ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಏಪ್ರಿಲ್ 1ರಿಂದ ದೇಶಾದ್ಯಂತ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ನಿಯಮದಿಂದಾಗಿ ಹೊಸ ವಾಹನಗಳ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾಲಿನ್ಯ ತಡೆಯುವಲ್ಲಿ ನಿಟ್ಟಿನಲ್ಲಿ ಹೊಸ ಎಮಿಷನ್ ನಿಯಮವು ಸಾಕಷ್ಟು ಸಹಕಾರಿಯಾಗಿದೆ.

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಹೊಸ ಎಮಿಷನ್ ಜಾರಿ ನಂತರ ಬಹುತೇಕ ವಾಹನ ಮಾದರಿಗಳು ಹೊಸ ಎಂಜಿನ್ ಮಾದರಿಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕೂಡಾ ಹೊಸ ನಿಯಮ ಅಧಿಕೃತವಾಗಿ ಜಾರಿಗೆ ಬರುವ ಮುನ್ನವೇ ಬಿಎಸ್-6 ಎಂಜಿನ್ ಪ್ರೇರಿತ ದ್ವಿಚಕ್ರ ವಾಹನಗಳ ಮಾರಾಟಕ್ಕೆ ಚಾಲನೆ ನೀಡಿತ್ತು. ಇದೀಗ ಹೊಸ ವಾಹನ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಹೋಂಡಾ ಕಂಪನಿಯು ಕರೋನಾ ವೈರಸ್ ಭೀತಿ ನಡುವೆಯೂ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 11 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ತನ್ನ ಸರಣಿಯಲ್ಲಿರುವ ಬಹುತೇಕ ದ್ವಿಚಕ್ರ ವಾಹನಗಳನ್ನು ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಿ ಮಾರಾಟಮಾಡುತ್ತಿದೆ.

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಹೋಂಡಾ ನಿರ್ಮಾಣದ ಆಕ್ಟಿವಾ 6ಜಿ, ಆಕ್ಟಿವಾ 125 ಎಫ್ಐ, ಡಿಯೋ, ಗ್ರಾಜಿಯಾ, ಎಸ್‌ಪಿ 125 ಮತ್ತು ಶೈನ್ ಬೈಕ್ ಮಾದರಿಗಳು ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಎಂಜಿನ್ ನಂತರ ಮೈಲೇಜ್ ವಿಚಾರವಾಗಿ ಮತ್ತಷ್ಟು ಗ್ರಾಹಕರನ್ನು ಸೆಳೆಯುತ್ತಿವೆ.

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಇನ್ನು ಕರೋನಾ ವೈರಸ್ ಪರಿಣಾಮ ವಿಧಿಸಲಾದ ಲಾಕ್‌ಡೌನ್ ತೆರವುಗೊಂಡ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡುಬಂದಿದ್ದು, ಹೋಂಡಾ ಸೇರಿದಂತೆ ಹಲವಾರು ಆಟೋ ಕಂಪನಿಗಳು ಗ್ರಾಹಕರನ್ನು ಸೆಳೆಯಲು ವಿವಿಧ ಆಫರ್‌ಗಳ ಜೊತೆಗೆ ಸುಲಭ ಸಾಲ ಸೌಲಭ್ಯಗಳನ್ನು ನೀಡುತ್ತಿವೆ.

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಹೆಚ್‌ಡಿಎಫ್‌ಪಿ, ಎಸ್‌ಬಿಐ ಮತ್ತು ಐಡಿಎಫ್‌ಸಿ ಬ್ಯಾಂಕ್‌ಗಳ ಜೊತೆಗೂಡಿರುವ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸಹ ಶೇ.95 ರಷ್ಟು ಆನ್ ರೋಡ್ ಸಾಲಸೌಲಭ್ಯಗಳನ್ನು ಒದಗಿಸುತ್ತಿದ್ದು, ಎಸ್‌ಬಿಐ ಕ್ರೆಡಿಕ್ ಕಾರ್ಡ್ ಮೂಲಕ ಹೊಸ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದೆ.

MOST READ: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್‌

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಜೊತೆಗೆ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸೀಮಿತ ಅವಧಿಯೊಳಗೆ ಸ್ಕೂಟರ್ ಮತ್ತು ಬೈಕ್ ಖರೀದಿಸುವ ಗ್ರಾಹಕರಿಗೆ ಅತಿ ಸರಳವಾಗ ಇಎಂಐ ಆಫರ್ ಸಹ ನೀಡುತ್ತಿದ್ದು, ಗ್ರಾಹಕರು ಹೊಸ ವಾಹನ ಖರೀದಿ ಮಾಡಿದ ಮೊದಲ 3 ತಿಂಗಳು ಕೇವಲ ಶೇ.50ರಷ್ಟು ಐಎಂಐ ಮಾತ್ರ ಮರುಪಾವತಿಗೆ ಅವಕಾಶ ನೀಡಲಾಗಿದೆ.

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಮೂರು ತಿಂಗಳ ನಂತರ ವಿನಾಯ್ತಿ ನೀಡಲಾದ ಸಾಲ ಮೊತ್ತವು ಕೂಡಾ ಸೇರ್ಪಡೆಯಾಗುವುದರೊಂದಿಗೆ ಇಎಂಐ ದರಗಳನ್ನು ವಿಧಿಸಲಿದ್ದು, ಲಾಕ್‌ಡೌನ್ ಸಮಯದಲ್ಲಿ ಹೊಸ ವಾಹನ ಖರೀದಿಸಿ ಇಎಂಐ ಮರುಪಾವತಿ ಸಾಧ್ಯವಿಲ್ಲ ಎನ್ನುವ ಗ್ರಾಹಕರಿಗೆ ಇದು ಸಾಕಷ್ಟು ಅನುಕೂಲವಾಗಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಬಿಎಸ್-6 ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹೋಂಡಾ

ಹೀಗಾಗಿ ಸಂಕಷ್ಟ ಪರಿಸ್ಥಿತಿಯಲ್ಲೂ ವಾಹನ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿರುವ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಮುಂಬರುವ ದಿನಗಳಲ್ಲಿ ಭಾರೀ ಪ್ರಮಾಣದ ಹೊಸ ವಾಹನ ಮಾರಾಟಕ್ಕೆ ಸಿದ್ದವಾಗಿದ್ದು, ಹೊಸ ಬಿಎಸ್-6 ಎಂಜಿನ್ ನಂತರ ವಾಹನಗಳ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದು ಕೂಡಾ ಗ್ರಾಹಕರಿಗೆ ಹೊಸ ವಾಹನಗಳ ಖರೀದಿ ಕೂಡಾ ಕಷ್ಟಸಾಧ್ಯವಾಗಿದೆ.

More from DriveSpark

Article Published On: Friday, July 24, 2020, 19:19 [IST]
English summary
Honda Sells 11 Lakh BS6 Complaint Two-Wheelers. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+