ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಇತ್ತೀಚೆಗೆ ಹಾರ್ನೆಟ್ 2.0 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಹಾರ್ನೆಟ್ 2.0 ಮಾದರಿಯು ಮೂಲತಃ ಹೋಂಡಾ ಸಿಬಿಎಫ್ 190ಆರ್ ಪರಿಷ್ಕೃತ ಆವೃತ್ತಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಹೋಂಡಾ ಕಂಪನಿಯ ಸಿಬಿಎಫ್ 190ಆರ್ ಮಾದರಿಯು ಚೀನಾ ಮಾರುಕಟ್ಟೆಯಲ್ಲಿ ಮಾರಾಟದಲ್ಲಿದೆ. ಸಿಬಿಎಫ್190ಆರ್ ಮತ್ತು ಹಾರ್ನೆಟ್ 2.0 ಒಂದೇ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇನ್ನು ಭಾರತದಲ್ಲಿ ಮಾರುಕಟ್ಟೆ ಪಾಲನ್ನು ಹೆಚ್ಚಿಸಲು ಹೋಂಡಾ ಕಂಪನಿಯು ತನ್ನ ಬಂಡವಾಳವನ್ನು ಇನ್ನಷ್ಟು ವಿಸ್ತರಿಸಲು ನಿರ್ಧರಿಸಿದೆ. ಇದಕ್ಕಾಗಿ ಸಿಬಿಎಫ್ 190ಆರ್ ಮಾದರಿಯ ವಿಭಾಗದಲ್ಲಿರುವ ಮತ್ತೊಂದು ಸಿಬಿಎಫ್ 190ಟಿಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಗಳಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಈ ಹೋಂಡಾ ಸಿಬಿಎಫ್190ಆರ್ ಮಾದರಿಯು ಕೂಡ ಚೀನಾ ಮಾರುಕಟ್ಟೆಯಲ್ಲಿ ಮಾರಾಟದಲ್ಲಿದೆ. ಈ ಹೋಂಡಾ ಸಿಬಿಎಫ್ 190ಟಿಆರ್ ನಿಯೋ-ರೆಟ್ರೊ ಶೈಲಿಯ ಮಾದರಿಯಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಹೋಂಡಾ ಸಿಬಿಎಫ್190ಟಿಆರ್ ದೊಡ್ಡ ಹೋಂಡಾ ನಿಯೋ ಸ್ಪೋರ್ಟ್ಸ್ ಕೆಫೆ ಬೈಕುಗಳಾದ ಸಿಬಿ 1000ಆರ್ ಪ್ಲಸ್ ಮತ್ತು ಸಿಬಿ 300ಆರ್ ಮಾದರಿಗಳಿಂದ ವಿನ್ಯಾಸದ ಕೆಲವು ಅಂಶಗಳನ್ನು ಎರವಲು ಪಡೆದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಹೋಂಡಾ ಸಿಬಿಎಫ್190ಟಿಆರ್ ಮಾದರಿಯಲ್ಲಿ ಹಾರ್ನೆಟ್ 2.0 ಬೈಕಿನಲ್ಲಿರುವ 184 ಸಿಸಿ ಎಚ್‌ಇಟಿ ಬಿಎಸ್-6 ಪಿಜಿಎಂ-ಎಫ್‌ಐ ಎಂಜಿನ್‌ ಅನ್ನು ಅಳವಡಿಸಬಹುದು. ಈ ಎಂಜಿನ್ 8,500 ಆರ್‌ಪಿಎಂನಲ್ಲಿ 17 ಬಿಹೆಚ್‌ಪಿ ಪವರ್ ಮತ್ತು 6,000 ಆರ್‌ಪಿಎಂನಲ್ಲಿ 16.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಗೋಲ್ಡನ್ ಯುಎಸ್ಡಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಹೊಸ ಹೋಂಡಾ ಹಾರ್ನೆಟ್ 2.0 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 276 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ನೀಡಿದೆ. ಇದೇ ಬ್ರೇಕಿಂಗ್ ಸಿಸ್ಟಂ ಸಿಬಿಎಫ್ 190ಟಿಆರ್ ಮಾದರಿಯು ಹೊಂದಿರಬಹುದು.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಇನ್ನು ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕಿನಲ್ಲಿ 17 ಇಂಚಿನ ವ್ಹೀಲ್ ಗಳಲ್ಲಿ ಮುಂಭಾಗದಲ್ಲಿ 110/70 ಮತ್ತು ಹಿಂಭಾಗದಲ್ಲಿ 140/70 ಪ್ರೊಫೈಲ್‌ಗಳನ್ನು ಒಳಗೊಂಡಿದೆ. ಈ ಹೋಂಡಾ ಹಾರ್ನೆಟ್ 2.0 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಬೈಕಿನಲ್ಲಿ ಅಗ್ರೇಸಿವ್ ಕ್ರೀಸ್‌ಗಳು, ಬಾಡಿ ಲೈನ್ಸ್ ಮತ್ತು ಗ್ರಾಫಿಕ್ಸ್‌ನೊಂದಿಗೆ ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೋಂಡಾ ಸಿಬಿಎಫ್190ಟಿಆರ್ ಬೈಕ್

ಹೋಂಡಾ ಹಾರ್ನೆಟ್ 2.0 ಭಾರತೀಯ ಮಾರುಕಟ್ಟೆಯ 180-200 ಸಿಸಿ ವಿಭಾಗದಲ್ಲಿ ಹೋಂಡಾ ಕಂಪನಿಯ ಮೊದಲ ಬೈಕ್ ಆಗಿದೆ. ಈ ವಿಭಾಗದ ಮಾದರಿಗಳಿಗೆ ಉತ್ತಮ ಬೇಡಿಕೆಯನ್ನು ಹೊಂದಿದ್ದು, ಹೆಚ್ಚು ಸ್ಪರ್ಧಾತ್ಮಕವಾದ ವಿಭಾಗವಾಗಿದೆ. ಇದರಿಂದಾಗಿ ಹೋಂಡಾ ಕಂಪನಿಯು ಮತ್ತೊಂದು ಹೊಸ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

Most Read Articles

Kannada
English summary
Honda CBF190TR Neo-Retro Motorcycle Is India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X