90 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಶೈನ್
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈ. ಲಿಮಿಟೆಡ್ ಕಂಪನಿಯ ಸಿಬಿ ಶೈನ್ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಕಮ್ಯೂಟರ್ ಬೈಕುಗಳಲ್ಲಿ ಒಂದಾಗಿದೆ.

ಹೋಂಡಾ ಸಿಬಿ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 90 ಲಕ್ಷ ಯೂನಿಟ್‌ಗಳು ಮಾರಾಟವಾಗಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಈ ಸಿಬಿ ಶೈನ್ ಬೈಕನ್ನು ಭಾರತದಲ್ಲಿ 2006ರಲ್ಲಿ ಮೊಟ್ಟ ಮೊದಲ ಬಾರಿಗೆ ಹೋಂಡಾ ಕಂಪನಿಯು ಬಿಡುಗಡೆಗೊಳಿತು. ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ವಿಭಾಗದಲ್ಲಿ ಶೇಕಡಾ 39 ರಷ್ಟು ಹೆಚ್ಚಿನ ಮಾರುಕಟ್ಟೆ ಪಾಲನ್ನು ಹೊಂದಿದೆ.

ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಶೈನ್ 94,413 ಯುನಿಟ್‌ಗಳು ಮಾರಾಟವಾಗಿವೆ. ಇದನ್ನು ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.20 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಪ್ರೈ. ಲಿಮಿಟೆಡ್ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಟ್ಸುಶಿ ಒಗಾಟಾ ಅವರು ಮಾತನಾಡಿ, 90 ಲಕ್ಷ ಹೋಂಡಾ ಸಿಬಿ ಶೈನ್ ಬೈಕುಗಳು ಮಾರಾಟವಾಗುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿರುವುದು ಸಂತಸ ತಂದಿದೆ.

90 ಲಕ್ಷ ಹೋಂಡಾ ಶೈನ್ ಗ್ರಾಹಕರನ್ನು ಹೊಂದಿರುವ ಹೆಮ್ಮೆ ಇದೆ. ನಮ್ಮ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಲಭಿಸಿದೆ. ಅಲ್ಲದೇ ಈ ಬೈಕಿನ ಬೇಡಿಕೆಯು ಹೆಚ್ಚಾಗುತ್ತಿದೆ ಎಂದು ಅವರು ಹೇಳಿದರು.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೋಂಡಾ ಶೈನ್ ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಡ್ರಮ್ ರೂಪಾಂತರದ ಬೆಲೆಯು ರೂ.69,415 ಗಳಾದರೆ, ಡಿಸ್ಕ್ ರೂಪಾಂತರದ ಬೆಲೆಯು ರೂ.74,115 ಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ..

ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳಬಹುದಾದ ಎಂಜಿನ್ ಬಗ್ಗೆ ಹೇಳುವುದಾದರೆ, ಹೋಂಡಾ ಶೈನ್ ಬೈಕಿನಲ್ಲಿ 124 ಸಿಸಿ, ಸಿಂಗಲ್-ಸಿಲಿಂಡರ್, ನಾಲ್ಕು-ಸ್ಟ್ರೋಕ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 10.7 ಬಿಹೆಚ್‍ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಹೋಂಡಾ ಶೈನ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಮಾದರಿಯ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿದೆ.
MOST READ: ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಪ್ರಯತ್ನಿಸುತ್ತದೆ. ಹೋಂಡಾ ಕಂಪನಿಯ ದ್ವಿಚಕ್ರ ವಾಹನಗಳು ಭಾರತದಲ್ಲಿ ಉತ್ತಮವಾಗಿ ಮಾರಟವಾಗಿವೆ. ಇನ್ನು ಹೋಂಡಾ ಶೈನ್ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.


Click it and Unblock the Notifications