ಜುಲೈ ತಿಂಗಳಿನಲ್ಲಿ ಕುಸಿತ ಕಂಡ ಜಾವಾ ಬೈಕ್ ಮಾರಾಟ
ಜನಪ್ರಿಯ ಜಾವಾ ಮೋಟಾರ್‌ಸೈಕಲ್ ಕಂಪನಿಯ 2020ರ ಜುಲೈ ತಿಂಗಳ ಮಾರಾಟ ವರದಿಯು ಬಹಿರಂಗವಾಗಿದೆ. ಈ ವರದಿಯ ಪ್ರಕಾರ, ಜಾವಾ ಮೋಟಾರ್‌ಸೈಕಲ್ ಕಂಪನಿಯು 2020ರ ಜುಲೈ ತಿಂಗಳಲ್ಲಿ 569 ಯುನಿಟ್‍ಗಳನ್ನು ಮಾರಾಟ ಮಾಡಿದೆ.

ಇದು ಭಾರತೀಯ ಮಾರುಕಟ್ಟೆಯ ಮಾರಾಟದಲ್ಲಿ ಕೇವಲ 0.07% ರಷ್ಟು ಪಾಲನ್ನು ಹೊಂದಿದೆ. ಜಾವಾ ಮೋಟಾರ್‌ಸೈಕಲ್ ಕಂಪನಿಯ ಮಾರಾಟದ ವರದಿಯನ್ನು ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ ಜಾವಾ ಮೋಟಾರ್‌ಸೈಕಲ್ ಕಂಪನಿಯು 991 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿತ್ತು. ಜಾವಾ ಮೋಟಾರ್‌ಸೈಕಲ್ ತನ್ನ ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡುವಲ್ಲಿ ವೈಫಲ್ಯ ಕಾಣುತ್ತಿದೆ.

ಜಾವಾ ಮೋಟಾರ್‌ಸೈಕಲ್ ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಕಂಪನಿಯು 34,313 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಮಾರುಕಟ್ಟೆಯ ಮಾರಾಟದಲ್ಲಿ 3.92% ಪಾಲನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಜಾವಾ ಮೋಟಾರ್‌ಸೈಕಲ್ ಕಂಪನಿಯು ಹಲವು ವರ್ಷಗಳ ನಂತರ 2018ರಲ್ಲಿ ದೇಶಿಯ ಮಾರುಕಟ್ಟೆಗೆ ಮತ್ತೆ ಕಾಲಿಟ್ಟಿತು ಜಾವಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಜಾವಾ ಸ್ಟ್ಯಾಂಡರ್ಡ್, ಜಾವಾ 42 ಹಾಗೂ ಜಾವಾ ಪೆರಾಕ್ ಎಂಬ ಮೂರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.

ಕೆಲವು ದಿನಗಳ ಹಿಂದಷ್ಟೇ ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯ ಅಂಗಸಂಸ್ಥೆಯಾದ ಜಾವಾ ಮೋಟಾರ್‌ಸೈಕಲ್, ಯುರೋಪಿಯನ್ ಮಾರುಕಟ್ಟೆಯಲ್ಲಿ ತನ್ನ ವ್ಯವಹಾರವನ್ನು ಆರಂಭಿಸಲು ಮುಂದಾಗಿದೆ ಎಂದು ವರದಿಗಳಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಜಾವಾ ಮೋಟಾರ್‌ಸೈಕಲ್ ನೇಪಾಳದಲ್ಲಿ ಡೀಲರ್ ಶಿಪ್ ಗಳನ್ನು ತೆರೆಯಲು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಾರಂಭಿಕ ಹಂತದಲ್ಲಿ ಕಂಪನಿಯು ನೇಪಾಳದಲ್ಲಿ ಜಾವಾ ಸ್ಟ್ಯಾಂಡರ್ಡ್ ಹಾಗೂ ಜಾವಾ 42 ಬೈಕುಗಳನ್ನು ಮಾತ್ರ ಮಾರಾಟ ಮಾಡಲಿದೆ.

ಇನ್ನು ಜಾವಾ ಪೆರಾಕ್ ಬೈಕಿನ ವಿತರಣೆಯನ್ನು ಇತ್ತೀಚೆಗೆ ಆರಂಭಿಸಲಾಗಿದೆ. ಕಂಪನಿಯು ಏಪ್ರಿಲ್ 2ರಂದು ಈ ಬೈಕಿನ ವಿತರಣೆಯನ್ನು ಆರಂಭಿಸಲು ನಿರ್ಧರಿಸಿತ್ತು. ಆದರೆ ಕರೋನಾ ವೈರಸ್ ಕಾರಣಕ್ಕೆ ಲಾಕ್‌ಡೌನ್ ಜಾರಿಗೊಳಿಸಿದ ಕಾರಣಕ್ಕೆ ವಿತರಣೆಯನ್ನು ಮುಂದೂಡಲಾಗಿತ್ತು.
MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಈ ಜಾವಾ ಪೆರಾಕ್ ಬೈಕಿನಲ್ಲಿ 334 ಸಿಸಿಯ ಸಿಂಗಲ್ ಸಿಲಿಂಡರ್ ಬಿಎಸ್ -6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 30 ಬಿಹೆಚ್‌ಪಿ ಪವರ್ ಹಾಗೂ 31 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6 ಸ್ಪೀಡಿನ ಗೇರ್‌ಬಾಕ್ಸ್ ಜೋಡಿಸಲಾಗಿದೆ.

ಜಾವಾ ಸ್ಟ್ಯಾಂಡರ್ಡ್ ಬಿಎಸ್ 6 ಹಾಗೂ ಜಾವಾ 42 ಬಿಎಸ್ 6 ಬೈಕುಗಳ ವಿತರಣೆಯನ್ನು ಕೂಡ ಇತ್ತೀಚೆಗೆ ಆರಂಭಿಸಲಾಗಿದೆ. ಜಾವಾ ಬೈಕುಗಳು ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡುವಲ್ಲಿ ವಿಫಲವಾಗುತ್ತಿದೆ.


Click it and Unblock the Notifications








