ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಸಿಬಿಆರ್ 250ಆರ್ ಬೈಕನ್ನು ಸ್ಥಗಿತಗೊಳಿಸಲಿದೆ. ಮುಂದಿನ ತಿಂಗಳು ಬಿಎಸ್-6 ಮಾಲಿನ್ಯ ನಿಯಮ ಜಾರಿಯಾಗುವುದರಿಂದ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸಿಬಿಆರ್ 250ಆರ್ ಬೈಕನ್ನು ಸ್ಥಗಿತಗೊಳಿಸಲು ಮುಂದಾಗಿದೆ.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಇದೀಗ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸಿಬಿಆರ್ 250ಆರ್ ಬೈಕಿಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಸ್ಥಗಿತಗೊಳಿಸಲಾಗಿದೆ. ದೇಶಾದ್ಯಂತ ಇರುವ ಹೋಂಡಾ ಮೋಟಾರ್‌ಸೈಕಲ್ ಶೋರೂಂಗಳಲ್ಲಿ ಕೆಲವು ಕಡೆಗಳಲ್ಲಿ ಇನ್ನು ಕೂಡ ಸಿಬಿಆರ್ 250 ಆರ್ ಬೈಕ್‍ಗಳ ಸ್ಟಾಕ್‍ಗಳು ಮಾರಾಟವಾಗದೆ ಉಳಿದಿದೆ. ಇದೀಗ ಎಲ್ಲಾ ದ್ವಿಚಕ್ರ ವಾಹನ ಉತ್ಪಾದನ ಕಂಪನಿಗಳು ಮುಂದಿನ ತಿಂಗಳು ಬಿಎಸ್-6 ಮಾಲಿನ್ಯ ನಿಯಮ ಜಾರಿಯಾಗುವುದರಿಂದ ತಮ್ಮ ಸರಣಿಯಲ್ಲಿರುವ ಬಿಎಸ್-4 ದ್ವಿಚಕ್ರ ವಾಹನಗಳಿಗೆ ಭರ್ಜರಿ ರಿಯಾಯಿತಿಯನ್ನು ನೀಡುತ್ತಿದ್ದಾರೆ.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಹೋಂಡಾ ಸಿಬಿಆರ್ 250ಆರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ 2012ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಅಂದಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸುತ್ತಿದ್ದ ಕವಾಸಕಿ ನಿಂಜಾ 250 ಆರ್ ಬೈಕಿಗೆ ಪೈಪೋಟಿಯನ್ನು ನೀಡಲು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಈ ಬೈಕನ್ನು ಬಿಡುಗಡೆಗೊಳಿಸಿದ್ದರು.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಹೋಂಡಾ ಸಿಬಿಆರ್ 250ಆರ್ ಬೈಕಿನಲ್ಲಿ 249 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 269 ಬಿಹೆಚ್‌ಪಿ ಪವರ್ ಮತ್ತು 22.9 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಕೂಡ ಅಳವಡಿಸಲಾಗಿದೆ.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಈ ಬೈಕಿನಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಅಪ್ ಫ್ರಂಟ್ ಮತ್ತು ರೇರ್ ಮೊನೊಶಾಕ್ ಸೆಟಪ್ ಅನ್ನು ಅಳವಡಿಸಲಾಗಿದೆ. ಈ ಬೈಕಿನಲ್ಲಿ ಸುರಕ್ಷತೆಗಾಗಿ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಇನ್ನು ಎರಡು ತುದಿಯಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಈ ಬೈಕ್ ಅನ್ನು ಬಿಎಸ್ - 4 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ 2017ರಲ್ಲಿ ಸ್ಥಗಿತಗೊಳಿಸಲಾಗಿತ್ತು. ನಂತರ 2018ರ ಆಟೋ ಎಕ್ಸ್‌ಪೋದಲ್ಲಿ ಹೊಸ ಗ್ರಾಫಿಕ್ಸ್, ಬಣ್ಣಗಳ ಆಯ್ಕೆ ಮತ್ತು ಎಲ್‌ಇಡಿ ಹೆಡ್‌ಲ್ಯಾಂಪ್‌ನೊಂದಿಗೆ ಪರಿಚಯಿಸಿದ್ದರು.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 286 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ ಇತ್ತೀಚೆಗೆ ಪರಿಚಯಿಸಿದ್ದರು. ಈ ಹೊಂಡಾ ಸಿಬಿಆರ್ 300ಆರ್ ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶ್ವಸಿಯಾಗಿದೆ.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಇದೀಗ ಬಾರತೀಯ ಮಾರುಕಟ್ಟೆಗೂ ಸಿಬಿಆರ್ 250ಆರ್ ಬೈಕ್ ಅನ್ನು ಸ್ಥಗಿತಗೊಳಿಸಿ ಸಿಬಿಆರ್ 300ಆರ್ ಬೈಕನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಆದರೆ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿರುವುದಿಲ್ಲವೆಂದು ಕೆಲವು ವರದಿಗಳು ಪ್ರಕಟವಾಗಿವೆ.

ಸ್ಥಗಿತವಾಗಲಿದೆ ಹೋಂಡಾ ಸಿಬಿಆರ್ 250ಆರ್ ಬೈಕ್

ಹೆಚ್ಚಿನ ಸಾಮರ್ಥ್ಯದ ಮತ್ತು ಪ್ರೀಮಿಯಂ ಬೈಕ್‍ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಚಿಂತಿಸುತ್ತಿದೆ.ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಮುಂದಿನ ದಿನಗಳಲ್ಲಿ ಬಿಡುಗಡೆಗೊಳಿಸಲಿರುವ ಬೈಕ್‍ಗಳನ್ನು ಸ್ಥಳೀಯವಾಗಿ ತಯಾರಿಸುವ ಸಾಧ್ಯತೆಗಳಿದೆ.

Most Read Articles

Kannada
English summary
Honda CBR250R To Be Discontinued From April 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X