ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಜನಪ್ರಿಯ ಜಾವಾ ಮೋಟಾರ್‌ಸೈಕಲ್ ಕಂಪನಿಯ 2020ರ ಆಗಸ್ಟ್ ತಿಂಗಳ ಮಾರಾಟ ವರದಿಯು ಬಹಿರಂಗವಾಗಿದೆ. ಈ ವರದಿಯ ಪ್ರಕಾರ, ಜಾವಾ ಮೋಟಾರ್‌ಸೈಕಲ್ ಕಂಪನಿಯು 2020ರ ಆಗಸ್ಟ್ ತಿಂಗಳಲ್ಲಿ 1,353 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯ ಮಾರಾಟದ ವರದಿಯನ್ನು ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಾವಾ ಮೋಟಾರ್‌ಸೈಕಲ್ ಕಂಪನಿಯು 1,438 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿತ್ತು. ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.5.91 ಕುಸಿತವನ್ನು ಕಂಡಿದೆ. ಜಾವಾ ಮೋಟಾರ್‌ಸೈಕಲ್ ತನ್ನ ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡುವಲ್ಲಿ ವೈಫಲ್ಯ ಕಾಣುತ್ತಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯು 2020ರ ಜುಲೈ ತಿಂಗಳಲ್ಲಿ 569 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿತು. 2020ರ ಜುಲೈ ತಿಂಗಳ ಮಾರಾಟವನ್ನು ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.137.78 ರಷ್ಟು ಬೆಳವಣಿಗೆಯನ್ನು ಕಂಡಿದೆ.

MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯು ಹಲವು ವರ್ಷಗಳ ನಂತರ 2018ರಲ್ಲಿ ದೇಶಿಯ ಮಾರುಕಟ್ಟೆಗೆ ಮತ್ತೆ ಕಾಲಿಟ್ಟಿತು ಜಾವಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಜಾವಾ ಸ್ಟ್ಯಾಂಡರ್ಡ್, ಜಾವಾ 42 ಹಾಗೂ ಜಾವಾ ಪೆರಾಕ್ ಎಂಬ ಮೂರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಕೆಲವು ದಿನಗಳ ಹಿಂದಷ್ಟೇ ಮಹೀಂದ್ರಾ ಕಂಪನಿಯ ಅಂಗಸಂಸ್ಥೆಯಾದ ಜಾವಾ ಮೋಟಾರ್‌ಸೈಕಲ್, ಯುರೋಪಿಯನ್ ಮಾರುಕಟ್ಟೆಯಲ್ಲಿ ತನ್ನ ವ್ಯವಹಾರವನ್ನು ಆರಂಭಿಸಲು ಮುಂದಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ನೇಪಾಳದಲ್ಲಿ ಡೀಲರ್ ಶಿಪ್ ಗಳನ್ನು ತೆರೆಯಲು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಾರಂಭಿಕ ಹಂತದಲ್ಲಿ ಕಂಪನಿಯು ನೇಪಾಳದಲ್ಲಿ ಜಾವಾ ಸ್ಟ್ಯಾಂಡರ್ಡ್ ಹಾಗೂ ಜಾವಾ 42 ಬೈಕುಗಳನ್ನು ಮಾತ್ರ ಮಾರಾಟ ಮಾಡಲಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಇನ್ನು ಜಾವಾ ಪೆರಾಕ್ ಬೈಕಿನ ವಿತರಣೆಯನ್ನು ಇತ್ತೀಚೆಗೆ ಆರಂಭಿಸಲಾಗಿದೆ. ಕಂಪನಿಯು ಏಪ್ರಿಲ್ 2ರಂದು ಈ ಬೈಕಿನ ವಿತರಣೆಯನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಕರೋನಾ ವೈರಸ್ ಕಾರಣಕ್ಕೆ ಲಾಕ್‌ಡೌನ್ ಜಾರಿಗೊಳಿಸಿದ ಕಾರಣಕ್ಕೆ ವಿತರಣೆಯನ್ನು ಮುಂದೂಡಲಾಗಿತ್ತು.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಈ ಜಾವಾ ಪೆರಾಕ್ ಬೈಕಿನಲ್ಲಿ 334 ಸಿಸಿಯ ಸಿಂಗಲ್ ಸಿಲಿಂಡರ್ ಬಿಎಸ್ -6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 30 ಬಿಹೆಚ್‌ಪಿ ಪವರ್ ಹಾಗೂ 31 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6 ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.

ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಸ್ಟ್ಯಾಂಡರ್ಡ್ ಬಿಎಸ್ 6 ಹಾಗೂ ಜಾವಾ 42 ಬಿಎಸ್ 6 ಬೈಕುಗಳ ವಿತರಣೆಯನ್ನು ಕೂಡ ಇತ್ತೀಚೆಗೆ ಆರಂಭಿಸಲಾಗಿದೆ. ಜಾವಾ ಬೈಕುಗಳು ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡುವಲ್ಲಿ ವಿಫಲವಾಗುತ್ತಿದೆ ಎಂದು ಹೇಳಬಹುದು.

Most Read Articles

Kannada
English summary
Jawa, Forty Two, Perak: Retail Sales at 1,353 Units In August 2020. Read In Kannada.
Story first published: Saturday, September 12, 2020, 17:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X