ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಭಾರತದಲ್ಲೂ ಲಾಕ್‌ಡೌನ್ ವಿಧಿಸಿದ ದಿನದಿಂದಲೂ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಆಗಿದ್ದರಿಂದ ಆಟೋ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಬಿಕ್ಕಟ್ಟು ಶುರುವಾಗಿದೆ.

ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿದ್ದರಿಂದ ಭಾರತೀಯ ಆಟೋ ಉದ್ಯಮವು ಸಹ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೊಸ ಸುರಕ್ಷಾ ಮಾರ್ಗಸೂಚಿತಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ.

ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ದ್ವಿಚಕ್ರ ವಾಹನಗಳಿಂತ ಕಾರು ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರದ ಹೊಸ ಸುರಕ್ಷಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವಾಹನ ಮಾರಾಟಕ್ಕೆ ಚಾಲನೆ ನೀಡಿವೆ.

ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ಮಹೀಂದ್ರಾ ಒಡೆತನದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಇದೀಗ ಜಾವಾ ಮೋಟಾರ್‌ಸೈಕಲ್‌ಗಳ ಮಾರಾಟವನ್ನು ಪುನಾರಂಭಿಸಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಟ ಪ್ರಮಾಣದ ಪ್ರೊಟೋಕಾಲ್ ಜಾರಿಗೊಳಿಸಿದೆ.

MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ಹೊಸ ಸುರಕ್ಷಾ ಮಾರ್ಗಸೂಚಿಗಳಿಂದಾಗಿ ಪ್ರತಿ ಹಂತದಲ್ಲೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಥರ್ಮಾ ಸ್ಕ್ರೀನಿಂಗ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಬಳಕೆಯೂ ಕಡ್ಡಾಯವಾಗಿದೆ.

ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ಜೊತೆಗೆ ಮಾರಾಟ ಮಳಿಗೆಗಳಿಗೆ ಗ್ರಾಹಕರ ಆಗಮನ ತಡೆಯುವುದಕ್ಕಾಗಿ ಕಂಪನಿಯೇ ಆನ್‌ಲೈನ್ ಮೂಲಕವೇ ಪತ್ರ ವ್ಯವಹಾರ ಮುಗಿಸಿ ಅಂತಿಮವಾಗಿ ಬೈಕ್ ಉತ್ಪನ್ನಗಳನ್ನು ಗ್ರಾಹಕರ ಬಾಗಿಲುಗಳಿಗೆ ತಲುಪಿಸುತ್ತಿದ್ದು, ವಾಹನಗಳ ವಿತರಣೆ ಸಂದರ್ಭದಲ್ಲೂ ನಂಜು ನಿರೋಧಕ ರಸಾಯನಿಕಗಳಿಂದ ಸ್ವಚ್ಚಗೊಳಿಸಿದ ನಂತರವೇ ಗ್ರಾಹಕರಿಗೆ ಹಸ್ತಾಂತರಿಸಲಿದೆ.

MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?

ಲಾಕ್‌ಡೌನ್ ವಿನಾಯ್ತಿ: ಜಾವಾ ಮೋಟಾರ್‌ಸೈಕಲ್ ಮಾರಾಟಕ್ಕೆ ಚಾಲನೆ..

ಇನ್ನು ಕರೋನಾ ವೈರಸ್‌ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲ ವಲಯದಲ್ಲೂ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಗೆ ತಲುಪಿದೆ. ಹೀಗಿರುವಾಗ ವ್ಯಾಪಾರ ಅಭಿವೃದ್ದಿಯು ಇದೀಗ ಒಂದು ಹೊಸ ಸವಾಲಾಗಿ ಪರಿಣಮಿಸಿದ್ದು, ಸುರಕ್ಷತೆಯ ಜೊತೆಗೆ ಆರೋಗ್ಯಕರ ಸ್ಪರ್ಧೆಯು ಭಾರೀ ಬದಲಾವಣೆಗೆ ಕಾರಣವಾಗಲಿದೆ.

Most Read Articles

Kannada
English summary
Coronavirus Lockdown: Jawa Motorcycle Dealerships Across India Set to Resume Operations. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X