ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಹೊಸ ಬಿಎಸ್-6 ಎಮಿಷನ್ ಪ್ರಕಾರ ಜಾವಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಜನಪ್ರಿಯ ಕ್ಲಾಸಿಕ್ ಬೈಕ್ ಮಾದರಿಗಳನ್ನು ಹೊಸ ಎಂಜಿನ್‌ನೊಂದಿಗೆ ಕಳೆದ ಮಾರ್ಚ್ ತಿಂಗಳಿನಲ್ಲೇ ಬಿಡುಗಡೆಗೊಳಿಸಿದ್ದು, ಲಾಕ್‌ಡೌನ್ ಹಿನ್ನಲೆಯಲ್ಲಿ ಹೊಸ ಬೈಕ್‌ಗಳ ವಿತರಣೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಿದೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಮಹೀಂದ್ರಾ ಒಡೆತನದ ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯು 2018ರಲ್ಲಿ ಜಾವಾ ಬೈಕ್‌ಗಳನ್ನು ಹೊಸ ವಿನ್ಯಾಸದೊಂದಿಗೆ ಭಾರತದಲ್ಲಿ ಮರುಮಾರಾಟವನ್ನು ಆರಂಭಗೊಳಿಸಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಜಾವಾ ಕ್ಲಾಸಿಕ್, ಜಾವಾ 42 ಮತ್ತು ಪೆರಾಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಬಿಎಸ್-4 ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದ ಹೊಸ ಬೈಕ್‌ಗಳು ಇದೀಗ ಬಿಎಸ್-6 ಎಮಿಷನ್ ಪ್ರಕಾರ ಉನ್ನತೀಕರಣ ಪಡೆದುಕೊಂಡಿವೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಬಿಎಸ್-6 ಎಂಜಿನ್ ಜೋಡಣೆ ನಂತರ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಬೈಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.73 ಲಕ್ಷ ಬೆಲೆ ಹೊಂದಿದ್ದಲ್ಲಿ, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ.1.82 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಹಾಗೆಯೇ ಜಾವಾ 42 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.60 ಲಕ್ಷ ಬೆಲೆ ಹೊಂದಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ. 1.69 ಲಕ್ಷ ಬೆಲೆ ಪಡೆದುಕೊಂಡಿದೆ. ಈ ಮೂಲಕ ಹೊಸ ಬೈಕ್‌ಗಳ ಬೆಲೆಗೂ ಮತ್ತು ಹಳೆಯ ಆವೃತ್ತಿಯ ಬೈಕ್ ಬೆಲೆಗೂ ಎಕ್ಸ್‌ಶೋರೂಂ ದರದಲ್ಲಿ ರೂ.5 ಸಾವಿರದಿಂದ ರೂ.9,928 ಹೆಚ್ಚಳವಾಗಿದ್ದು, ಆನ್-ರೋಡ್ ದರಗಳಲ್ಲಿ ಇದು ಇನ್ನಷ್ಟು ದುಬಾರಿಯಾಗಿರುತ್ತದೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಬಿಎಸ್-6 ಎಂಜಿನ್ ವೈಶಿಷ್ಟ್ಯತೆ

ಹೊಸ ಜಾವಾ ಮತ್ತು ಜಾವಾ 42 ಬೈಕ್‌ಗಳು ಈ ಹಿಂದಿನಂತೆಯೇ 293-ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, ಲಿಕ್ವಿಡ್ ಕೂಲ್ಡ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಫೀಚರ್ಸ್ ಪಡೆದುಕೊಂಡಿದೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಫ್ಯೂಲ್ ಇಂಜೆಕ್ಷನ್ ಯುನಿಟ್ ಬಳಕೆಯಿಂದಾಗಿ ಬೈಕ್ ಚಾಲನೆ ವೇಳೆ ಸ್ಮೂತ್ ಪರ್ಫಾಮೆನ್ಸ್ ನೀಡುವುದರ ಜೊತೆಗೆ ಮಾಲಿನ್ಯ ಹೊರಸೂವಿಕೆ ಪ್ರಮಾಣದಲ್ಲಿ ಸಾಕಷ್ಟು ಕಡಿತಗೊಂಡಿದೆ. ಇದು ಹೊಸ ಬೈಕಿನ ಪ್ರಮುಖ ಬದಲಾವಣೆಯಾಗಿದ್ದು, ಇನ್ನುಳಿದಂತೆ ಬಹುತೇಕ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದೆ.

MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಇದರ ಜೊತೆಗೆ ಹೊಸ ಬೈಕ್‌ಗಳ ಖರೀದಿ ಮೇಲೆ ವಿಶೇಷ ಲೋನ್ ಆಫರ್ ನೀಡಿರುವ ಜಾವಾ ಮೋಟಾರ್‌ಸೈಕಲ್ ಕಂಪನಿಯು ಶೇ.100 ರಷ್ಟು ಆನ್‌ರೋಡ್ ಸಾಲಸೌಲಭ್ಯದೊಂದಿಗೆ ಮೊದಲ ಮೂರು ತಿಂಗಳು ಇಎಂಐ ಪಾವತಿಯ ಮೇಲೂ ವಿನಾಯ್ತಿ ನೀಡುತ್ತಿದೆ.

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಲಾಕ್‌ಡೌನ್ ಸಂಕಷ್ಟದಲ್ಲಿ ಹೊಸ ವಾಹನ ಇಎಂಐ ಮರುಪಾವತಿಗೆ ತೊಂದರೆಯಾಗದಂತೆ ಮೂರು ತಿಂಗಳ ಕಾಲ ಶೇ.50 ರಷ್ಟು ಮರುಪಾವತಿಗೆ ಅವಕಾಶ ನೀಡಲಾಗಿದ್ದು, ಮೂರು ತಿಂಗಳ ನಂತರ ಸಾಮಾನ್ಯ ದರದಲ್ಲೇ ಇಎಂಐ ಮರುಪಾವತಿ ಮಾಡಬಹುದಾದ ಸೌಲಭ್ಯ ಇದಾಗಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಬಿಎಸ್-6 ಬೈಕ್‌ಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ ಜಾವಾ ಮೋಟಾರ್‌ಸೈಕಲ್

ಇದರಿಂದ ಇಎಂಐ ಮರುಪಾವತಿಗೆ ಗರಿಷ್ಠ ಮೂರು ವರ್ಷಗಳ ಕಾಲಾವಕಾಶ ದೊರೆಯಲ್ಲಿದ್ದು, 2 ವರ್ಷಗಳ ಬದಲಾಗಿ ಮೂರು ವರ್ಷಗಳ ಕಾಲಾವಕಾಶದೊಂದಿಗೆ ಪ್ರತಿ ತಿಂಗಳು 6 ಸಾವಿರ ಇಎಂಐ ಪಾವತಿ ಮಾಡಬಹುದಾಗಿದೆ.

More from DriveSpark

Article Published On: Wednesday, August 5, 2020, 13:16 [IST]
English summary
Jawa & Jawa Forty Two BS6 Deliveries Begin In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+