ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಕರೋನಾ ವೈರಸ್ ಪರಿಣಾಮ ಆಟೋ ಉದ್ಯಮ ಸಾಕಷ್ಟು ನಷ್ಟ ಅನುಭವಿಸಿದ್ದು, ಲಾಕ್‌ಡೌನ್ ಸಡಿಲಿಕೆ ನಂತರವು ವಾಹನ ಮಾರಾಟ ಪ್ರಮಾಣವು ಮಂದಗತಿಯಲ್ಲಿ ಸಾಗಿದೆ. ಜೊತೆಗೆ ವೈರಸ್ ಭೀತಿಯಿಂದಲೂ ವಾಹನ ಖರೀದಿ ಪ್ರಕ್ರಿಯೆಯಲ್ಲಿ ಹಿನ್ನಡೆ ಉಂಟಾಗುತ್ತಿದ್ದು, ಹೋಂಡಾ ದ್ವಿಚಕ್ರ ವಾಹನಗಳ ಮಾರಾಟದಲ್ಲೂ ಸಾಕಷ್ಟು ಕುಸಿತ ಕಂಡಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಲಾಕ್‌ಡೌನ್ ಸಡಿಲಿಕೆ ನಂತರ ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ಆಟೋ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯೂ ಆರಂಭಗೊಂಡಿದ್ದು, ಹೋಂಡಾ ದ್ವಿಚಕ್ರ ಮಾರಾಟವು ಮಂದಗತಿ ಸಾಗಿದೆ. ಮೇ ಅವಧಿಗಿಂತಲೂ ಜೂನ್ ಅವಧಿಯಲ್ಲಿನ ವಾಹನ ಮಾರಾಟವು ತುಸು ಸುಧಾರಣೆ ಕಂಡಿದ್ದರೂ ಕೂಡಾ ನಿಗದಿತ ಮಟ್ಟದ ವಾಹನ ಮಾರಾಟ ಪ್ರಮಾಣವನ್ನು ತಲುಪಲು ಬಹುತೇಕ ಆಟೋ ಕಂಪನಿಗಳು ಪರದಾಟುತ್ತಿವೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಮೇ ಅವಧಿಯಲ್ಲಿನ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.82 ರಷ್ಟು ನಷ್ಟ ಅನುಭವಿಸಿದ್ದ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಜೂನ್ ಅವಧಿಯಲ್ಲಿ 2,10,879 ಯುನಿಟ್ ಮಾರಾಟ ಮಾಡುವ ಮೂಲಕ ಶೇ.55ರಷ್ಟು ಹಿನ್ನಡೆ ಅನುಭವಿಸಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

2019ರ ಜೂನ್ ಅವಧಿಯಲ್ಲಿ ಒಟ್ಟು 4,76,364 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದ ಹೋಂಡಾ ಕಂಪನಿಯು ಇದೀಗ ಲಾಕ್‌ಡೌನ್ ಸಂಕಷ್ಟದಲ್ಲಿ ಕನಿಷ್ಠ ಮಟ್ಟದ ವಾಹನ ಮಾರಾಟಕ್ಕೂ ಪರದಾಡುತ್ತಿದ್ದು, ಗ್ರಾಹಕರನ್ನು ಆಕರ್ಷಿಸಲು ಹಲವಾರು ಆಫರ್‌ಗಳನ್ನು ಘೋಷಿಸಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕರೋನಾ ವೈರಸ್‌ನಿಂದಾಗಿ ಇಳಿಕೆಯಾಗಿರುವ ವಾಹನ ಮಾರಾಟ ಪ್ರಮಾಣವನ್ನು ಸುಧಾರಣೆಗೊಳಿಸಲು ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಪ್ರಮುಖ ದ್ವಿಚಕ್ರ ವಾಹನ ಮಾದರಿಗಳ ಖರೀದಿ ಮೇಲೆ ಹೆಚ್ಚುವರಿ ವಾರಂಟಿ ಅವಧಿಯ ಆಫರ್ ನೀಡುತ್ತಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಆಯ್ದ ದ್ವಿಚಕ್ರ ವಾಹನ ಖರೀದಿ ಮೇಲೆ ವಿಸ್ತರಿತ ವಾರಂಟಿ ಘೋಷಣೆ ಮಾಡಿದ್ದು, ಸೀಮಿತ ಅವಧಿಯಲ್ಲಿ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ 2 ವರ್ಷಗಳ ಜೊತೆಗೆ ಹೆಚ್ಚುವರಿ 1 ವರ್ಷದ ವಾರಂಟಿ ಅವಧಿಯ ಆಫರ್ ಲಭ್ಯವಾಗಲಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಇನ್ನು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ನಿಯಮ ಅನುಗುಣವಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ತಮ್ಮ ವಾಹನ ಮಾದರಿಗಳನ್ನು ಉನ್ನತೀಕರಿಸಿದ್ದು, ಹೋಂಡಾ ಮೋಟಾರ್‌ಸೈಕಲ್ ಕೂಡಾ ಬಿಎಸ್-6 ಮಾದರಿಯ ಸ್ಕೂಟರ್ ಮತ್ತು ಬೈಕ್‌ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಸದ್ಯ ಮಾರುಕಟ್ಟೆಯಲ್ಲಿ ಆಕ್ಟಿವಾ 6ಜಿ, ಆಕ್ಟಿವಾ 125 ಎಫ್ಐ, ಡಿಯೋ, ಗ್ರಾಜಿಯಾ, ಎಸ್‌ಪಿ 125 ಮತ್ತು ಶೈನ್ ಬೈಕ್ ಮಾದರಿಗಳು ಬಿಎಸ್-6 ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಎಮಿಷನ್ ಜಾರಿಗೆ ಮುನ್ನ ಬಿಡುಗಡೆಯಾಗಲಿರುವ ಹೊಸ ದ್ವಿಚಕ್ರ ವಾಹನಗಳಿಗೆ ಇದುವರೆಗೆ ದಾಖಲೆಯ ಪ್ರಮಾಣದ ಬೇಡಿಕೆ ಹರಿದು ಬಂದಿದೆ.

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಹೋಂಡಾ ನಿರ್ಮಾಣದ ಬಹುತೇಕ ದ್ವಿಚಕ್ರ ವಾಹನಗಳು ಹೊಸ ಎಂಜಿನ್ ಜೋಡಣೆಯ ನಂತರ ದುಬಾರಿ ಬೆಲೆ ಪಡೆದುಕೊಂಡಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.4 ಸಾವಿರದಿಂದ ರೂ. 12 ಸಾವಿರದಷ್ಟು ಹೆಚ್ಚುವರಿ ದರ ಪಡೆದುಕೊಂಡಿವೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಹೋಂಡಾ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.55ರಷ್ಟು ಕುಸಿತ

ಜೊತೆಗೆ ಹೊಸ ವಾಹನಗಳ ಎಂಜಿನ್ ಅಭಿವೃದ್ದಿಯಲ್ಲಿ ಸಾಕಷ್ಟು ಸುಧಾರಣೆ ತಂದಿರುವ ಹೋಂಡಾ ಕಂಪನಿಯು ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆಗೊಳಿಸಿದ್ದು, ಮೈಲೇಜ್ ಪ್ರಮಾಣದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಿದೆ.

Most Read Articles

Kannada
English summary
Honda Two Wheelers India Sales Decline By 55 Percent In June 2020 Details, Read in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X