ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಜಾವಾ ಮೋಟಾರ್‌ಸೈಕಲ್ ಸಂಸ್ಥೆಯು ಸದ್ಯ ಪೆರಾಕ್ ಬೈಕ್ ಆವೃತ್ತಿಯನ್ನು ಮಾತ್ರವೇ ಬಿಎಸ್-6 ಎಂಜಿನ್‌ನೊಂದಿಗೆ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡಿದ್ದು, ಇದೀಗ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಆವೃತ್ತಿಯನ್ನು ಸಹ ಹೊಸ ಎಮಿಷನ್ ನಿಯಮ ಅನುಸಾರ ಅಭಿವೃದ್ದಿಗೊಳಿಸುತ್ತಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಮಾಹಿತಿಗಳ ಪ್ರಕಾರ, ಬಿಎಸ್-6 ಎಂಜಿನ್ ಪ್ರೇರಿತ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಮಾದರಿಯು ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಆಯ್ದ ಜಾವಾ ಡೀಲರ್ಸ್‌ಗಳಲ್ಲಿ ಹೊಸ ಬೈಕ್ ಖರೀದಿಗೆ ರೂ.5 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸ್ವಿಕರಿಸಲಾಗುತ್ತಿದೆಯೆಂತೆ. ಹೀಗಾಗಿ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿರುವ ಹೊಸ ಬೈಕ್‌ಗಳು ಸದ್ಯ ಬಿಡುಗಡೆಯಾಗಿರುವ ಬಿಎಸ್-6 ಕ್ಲಾಸಿಕ್ 350 ಬೈಕಿಗೆ ಪೈಪೋಟಿ ನೀಡುವ ತವಕದಲ್ಲಿವೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಸಾರ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ಎಮಿಷನ್ ನಿಯಮ ಅನುಸಾರ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳನ್ನು ಉತ್ನತೀಕರಿಸಿ ಬಿಡುಗಡೆ ಮಾಡುತ್ತಿದ್ದು, ಇದೀಗ ಜಾವಾ ಕೂಡಾ ಕ್ಲಾಸಿಕ್ ಮತ್ತು 42 ಬೈಕ್ ಆವೃತ್ತಿಯನ್ನು ಬಿಎಸ್-6 ಎಂಜಿನ್‌ನೊಂದಿಗೆ ಅಭಿವೃದ್ದಿಗೊಳಿಸಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಪೆರಾಕ್ ಬೈಕ್ ಮಾದರಿಯ ಈಗಾಗಲೇ ಬಿಎಸ್-6 ನಿಯಮ ಅನುಸಾರವೇ ಅಭಿವೃದ್ದಿ ಹೊಂದಿದ್ದು, ಹೊಸ ಎಂಜಿನ್ ಪ್ರೇರಿತ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬಿಡುಗಡೆಯ ನಂತರವೇ ಪೆರಾಕ್ ಬೈಕ್ ವಿತರಣೆಗೆ ಚಾಲನೆ ಸಿಗಲಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಇನ್ನು ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಸದ್ಯಕ್ಕೆ ಮೂರು ಹೊಸ ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್‌ ಮಾತ್ರವೇ ಮಾರಾಟವಾಗುತ್ತಿದೆ. ಇದರಲ್ಲಿ ಪೆರಾಕ್ ಕಸ್ಟಮ್ ಬೈಕ್ ಮಾದರಿಯು ಬಿಡುಗಡೆಗೊಂಡಿದ್ದರೂ ಮಾರ್ಚ್ ಅಂತ್ಯಕ್ಕೆ ಗ್ರಾಹಕರ ಕೈಸೆರಲಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.64 ಲಕ್ಷಕ್ಕೆ ಮತ್ತು ಜಾವಾ 42 ಮಾದರಿಯು ರೂ. 1.55 ಲಕ್ಷಕ್ಕೆ ಖರೀದಿಗೆ ಲಭ್ಯವಿದ್ದು, ಎರಡು ಬೈಕ್‌ಗಳಲ್ಲೂ 293-ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದೊಂದಿಗೆ 27-ಬಿಹೆಚ್‍ಪಿ ಮತ್ತು 28-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿವೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಪೆರಾಕ್ ಬೈಕ್ ಮಾದರಿಯು ಬಿಎಸ್-6 ಎಂಜಿನ್ ಪ್ರೇರಿತ 334-ಸಿಸಿ ಎಂಜಿನ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 30-ಬಿಎಚ್‌ಪಿ ಮತ್ತು 31-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.95 ಲಕ್ಷ ಬೆಲೆ ಹೊಂದಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಪೆರಾಕ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಜಾವಾ ಕ್ಲಾಸಿಕ್ ಬೈಕ್‌ಗಳ ಬಿಎಸ್-6 ಆವೃತ್ತಿಯ ಬಿಡುಗಡೆಗೆ ಭರ್ಜರಿ ಸಿದ್ದತೆ

ಮತ್ತೊಂದು ವಿಶೇಷ ಅಂದ್ರೆ, ಪೆರಾಕ್ ಮಾದರಿಯು ಕ್ಲಾಸಿಕ್ ಲೆಜೆಂಡ್ ಕಂಪನಿಯಿಂದಲೇ ಮಾಡಿಫೈಗೊಂಡ ಬೈಕ್ ಆವೃತ್ತಿಯಾಗಲಿದ್ದು, ಡ್ಯುಯಲ್ ಚಾನೆಲ್ ಎಬಿಎಸ್, ಎರಡು ಬದಿಯ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್, ರೌಂಡ್ ಹೆಡ್‌ಲ್ಯಾಂಪ್, ಡ್ಯಯಲ್ ಎಕ್ಸಾಸ್ಟ್ ಫೀಚರ್ಸ್‌ಗಳು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿವೆ.

Most Read Articles

Kannada
English summary
Jawa Classic and 42 BS6 launch in February. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X