ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಮಹೀಂದ್ರಾ ಒಡೆತನದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಜಾವಾ ಮೋಟಾರ್‌ಸೈಕಲ್‌ಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಶೀಘ್ರದಲ್ಲೇ ಎಲೆಕ್ಟ್ರಿಕ್ ಬೈಕ್ ಮಾದರಿಯೊಂದನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಸದ್ಯ ಬಿಎಸ್-6 ವಾಹನ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಎಲೆಕ್ಟ್ರಿಕ್ ಬೈಕ್ ಆವೃತ್ತಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಲೆಕ್ಟ್ರಿಕ್ ಬೈಕ್ ಉತ್ಪಾದನೆ ಮಾಡುತ್ತಿರುವ ಹೊರತಾಗಿ ಹೊಸ ಬೈಕ್ ತಾಂತ್ರಿಕ ಅಂಶಗಳ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿಗಳಿಲ್ಲ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಇವಿ ಬೈಕ್ ಮಾದರಿಯಾಗಿ ಜಾವಾ ಕ್ಲಾಸಿಕ್ ಅಥವಾ ಜಾವಾ 42 ಮಾದರಿಯು ಅಭಿವೃದ್ದಿಗೊಳ್ಳುವ ಸಾಧ್ಯತೆಗಳಿದ್ದು, ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತ್ಯುತ್ತಮ ಬ್ಯಾಟರಿ ಜೋಡಣೆ ಹೊಂದಿರಲಿದೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಹೊಸ ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ 150 ಕಿ.ಮೀ ನಿಂದ 180 ಕಿ.ಮೀ ಮೈಲೇಜ್ ಹೊಂದಿರಲಿದ್ದು, ತೆಗೆದು ಹಾಕಬಹುದಾದ ಬ್ಯಾಟರಿ ಸೌಲಭ್ಯದಿಂದ ಚಾರ್ಜಿಂಗ್‌ಗಾಗಿ ಕಾಯುವ ಸಮಯವನ್ನು ತಗ್ಗಿಸಲಿದೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಜೊತೆಗೆ ದೂರದ ಪ್ರಮಾಣದ ಸಂದರ್ಭದಲ್ಲಿ ಹೆಚ್ಚುವರಿ ಬ್ಯಾಟರಿ ಪ್ಯಾಕ್ ತೆಗೆದುಕೊಂಡು ಹೋಗಲು ಸಾಧ್ಯವಾಗಲಿದ್ದು, ಜಾವಾ ಹೊಸ ಇವಿ ಬೈಕ್ ಮಾದರಿಯು 2021ರ ಆರಂಭದಲ್ಲಿ ಅನಾವರಣಗೊಂಡು ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಇನ್ನು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯು 2018ರಲ್ಲಿ ಜಾವಾ ಬೈಕ್‌ಗಳನ್ನು ಹೊಸ ವಿನ್ಯಾಸದೊಂದಿಗೆ ಭಾರತದಲ್ಲಿ ಮರುಮಾರಾಟವನ್ನು ಆರಂಭಿಸಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಜಾವಾ ಕ್ಲಾಸಿಕ್, ಜಾವಾ 42 ಮತ್ತು ಪೆರಾಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಬಿಎಸ್-4 ಎಂಜಿನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದ ಹೊಸ ಬೈಕ್‌ಗಳು ಇದೀಗ ಬಿಎಸ್-6 ಎಮಿಷನ್ ಪ್ರಕಾರ ಉನ್ನತೀಕರಣ ಪಡೆದುಕೊಂಡಿವೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಬಿಎಸ್-6 ಎಂಜಿನ್ ಜೋಡಣೆ ನಂತರ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಬೈಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.73 ಲಕ್ಷ ಬೆಲೆ ಹೊಂದಿದ್ದಲ್ಲಿ, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ.1.82 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಹಾಗೆಯೇ ಜಾವಾ 42 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.60 ಲಕ್ಷ ಬೆಲೆ ಹೊಂದಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ. 1.69 ಲಕ್ಷ ಬೆಲೆ ಪಡೆದುಕೊಂಡಿದೆ. ಈ ಮೂಲಕ ಹೊಸ ಬೈಕ್‌ಗಳ ಬೆಲೆಗೂ ಮತ್ತು ಹಳೆಯ ಆವೃತ್ತಿಯ ಬೈಕ್ ಬೆಲೆಗೂ ಎಕ್ಸ್‌ಶೋರೂಂ ದರದಲ್ಲಿ ರೂ.5 ಸಾವಿರದಿಂದ ರೂ.9,928 ಹೆಚ್ಚಳವಾಗಿದ್ದು, ಆನ್-ರೋಡ್ ದರಗಳಲ್ಲಿ ಇದು ಇನ್ನಷ್ಟು ದುಬಾರಿಯಾಗಿರುತ್ತದೆ.

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಹೊಸ ಜಾವಾ ಮತ್ತು ಜಾವಾ 42 ಬೈಕ್‌ಗಳು ಈ ಹಿಂದಿನಂತೆಯೇ 293-ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, ಲಿಕ್ವಿಡ್ ಕೂಲ್ಡ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಫೀಚರ್ಸ್ ಪಡೆದುಕೊಂಡಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್‌ಸೈಕಲ್

ಫ್ಯೂಲ್ ಇಂಜೆಕ್ಷನ್ ಯುನಿಟ್ ಬಳಕೆಯಿಂದಾಗಿ ಬೈಕ್ ಚಾಲನೆ ವೇಳೆ ಸ್ಮೂತ್ ಪರ್ಫಾಮೆನ್ಸ್ ನೀಡುವುದರ ಜೊತೆಗೆ ಮಾಲಿನ್ಯ ಹೊರಸೂವಿಕೆ ಪ್ರಮಾಣದಲ್ಲಿ ಸಾಕಷ್ಟು ಕಡಿತಗೊಂಡಿದೆ. ಇದು ಹೊಸ ಬೈಕಿನ ಪ್ರಮುಖ ಬದಲಾವಣೆಯಾಗಿದ್ದು, ಇನ್ನುಳಿದಂತೆ ಬಹುತೇಕ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದೆ.

More from DriveSpark

Article Published On: Tuesday, July 14, 2020, 11:10 [IST]
English summary
Jawa Motorcycle Developing An Electric Bike For Indian Market Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+