ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ ಮೋಟಾರ್‌ಸೈಕಲ್

ಮಹಾಮಾರಿ ಕರೋನಾ ವೈರಸ್‌ನಿಂದಾಗಿ ಬಹುತೇಕ ಆಟೋ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗಿದ್ದು, ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

ಸದ್ಯ ವೈರಸ್ ಭೀತಿ ನಡುವೆಯೂ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟವನ್ನು ದಾಖಲಿಸಿದ್ದು, ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕೂಡಾ ಈ ಬಾರಿ ಕನಿಷ್ಠ ಪ್ರಮಾಣದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಮೇ 4ರಿಂದ 31ರ ತನಕ 54 ಸಾವಿರ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

ದೇಶಿಯ ಮಾರುಕಟ್ಟೆಯಲ್ಲಿ 54 ಸಾವಿರ ಯುನಿಟ್ ಮಾರಾಟ ಮಾಡಿದ್ದಲ್ಲಿ 824 ಯುನಿಟ್ ದ್ವಿಚಕ್ರ ವಾಹನಗಳನ್ನು ವಿದೇಶಿ ಮಾರುಕಟ್ಟೆಗಳಿಗೆ ರಫ್ತುಗೊಳಿಸಿದ್ದು, ಲಾಕ್‌ಡೌನ್ ಸಡಿಲಿಕೆಯ ನಂತರ ಸಾಗರೋತ್ತರ ವ್ಯವಹಾರಗಳು ಕೂಡಾ ಮರುಚಾಲನೆ ಪಡೆದುಕೊಂಡಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

2019ರ ಮೇ ಅವಧಿಯಲ್ಲಿ 4.82 ಲಕ್ಷ ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದ ಹೋಂಡಾ ಕಂಪನಿಯು ಈ ಬಾರಿ ಮೇ ಅವಧಿಯಲ್ಲಿ 54,820 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾಡುವ ಮೂಲಕ ಶೇ.92ರಷ್ಟು ಹಿನ್ನಡೆ ಅನುಭವಿಸಿದ್ದು, ಮುಂಬರುವ ದಿನಗಳಲ್ಲಿ ವಾಹನ ಮಾರಾಟವು ಚೇತರಿಕೆ ಕಾಣುವ ವಿಶ್ವಾಸದಲ್ಲಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

ಇನ್ನು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ನಿಯಮ ಅನುಗುಣವಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ತಮ್ಮ ವಾಹನ ಮಾದರಿಗಳನ್ನು ಉನ್ನತೀಕರಿಸಿದ್ದು, ಹೋಂಡಾ ಮೋಟಾರ್‌ಸೈಕಲ್ ಕೂಡಾ ಬಿಎಸ್-6 ಮಾದರಿಯ ಸ್ಕೂಟರ್ ಮತ್ತು ಬೈಕ್‌ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವಾ 6ಜಿ, ಆಕ್ಟಿವಾ 125 ಎಫ್ಐ, ಡಿಯೋ, ಎಸ್‌ಪಿ 125 ಮತ್ತು ಶೈನ್ ಬೈಕ್ ಮಾದರಿಗಳು ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಎಮಿಷನ್ ಜಾರಿಗೆ ಮುನ್ನ ಬಿಡುಗಡೆಯಾಗಲಿರುವ ಹೊಸ ದ್ವಿಚಕ್ರ ವಾಹನಗಳಿಗೆ ಇದುವರೆಗೆ ದಾಖಲೆಯ ಪ್ರಮಾಣದ ಬೇಡಿಕೆ ಹರಿದು ಬಂದಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

ಹೋಂಡಾ ನಿರ್ಮಾಣದ ಬಹುತೇಕ ದ್ವಿಚಕ್ರ ವಾಹನಗಳು ಹೊಸ ಎಂಜಿನ್ ಜೋಡಣೆಯ ನಂತರ ದುಬಾರಿ ಬೆಲೆ ಪಡೆದುಕೊಂಡಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.4 ಸಾವಿರದಿಂದ ರೂ. 12 ಸಾವಿರದಷ್ಟು ಹೆಚ್ಚುವರಿ ದರ ಪಡೆದುಕೊಂಡಿವೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.92 ರಷ್ಟು ಕುಸಿತ ಕಂಡ ಹೋಂಡಾ

ಜೊತೆಗೆ ಹೊಸ ವಾಹನಗಳ ಎಂಜಿನ್ ಅಭಿವೃದ್ದಿಯಲ್ಲಿ ಸಾಕಷ್ಟು ಸುಧಾರಣೆ ತಂದಿರುವ ಹೋಂಡಾ ಕಂಪನಿಯು ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆಗೊಳಿಸಿದ್ದು, ಮೈಲೇಜ್ ಪ್ರಮಾಣದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಿದೆ.

Most Read Articles

Kannada
English summary
Honda Motorcycle Sales 54,820 Units May 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X