Just In
Don't Miss!
- News
ಮತ್ತೊಂದು ದಾಖಲೆಯ ಮಟ್ಟವನ್ನ ತಲುಪಿದ ಪೆಟ್ರೋಲ್, ಡೀಸೆಲ್ ದರ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೈನೆಸ್ ಸಿಬಿ350 ನಂತರ ಸಿಬಿ400 ಬಿಡುಗಡೆಯ ಸಿದ್ದತೆಯಲ್ಲಿ ಹೋಂಡಾ ಮೋಟಾರ್‌ಸೈಕಲ್
ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತದಲ್ಲಿ ಪ್ರೀಮಿಯಂ ಬೈಕ್ ಮಾರಾಟವನ್ನು ಹೆಚ್ಚಿಸುತ್ತಿದ್ದು, ಪ್ರೀಮಿಯಂ ಬೈಕ್ ಮಾರಾಟ ಮಳಿಗೆಗಳಾದ ಬಿಗ್‌ವಿಂಗ್ ಶೋರೂಂಗಳ ಸಂಖ್ಯೆಯನ್ನು ಕೂಡಾ ಹೆಚ್ಚಿಸುತ್ತಿದೆ.

ಸದ್ಯ ದೇಶದ ಪ್ರಮುಖ ನಗರಗಳಲ್ಲಿ ಮಾತ್ರ ನೆಲೆಗೊಂಡಿರುವ ಹೋಂಡಾ ಬಿಗ್‌ವಿಂಗ್ ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿರುವ ಹೋಂಡಾ ಕಂಪನಿಯು ಹೈನೆಸ್ ಸಿಬಿ350 ಮೂಲಕ ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದು, ಕೆಲವೇ ಕೆಲವು ಮಾರಾಟ ಮಳಿಗೆಗಳೊಂದಿಗೆ ಕಳೆದ ತಿಂಗಳು 1 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಕಂಪನಿಯ ಹೊಸ ಯೋಜನೆಗಳಿಗೆ ಬಲ ತುಂಬಿದೆ.

ಹೈನೆಸ್ ಸಿಬಿ350 ನಂತರ ಹೈನೆಸ್ ಸಿಬಿ400 ಮಾದರಿಯನ್ನು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಹೋಂಡಾ ಕಂಪನಿಯು ಕ್ಲಾಸಿಕ್ ಬೈಕ್ ವಿಭಾಗದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಬೈಕ್ ಮಾದರಿಯು 500ಸಿಸಿ ಎಂಜಿನ್‌ನೊಂದಿಗೆ ಅಭಿವೃದ್ದಿಗೊಳ್ಳುವ ಸಾಧ್ಯತೆಗಳಿವೆ.

ಹೊಸ ಹೈನೆಸ್ ಸಿಬಿ400 ಮಾದರಿಯ ಕ್ಲಾಸಿಕ್ ಮಾದರಿಯೊಂದಿಗೆ ಕಫೆ ರೇಸರ್ ಶ್ರೇಣಿಗಳಿಂದಲೂ ಕೆಲವು ವೈಶಿಷ್ಯತೆಗಳನ್ನು ಎರವಲು ಪಡೆದುಕೊಳ್ಳಲಿದ್ದು, ಹೊಸ ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ಕಂಪನಿ ಟ್ವಿನ್ ಬೈಕ್ ಮಾದರಿಗಳಾದ ಇಂಟರ್‌ಸೆಪ್ಟರ್ ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ಮಾದರಿಗಳಿಗೆ ಪೈಪೋಟಿ ನೀಡುವ ಯೋಜನೆಯಲ್ಲಿದೆ.

