ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಆಗಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ.

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೊಸ ಸುರಕ್ಷಾ ಮಾರ್ಗಸೂಚಿಯೆಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ.

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ದ್ವಿಚಕ್ರ ವಾಹನಗಳಿಂತ ಕಾರು ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವಾಹನ ಮಾರಾಟಕ್ಕೆ ಚಾಲನೆ ನೀಡಿವೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ಮಹೀಂದ್ರಾ ಒಡೆತನದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಇದೀಗ ಜಾವಾ ಮೋಟಾರ್‌ಸೈಕಲ್‌ಗಳ ಉತ್ಪಾದನೆ ಮತ್ತು ಮಾರಾಟವನ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಟ ಪ್ರಮಾಣದ ಪ್ರೊಟೋಕಾಲ್ ಜಾರಿಗೊಳಿಸಿದೆ.

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ಹೊಸ ಸುರಕ್ಷಾ ಮಾರ್ಗಸೂಚಿಗಳಿಂದಾಗಿ ಪ್ರತಿ ಹಂತದಲ್ಲೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಥರ್ಮಾ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಬಳಕೆಯೂ ಕಡ್ಡಾಯವಾಗಿಸಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ಜೊತೆಗೆ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಬೈಕ್ ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ಆಸಕ್ತ ಗ್ರಾಹಕರಿಗಾಗಿ ಮನೆ ಬಾಗಿಲ ಬಳಿಗೆ ಟೆಸ್ಟ್ ರೈಡ್ ಸಹ ಆಫರ್ ಮಾಡುತ್ತಿದೆ.

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ಈ ವೇಳೆ ಗರಿಷ್ಠ ಸುರಕ್ಷಾ ಸೌಲಭ್ಯಗಳನ್ನು ಅನುಸರಿಸಲಿರುವ ಸಿಬ್ಬಂದಿಯು ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ವಾಹನಗಳನ್ನು ಹಸ್ತಾಂತರಿಸಲಿದ್ದು, ಗ್ರಾಹಕರು ಮತ್ತು ಸಿಬ್ಬಂದಿ ಆರೋಗ್ಯದ ಹೆಚ್ಚು ಕಾಳಜಿವಹಿಸುತ್ತಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ವೈರಸ್ ಭೀತಿ: ಮನೆ ಬಾಗಿಲಿಗೆ ಟೆಸ್ಟ್ ರೈಡ್ ಒದಗಿಸುತ್ತಿದೆ ಜಾವಾ ಮೋಟಾರ್‌ಸೈಕಲ್

ಇನ್ನು ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಒಂದು ಹೊಸ ಸವಾಲಾಗಿ ಪರಿಣಮಿಸಿದ್ದು, ಸುರಕ್ಷತೆಯ ಜೊತೆಗೆ ಆರೋಗ್ಯಕರ ಸ್ಪರ್ಧೆಯು ಭಾರೀ ಬದಲಾವಣೆಗೆ ಕಾರಣವಾಗುತ್ತಿದೆ.

Most Read Articles

Kannada
English summary
Jawa Launches Home Delivery, Doorstep Test Ride Facility. Read in Kanada.
Story first published: Saturday, May 16, 2020, 21:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more