ವಿವಿಧ ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಕರೋನಾ ವೈರಸ್‌ನಿಂದಾಗಿ ಹೊಸ ವಾಹನಗಳ ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಆಟೋ ಕಂಪನಿಗಳು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಲಾಕ್‌ಡೌನ್‌ನಿಂದಾಗಿ ಏಪ್ರಿಲ್, ಮೇ ಮತ್ತು ಜೂನ್ ಅವಧಿಯಲ್ಲಿ ಭಾರೀ ಪ್ರಮಾಣದ ಮಾರಾಟ ಕುಸಿತ ಕಂಡಿದ್ದ ಆಟೋ ಕಂಪನಿಗಳು ಜುಲೈ ಮತ್ತು ಅಗಸ್ಟ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ಮಾರಾಟದಲ್ಲಿ ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿಟ್ಟುಕೊಂಡಿವೆ. ಈ ನಿಟ್ಟಿನಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಆಟೋ ಕಂಪನಿಗಳು ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಹೋಂಡಾ ಮೋಟಾರ್‌ಸೈಕಲ್ ಕೂಡಾ ಸೆಪ್ಟೆಂಬರ್ ಅವಧಿಗೆ ಗರಿಷ್ಠ ಆಫರ್ ನೀಡುತ್ತಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ದೇಶಾದ್ಯಂತ ದಸರಾ ಮತ್ತು ದೀಪಾವಳಿ ಸಂಭ್ರಮವು ಹತ್ತಿರದಲ್ಲಿರುವುದರಿಂದ ಹೊಸ ವಾಹನಗಳ ಮಾರಾಟವು ಸಾಮಾನ್ಯವಾಗಿ ಏರಿಕೆಯಲ್ಲಿರಲಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ಖರೀದಿ ಸಾಧ್ಯವಾಗದ ಗ್ರಾಹಕರಿಗೆ ಇದೀಗ ಪರಿಸ್ಥಿತಿ ಸುಧಾರಿಸಿರುವುದು ಕೂಡಾ ಖರೀದಿ ಪ್ರಕ್ರಿಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಬಹುತೇಕ ಆಟೋ ಕಂಪನಿಗಳು ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುವ ಗ್ರಾಹಕರ ಆಕರ್ಷಿಸುತ್ತಿದ್ದು, ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಕೂಡಾ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಆಯ್ದ ಬ್ಯಾಂಕ್‌ಗಳ ಕ್ರೆಡಿಕ್ ಕಾರ್ಡ್ ಮೂಲಕ ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ರೂ.5 ಸಾವಿರದಷ್ಟು ಕ್ಯಾಶ್‌ಬ್ಯಾಕ್ ಆಫರ್ ನೀಡಿದ್ದು, ಹೊಸ ದ್ವಿಚಕ್ರ ವಾಹನ ಖರೀದಿ ನಂತರ ಮೊದಲ ಮೂರು ತಿಂಗಳ ಅವಧಿಯಲ್ಲಿನ ಇಎಂಐ ಪಾವತಿಗೂ ಸಮಯದ ವಿನಾಯ್ತಿ ನೀಡಲಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಘೋಷಣೆ ಮಾಡಿರುವ ಕ್ಯಾಶ್‌ಬ್ಯಾಕ್ ಆಫರ್ ಪಡೆಯಲು ಗ್ರಾಹಕರು ಕಡ್ಡಾಯವಾಗಿ ಬ್ಯಾಂಕ್ ಆಫ್ ಬರೋಡಾ ಅಥವಾ ಫೆಡರಲ್ ಬ್ಯಾಂಕ್ ಆಫ್ ಇಂಡಿಯಾದ ಕ್ರೆಡಿಟ್ ಕಾರ್ಡ್‌ಗಳನ್ನೇ ಬಳಕೆ ಮಾಡಬೇಕಿದ್ದು, ಆಕ್ಟಿವಾ 6ಜಿ, ಗ್ರಾಜಿಯಾ 125, ಸಿಡಿ 110 ಡಿಲಕ್ಸ್ ಮತ್ತು ಶೈನ್ ಬೈಕ್ ಮೇಲೆ ಕ್ಯಾಶ್‌ಬ್ಯಾಕ್ ಆಫರ್ ಲಭ್ಯವಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಜೊತೆಗೆ ಗ್ರಾಹಕರು ಕರೋನಾ ವೈರಸ್ ಹಿನ್ನಲೆಯಲ್ಲಿ ಆನ್‌ಲೈನ್ ಬುಕ್ಕಿಂಗ್ ಮೂಲಕ ಮನೆ ಬಾಗಿಲ ಬಳಿಯೇ ವಾಹನ ವಿತರಣೆಯನ್ನು ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿರುವ ಹೋಂಡಾ ಕಂಪನಿಯು ವೈರಸ್ ಭೀತಿಯಿಂದ ಸುರಕ್ಷಿತ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಮುಂಬರುವ ಹಬ್ಬದ ದಿನಗಳಲ್ಲಿ ಹೊಸ ವಾಹನಗಳ ಖರೀದಿ ಹೆಚ್ಚಳವಾಗುವ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ಸಂಖ್ಯೆ ಹೆಚ್ಚಳವಾಗಲಿದ್ದು, ಈ ವೇಳೆ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುತ್ತವೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ದ್ವಿಚಕ್ರ ವಾಹನಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ ಮಾಡಿದ ಹೋಂಡಾ

ಇದಕ್ಕಾಗಿ ಬಹುತೇಕ ಆಟೋ ಕಂಪನಿಗಳು ಹಬ್ಬದ ಋುತುಗಳಲ್ಲಿನ ವಾಹನ ಖರೀದಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಆನ್‌ಲೈನ್ ಮೂಲಕವೇ ವಹಿವಾಟು ನಡೆಸಲು ಯತ್ನಿಸುತ್ತಿದ್ದು, ಮಾರಾಟ ಮಳಿಗೆ ಭೇಟಿ ವಾಹನ ಖರೀದಿ ಮಾಡುವುದಕ್ಕಿಂತಲೂ ಅತಿ ಸರಳವಾದ ಖರೀದಿ ಪ್ರಕ್ರಿಯೆ ಆಯ್ಕೆಗಳನ್ನು ಆನ್‌ಲೈನ್ ಕಾರು ಮಾರಾಟದಲ್ಲಿ ನೀಡುತ್ತಿವೆ.

Most Read Articles

Kannada
English summary
Honda Bike And Scooters Offers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X