ಟ್ವಿನ್ ಬೈಕ್ ಪೈಪೋಟಿಯಾಗಿ ಹೋಂಡಾ ಬಿಗ್‌ವಿಂಗ್‌ನಲ್ಲಿ ಈಗಾಗಲೇ ಹಲವಾರು ಗ್ರಾಹಕರು ಹೊಸ ಬೈಕ್‌ಗಳ ಬಗ್ಗೆ ಮಾಹಿತಿ ಹುಡುಕಾಟ ನಡೆಸುತ್ತಿದ್ದು, ಮುಂಬರುವ 2021ರ ಮಧ್ಯಂತರದಲ್ಲಿ ಹೋಂಡಾ ಹೊಸ ಬೈಕ್ ಬಿಡುಗಡೆ ಬಹುತೇಕ ಖಚಿತವಾಗಿದೆ. ಇದಲ್ಲದೆ ಹೋಂಡಾ ಕಂಪನಿಯು ಹೊಸದಾಗಿ ದೇಶದ ಪ್ರಮುಖ ನಗರಗಳಲ್ಲಿ 25 ಹೊಸ ಬಿಗ್‌ವಿಂಗ್ ಮಾರಾಟ ಮಳಿಗೆಗಳನ್ನು ತೆರೆಯುತ್ತಿದ್ದು, ಕ್ಲಾಸಿಕ್ ಬೈಕ್ ಮಾದರಿಗಳಲ್ಲಿ ಹೆಚ್ಚಿನ ಬೇಡಿಕೆಗಾಗಿ ಹೊಸ ಯೋಜನೆ ರೂಪಿಸಿದೆ.

ಇನ್ನು ಹೈನೆಸ್ ಸಿಬಿ350 ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಡಿಲಕ್ಸ್ ಮತ್ತು ಡಿಲಕ್ಸ್ ಪ್ರೋ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಡಿಲಕ್ಸ್ ಮಾದರಿಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.85 ಲಕ್ಷ ಮತ್ತು ಡಿಲಕ್ಸ್ ಪ್ರೋ ಮಾದರಿಯು ರೂ. 1.90 ಲಕ್ಷ ಬೆಲೆ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಸದ್ಯ ಹೋಂಡಾ ಪ್ರೀಮಿಯಂ ಬೈಕ್ ಮಾರಾಟ ವಿಭಾಗವಾದ ಬಿಗ್‌ವಿಂಗ್ ಮಾರಾಟ ಮಳಿಗೆಗಳಲ್ಲಿ ಮಾತ್ರ ಮಾರಾಟಗೊಳ್ಳುತ್ತಿರುವ ಹೊಸ ಬೈಕ್ ಮಾದರಿಯು 5-ಸ್ಪೀಡ್ ಗೇರ್‌ಬಾಕ್ಸ್ ಪ್ರೇರಣೆಯ 348.36 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 20.8-ಬಿಎಚ್‌ಪಿ ಮತ್ತು 30-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಹೊಸ ಬೈಕಿನಲ್ಲಿ ಅನಲಾಗ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೋಂಡಾ ಸ್ಮಾರ್ಟ್‌ಫೋನ್ ವಾಯ್ಸ್ ಕಂಟ್ರೋಲ್ ಸಿಸ್ಟಂಗಳನ್ನು ಹೊಂದಿದ್ದು, ಸ್ಟೀಲ್ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಮ್ ಜೋಡಿಸಲಾಗಿದೆ. ಈ ಫ್ರೇಮ್ ಎಂಜಿನ್ ಅನ್ನು ಲೋ ಮೌಂಟ್ ಮಾಡಲು ನೆರವಾಗಲಿದ್ದು, ವೇಗದ ಸವಾರಿಯನ್ನು ಸರಳಗೊಳಿಸುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹಾಗೆಯೇ ಹೋಂಡಾ ಹೈನೆಸ್ ಸಿಬಿ 350 ಬೈಕಿನ ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್-ಅಬ್ಸಾವರ್ ಗಳನ್ನು ಅಳವಡಿಸಲಾಗಿದ್ದು, ಬ್ರೇಕಿಂಗ್ ಗಳಿಗಾಗಿ ಬೈಕಿನ ಮುಂಭಾಗದಲ್ಲಿ 310 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಜೊತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.