್ಚುವರಿ ದರ ಪಡೆದುಕೊಂಡಿವೆ.