ಹೋಂಡಾ ಹೈನೆಸ್ ಸಿಬಿ350 ಬೈಕ್ ಖರೀದಿ ಮೇಲೆ ಅತ್ಯುತ್ತಮ ಕ್ಯಾಶ್‌ಬ್ಯಾಕ್ ಆಫರ್ ಘೋಷಣೆ
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಹೊಚ್ಚ ಹೊಸ ಕ್ಲಾಸಿಕ್ ಬೈಕ್ ಮಾದರಿಯ ಮೇಲೆ ಇಯರ್ ಎಂಡ್ ಆಫರ್ ಘೋಷಣೆ ಮಾಡಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಬೈಕ್ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಹೈನೆಸ್ ಸಿಬಿ350 ಬೈಕ್ ಖರೀದಿಯ ಮೇಲೆ ಅತ್ಯುತ್ತಮ ಕ್ಯಾಶ್‌ಬ್ಯಾಕ್ ಆಫರ್ ಘೋಷಣೆ ಮಾಡಿದ್ದು, ಹೊಸ ಬೈಕ್ ಖರೀದಿ ಮಾಡುವ ಗ್ರಾಹಕರು ಡೆಬಿಟ್ ಅಥವಾ ಕ್ರೆಡಿಕ್ ಕಾರ್ಡ್ ಮೂಲಕ ರೂ. 5 ಸಾವಿರ ಕ್ಯಾಶ್‌ಬ್ಯಾಕ್ ಪಡೆಯಬಹುದಾಗಿದೆ. ಹೊಸ ಆಫರ್ ಈ ತಿಂಗಳ 31ರ ತನಕ ಲಭ್ಯವಿರಲಿದ್ದು, ಆಯ್ದ ಬ್ಯಾಂಕ್‌ಗಳ ಕಾರ್ಡ್ ಬಳಕೆಯ ಮೇಲೆ ಮಾತ್ರವೇ ಈ ಆಫರ್ ಅನ್ವಯವಾಗುತ್ತದೆ.

ಯೆಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಫೆಡರಲ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳ ಮೂಲಕ ಬೈಕ್ ಖರೀದಿ ಮಾಡಬಹುದಾಗಿದ್ದು, ಡೀಲರ್ಸ್ ಮಟ್ಟದಲ್ಲೂ ಕೆಲವು ಆಫರ್‌ಗಳನ್ನು ಪಡೆಯಬಹುದಾಗಿದೆ. ಆಸಕ್ತ ಗ್ರಾಹಕರು ನಿಮ್ಮ ಹತ್ತಿರದ ಬಿಗ್‌ವಿಂಗ್ ಡೀಲರ್ಸ್ ಬಳಿ ಸಂಪರ್ಕಿಸಬಹುದಾಗಿದ್ದು, ಹೊಸ ಬೈಕ್ ಅನ್ನು ಸಂಕ್ರಾಂತಿ ಹೊತ್ತಿಗೆ ಭರ್ಜರಿಯಾಗಿ ಮಾರಾಟ ಮಾಡುವ ಗುರಿಹೊಂದಲಾಗಿದೆ.

ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯು ಸದ್ಯ ಕ್ಲಾಸಿಕ್ ಬೈಕ್ ಮಾದರಿಗಳಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೈನೆಸ್ ಸಿಬಿ350 ಡಿಲಕ್ಸ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.85 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1.90 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಿದ್ದು, ಕ್ಲಾಸಿಕ್ ಬೈಕ್ ಮಾದರಿಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ ಮತ್ತು ಜಾವಾ ಮೋಟಾರ್‌ಸೈಕಲ್ ಬೈಕ್ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಬೈಕ್ ಮಾದರಿಯನ್ನು ಸದ್ಯ ಹೋಂಡಾ ಮೋಟಾರ್‌ಸೈಕಲ್ ತನ್ನ ಪ್ರೀಮಿಯಂ ಬೈಕ್ ಮಾರಾಟ ಮಳಿಗೆಯಾದ ಬಿಗ್‌ವಿಂಗ್ ಡೀಲರ್ಸ್ ಮೂಲಕ ಮಾರಾಟ ಮಾಡುತ್ತಿದ್ದು, ಈ ಬೈಕ್ 350 ಕ್ಲಾಸಿಕ್ ರೆಟ್ರೊ-ಡಿಸೈನ್ ಥೀಮ್ ವಿನ್ಯಾಸವನ್ನು ಹೊಂದಿದೆ.

ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್‌ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.

ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.

ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.


Click it and Unblock the Notifications








