ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರಿಸಿದ ಜಾವಾ ಮೋಟಾರ್‌ಸೈಕಲ್

ಲಾಕ್‌ಡೌನ್ ಸಡಿಲಿಕೆ ಮಾಡಿದ ಬಳಿಕ ಜಾವಾ ಮೋಟಾರ್‌ಸೈಕಲ್ ಕಂಪನಿಯ ಜಾವಾ ಪೆರಾಕ್ ಬೈಕಿನ ಮಾರಾಟದಲ್ಲಿ ಗಮನಾರ್ಹ ಚೇತರಿಕೆ ಕಂಡಿದೆ. ಹಬ್ಬದ ಸೀಸನ್ ಅಕ್ಟೋಬರ್‌ನಲ್ಲಿ ಮಾತ್ರ 2,000ಕ್ಕೂ ಹೆಚ್ಚು ಜಾವಾ ಪೆರಾಕ್ ಬೈಕುಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ.

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯ ಕಸ್ಟಮ್ ಬಾಬರ್‌ ಎಂಬ ಕರ್ಖಾನೆಯಿಂದ 2,000ಕ್ಕೂ ಹೆಚ್ಚು ಜಾವಾ ಪೆರಾಕ್ ಬೈಕುಗಳನ್ನು ವಿತರಿಸಲಾಗಿದೆ. ಜಾವಾ ಮೋಟಾರ್‌ಸೈಕಲ್ ಕಂಪನಿಯು ಇತರ ಎರಡು ಬೈಕುಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಲಿಲ್ಲ. ಇನ್ನು ಈ ಜಾವಾ ಪೆರಾಕ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.94 ಲಕ್ಷಗಳಾಗಿದೆ.

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯು ಹಲವು ವರ್ಷಗಳ ನಂತರ 2018ರಲ್ಲಿ ದೇಶಿಯ ಮಾರುಕಟ್ಟೆಗೆ ಮತ್ತೆ ಕಾಲಿಟ್ಟಿತು. ಜಾವಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಜಾವಾ ಸ್ಟ್ಯಾಂಡರ್ಡ್, ಜಾವಾ 42 ಹಾಗೂ ಜಾವಾ ಪೆರಾಕ್ ಎಂಬ ಮೂರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಪೆರಾಕ್ ಬೈಕಿನಲ್ಲಿ ಫ್ಲೋಟಿಂಗ್ ಸೀಟ್, ಬಾರ್-ಎಂಡ್ ಮೀರರ್ ಮತ್ತು ಸ್ಟಬಿ ಎಕ್ಸಾಸ್ಟ್ ಅನ್ನು ಹೊಂದಿರಲಿದೆ. ಇನ್ನು ಈ ಪೆರಾಕ್ ಬೈಕನ್ನು ಜಾವಾ 42 ಮತ್ತು ಜಾವಾ 300 ಮಾದರಿಗಳಿಗೆ ಹೋಲಿಸಿದರೆ ರೇರ್ ಸಬ್-ಫ್ರೇಮ್ ಮತ್ತು ಸಸ್ಪೆಂಕ್ಷನ್ ಸೆಟಪ್ ವಿಭಿನ್ನವಾಗಿರುತ್ತದೆ. ಪೆರಾಕ್ ಬೈಕಿನಲ್ಲಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸಹ ಹೊಂದಿದೆ.

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಪೆರಾಕ್ ಬೈಕಿನಲ್ಲಿ 334 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್, ಡಿಒಹೆಚ್‌ಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 30 ಬಿಹೆಚ್‌ಪಿ ಪವರ್ ಮತ್ತು 31 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಈ ಎಂಜಿನ್ ನೊಂದಿಗೆ 6-ಸ್ಫೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಿದೆ. ಇನ್ನು ಈ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಅನ್ನು ಒಳಗೊಂಡಿದೆ.

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಪೆರಾಕ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಇನ್ನು ಜಾವಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಪಿಥಾಂಪುರದಲ್ಲಿ ಉತ್ಪಾದನಾ ಕೇಂದ್ರದಲ್ಲಿ ಜಾವಾ ಪೆರಾಕ್ ಬೈಕಿನ ಉತ್ಪಾದನೆಯನ್ನು ಹೆಚ್ಚಿಸಲಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಕ್ಲಾಸಿಕ್ ಲೆಜೆಂಡ್ಸ್ ಮುಂಬರುವ ತಿಂಗಳುಗಳಲ್ಲಿ ಜಾವಾ ಪೆರಾಕ್ ವಿತರಣೆಯಲ್ಲಿ ಮತ್ತಷ್ಟು ಏರಿಕೆ ಮಾಡಬಹುದು. 2020ರ ಡಿಸೆಂಬರ್ ವೇಳೆಗೆ ದೇಶಾದ್ಯಂತ ಒಟ್ಟು ಡೀಲರುಗಳ ಸಂಖ್ಯೆಯನ್ನು 200 ಕ್ಕಿಂತ ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಕ್ಲಾಸಿಕ್ ಲೆಜೆಂಡ್ಸ್ ಜಾವಾ ಪೆರಾಕ್ ಬೈಕನ್ನು ಗ್ರಾಹಕರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತದೆ.

ಹಬ್ಬದ ಸೀಸನ್‌ನಲ್ಲಿ 2,000 ಪೆರಾಕ್ ಬೈಕುಗಳನ್ನು ವಿತರರಿಸಿದ ಜಾವಾ ಮೋಟಾರ್‌ಸೈಕಲ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಜಾವಾ ಪೆರಾಕ್ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಹಾಗೂ ಬೆನೆಲ್ಲಿ ಇಂಪೀರಿಯಲ್ 400 ಬೈಕುಗಳಿಗೆ ಪೈಪೋಟಿ ನೀಡುತ್ತದೆ. ಈ ರೆಟ್ರೊ ಶೈಲಿಯ ಬೈಕ್ ಭಾರತದಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದಿದೆ. ದೀಪಾವಳಿ ಹಬ್ಬದ ವೇಳೆಯಲ್ಲಿ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸುವ ಸಾಧ್ಯತೆಗಳಿದೆ.

Most Read Articles

Kannada
English summary
Jawa Perak Powers Classic Legends Festive Sales With 2,000 Units. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X