Just In
- 26 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಬಿಡುಗಡೆ ಮಾಡಲಿದೆ ಜಾವಾ ಮೋಟಾರ್ಸೈಕಲ್
ಮಹೀಂದ್ರಾ ಒಡೆತನದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಜಾವಾ ಮೋಟಾರ್ಸೈಕಲ್ಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಶೀಘ್ರದಲ್ಲೇ ಎಲೆಕ್ಟ್ರಿಕ್ ಬೈಕ್ ಮಾದರಿಯೊಂದನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಸದ್ಯ ಬಿಎಸ್-6 ವಾಹನ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಗಮನಹರಿಸಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಎಲೆಕ್ಟ್ರಿಕ್ ಬೈಕ್ ಆವೃತ್ತಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಲೆಕ್ಟ್ರಿಕ್ ಬೈಕ್ ಉತ್ಪಾದನೆ ಮಾಡುತ್ತಿರುವ ಹೊರತಾಗಿ ಹೊಸ ಬೈಕ್ ತಾಂತ್ರಿಕ ಅಂಶಗಳ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿಗಳಿಲ್ಲ.

ಇವಿ ಬೈಕ್ ಮಾದರಿಯಾಗಿ ಜಾವಾ ಕ್ಲಾಸಿಕ್ ಅಥವಾ ಜಾವಾ 42 ಮಾದರಿಯು ಅಭಿವೃದ್ದಿಗೊಳ್ಳುವ ಸಾಧ್ಯತೆಗಳಿದ್ದು, ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತ್ಯುತ್ತಮ ಬ್ಯಾಟರಿ ಜೋಡಣೆ ಹೊಂದಿರಲಿದೆ.

ಹೊಸ ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್ಗೆ 150 ಕಿ.ಮೀ ನಿಂದ 180 ಕಿ.ಮೀ ಮೈಲೇಜ್ ಹೊಂದಿರಲಿದ್ದು, ತೆಗೆದು ಹಾಕಬಹುದಾದ ಬ್ಯಾಟರಿ ಸೌಲಭ್ಯದಿಂದ ಚಾರ್ಜಿಂಗ್ಗಾಗಿ ಕಾಯುವ ಸಮಯವನ್ನು ತಗ್ಗಿಸಲಿದೆ.

ಜೊತೆಗೆ ದೂರದ ಪ್ರಮಾಣದ ಸಂದರ್ಭದಲ್ಲಿ ಹೆಚ್ಚುವರಿ ಬ್ಯಾಟರಿ ಪ್ಯಾಕ್ ತೆಗೆದುಕೊಂಡು ಹೋಗಲು ಸಾಧ್ಯವಾಗಲಿದ್ದು, ಜಾವಾ ಹೊಸ ಇವಿ ಬೈಕ್ ಮಾದರಿಯು 2021ರ ಆರಂಭದಲ್ಲಿ ಅನಾವರಣಗೊಂಡು ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಇನ್ನು ಕ್ಲಾಸಿಕ್ ಲೆಜೆಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯು 2018ರಲ್ಲಿ ಜಾವಾ ಬೈಕ್ಗಳನ್ನು ಹೊಸ ವಿನ್ಯಾಸದೊಂದಿಗೆ ಭಾರತದಲ್ಲಿ ಮರುಮಾರಾಟವನ್ನು ಆರಂಭಿಸಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಜಾವಾ ಕ್ಲಾಸಿಕ್, ಜಾವಾ 42 ಮತ್ತು ಪೆರಾಕ್ ಬೈಕ್ಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಬಿಎಸ್-4 ಎಂಜಿನ್ನೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದ ಹೊಸ ಬೈಕ್ಗಳು ಇದೀಗ ಬಿಎಸ್-6 ಎಮಿಷನ್ ಪ್ರಕಾರ ಉನ್ನತೀಕರಣ ಪಡೆದುಕೊಂಡಿವೆ.

ಬಿಎಸ್-6 ಎಂಜಿನ್ ಜೋಡಣೆ ನಂತರ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಬೈಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.73 ಲಕ್ಷ ಬೆಲೆ ಹೊಂದಿದ್ದಲ್ಲಿ, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ.1.82 ಲಕ್ಷ ಬೆಲೆ ಪಡೆದುಕೊಂಡಿದೆ.
MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಹಾಗೆಯೇ ಜಾವಾ 42 ಬೈಕ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.60 ಲಕ್ಷ ಬೆಲೆ ಹೊಂದಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ. 1.69 ಲಕ್ಷ ಬೆಲೆ ಪಡೆದುಕೊಂಡಿದೆ. ಈ ಮೂಲಕ ಹೊಸ ಬೈಕ್ಗಳ ಬೆಲೆಗೂ ಮತ್ತು ಹಳೆಯ ಆವೃತ್ತಿಯ ಬೈಕ್ ಬೆಲೆಗೂ ಎಕ್ಸ್ಶೋರೂಂ ದರದಲ್ಲಿ ರೂ.5 ಸಾವಿರದಿಂದ ರೂ.9,928 ಹೆಚ್ಚಳವಾಗಿದ್ದು, ಆನ್-ರೋಡ್ ದರಗಳಲ್ಲಿ ಇದು ಇನ್ನಷ್ಟು ದುಬಾರಿಯಾಗಿರುತ್ತದೆ.

ಹೊಸ ಜಾವಾ ಮತ್ತು ಜಾವಾ 42 ಬೈಕ್ಗಳು ಈ ಹಿಂದಿನಂತೆಯೇ 293-ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, ಲಿಕ್ವಿಡ್ ಕೂಲ್ಡ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಫೀಚರ್ಸ್ ಪಡೆದುಕೊಂಡಿದೆ.
MOST READ: ಬಜಾಜ್ ಅವೆಂಜರ್ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಫ್ಯೂಲ್ ಇಂಜೆಕ್ಷನ್ ಯುನಿಟ್ ಬಳಕೆಯಿಂದಾಗಿ ಬೈಕ್ ಚಾಲನೆ ವೇಳೆ ಸ್ಮೂತ್ ಪರ್ಫಾಮೆನ್ಸ್ ನೀಡುವುದರ ಜೊತೆಗೆ ಮಾಲಿನ್ಯ ಹೊರಸೂವಿಕೆ ಪ್ರಮಾಣದಲ್ಲಿ ಸಾಕಷ್ಟು ಕಡಿತಗೊಂಡಿದೆ. ಇದು ಹೊಸ ಬೈಕಿನ ಪ್ರಮುಖ ಬದಲಾವಣೆಯಾಗಿದ್ದು, ಇನ್ನುಳಿದಂತೆ ಬಹುತೇಕ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದೆ.