Just In
- 2 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 2 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 4 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 4 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News ಹಾಸನ ಪೆನ್ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಹಿಳಾ ಆಯೋಗ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈನೆಸ್ ಸಿಬಿ 350 ಬೈಕ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಹೋಂಡಾ ಮೋಟಾರ್ಸೈಕಲ್
ಹೋಂಡಾ ಮೋಟಾರ್ಸೈಕಲ್ ಇಂಡಿಯಾ ಕಂಪನಿಯು ಭಾರತದಲ್ಲಿ ಮೊದಲ ಬಾರಿಗೆ ರೆಟ್ರೋ ಮಾದರಿಯ ಪ್ರೀಮಿಯಂ ಕ್ಲಾಸಿಕ್ ಬೈಕ್ ಆವೃತ್ತಿಯಾದ ಹೈನೆಸ್ ಸಿಬಿ 350 ಬೈಕ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಹೊಸ ಬೈಕ್ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದೆ.
ಹೋಂಡಾ ಮೋಟಾರ್ಸೈಕಲ್ ಕಂಪನಿಯು ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್ಗಳಲ್ಲಿ ಅಭಿವೃದ್ದಿಗೊಳಿಸಿದ್ದು, ಹೊಸ ಬೈಕ್ ಮಾದರಿಯ ಬೆಲೆಯನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.1.85 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು 1.90 ಲಕ್ಷಕ್ಕೆ ನಿಗದಿಪಡಿಸಿದೆ.
ಹೊಸ ಬೈಕ್ ಮಾದರಿಯನ್ನು ಹೋಂಡಾ ಮೋಟಾರ್ಸೈಕಲ್ ತನ್ನ ಪ್ರೀಮಿಯಂ ಬೈಕ್ ಮಾರಾಟ ಮಳಿಗೆಯಾದ ಬಿಗ್ವಿಂಗ್ ಡೀಲರ್ಸ್ ಮೂಲಕ ಮಾರಾಟ ಮಾಡುತ್ತಿದ್ದು, ಈ ಬೈಕ್ 350 ಕ್ಲಾಸಿಕ್ ರೆಟ್ರೊ-ಡಿಸೈನ್ ಥೀಮ್ ವಿನ್ಯಾಸವನ್ನು ಹೊಂದಿದೆ.
ಹೈನೆಸ್ ಸಿಬಿ 350 ಬೈಕಿನ ವಿನ್ಯಾಸವು ಹಳೆಯ ಕ್ಲಾಸಿಕ್ ಸಿಬಿ ಬೈಕ್ ಸರಣಿಯನ್ನು ನೆನಪಿಸಲಿದ್ದು, ಈ ಬೈಕಿನ ಮುಂಭಾಗದಲ್ಲಿ ರೌಂಡ್ ಎಲ್ಇಡಿ ಹೆಡ್ಲ್ಯಾಂಪ್ ಕ್ರೋಮ್ ಫ್ರಂಟ್ ಫೆಂಡರ್ ಹಾಗೂ ಫೋರ್ಕ್ಗಳನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ದೊಡ್ಡದಾದ 15-ಲೀಟರಿನ ಫ್ಯೂಯಲ್ ಟ್ಯಾಂಕ್ ಜೋಡಿಸಲಾಗಿದ್ದು, ಈ ಬೈಕಿನ ಸೈಡ್ ಗಳಲ್ಲಿ ಹೊಂಡಾ ಬ್ಯಾಡ್ಜಿಂಗ್ ಅಳವಡಿಸಲಾಗಿದೆ.
ಎಂಜಿನ್ ಕವರ್, ಎಕ್ಸಾಸ್ಟ್ ಸೇರಿದಂತೆ ಈ ಬೈಕಿನ ಹಲವು ಭಾಗಗಳಲ್ಲಿ ಕ್ರೋಮ್ ಬಣ್ಣವನ್ನು ನೀಡಲಾಗಿದ್ದು, ಎಕ್ಸಾಸ್ಟ್ ಕ್ಲಾಸಿಕ್ ಲೋ-ಪಿಚ್ ಥಂಪಿ ನೋಟ್ ಹೊಂದಿದೆ. ಬೈಕ್ ವಿನ್ಯಾಸವನ್ನು ಸರಳಗೊಳಿಸಲು ಹಿಂಭಾಗವನ್ನು ಚಿಕ್ಕದು ಮಾಡಲಾಗಿದ್ದು, ಈ ಸೆಗ್ ಮೆಂಟಿನಲ್ಲಿ ಮೊದಲ ಬಾರಿಗೆ ಈ ಬೈಕಿನಲ್ಲಿ ರಿಂಗ್-ಟೈಪ್ ವಿಂಕರ್ ಗಳನ್ನು ನೀಡಲಾಗಿದೆ.
ಹೋಂಡಾ ಹೈನೆಸ್ ಸಿಬಿ 350 ಬೈಕಿನಲ್ಲಿ ಅಸಿಸ್ಟ್ ಸ್ಲಿಪ್ಪರ್-ಕ್ಲಚ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್, ಯುಎಸ್ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಹೋಂಡಾ ಸೆಲೆಕ್ಟಬಲ್ ಟಾರ್ಕ್ ಕಂಟ್ರೋಲ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ ಗಳಿದ್ದು, ಬೇಸ್ ಮಾದರಿಯನ್ನು ಪ್ರೆಷಿಯಸ್ ರೆಡ್ ಮೆಟಾಲಿಕ್, ಮ್ಯಾಟ್ ಮಾರ್ಷಲ್ ಗ್ರೀನ್ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಎಂಬ ಮೂರು ಸಿಂಗಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು.
ಟಾಪ್-ಎಂಡ್ ಡಿಎಲ್ಎಕ್ಸ್ ಪ್ರೊ ಮಾದರಿಯನ್ನು ಮ್ಯಾಟ್ ಗ್ರೇ ಮೆಟಾಲಿಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ವರ್ಚುವಸ್ ವೈಟ್ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಸ್ಪಿಯರ್ ಸಿಲ್ವರ್ ಮೆಟಾಲಿಕ್ ಪರ್ಲ್ ನೈಟ್ ಸ್ಟಾರ್ ಮೆಟಾಲಿಕ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣಗಳಲ್ಲಿ ಮಾರಾಟ ಮಾಡಲಾಗುತ್ತದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಈ ಬೈಕ್ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ನೊಂದಿಗೆ 20.8-ಬಿಎಚ್ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಹೈನೆಸ್ ಸಿಬಿ 350 ಹೊಸದಾಗಿ ತಯಾರಿಸುವ ಸ್ಟೀಲ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಮ್ ಜೋಡಿಸಲಾಗಿದ್ದು, ಈ ಫ್ರೇಮ್ ಎಂಜಿನ್ ಅನ್ನು ಲೋ ಮೌಂಟ್ ಮಾಡಲು ನೆರವಾಗುತ್ತದೆ. ಜೊತೆಗೆ ವೇಗದ ಸವಾರಿಯನ್ನು ಸರಳಗೊಳಿಸುತ್ತದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್
ಹಾಗೆಯೇ ಹೋಂಡಾ ಹೈನೆಸ್ ಸಿಬಿ 350 ಬೈಕಿನ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್-ಅಬ್ಸಾವರ್ ಗಳನ್ನು ಅಳವಡಿಸಲಾಗಿದ್ದು, ಬ್ರೇಕಿಂಗ್ ಗಳಿಗಾಗಿ ಬೈಕಿನ ಮುಂಭಾಗದಲ್ಲಿ 310 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಜೊತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.